ಕಲ್ಯಾಣದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ
Team Udayavani, Apr 19, 2021, 7:29 PM IST
ಶಶಿಕಾಂತ ಬಂಬುಳಗೆ
ಬೀದರ: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಮುಗಿಯುತ್ತಿದ್ದಂತೆ ಈಗ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡುವೆಯೂ ಮತಗಳ ವಿಭಜನೆ ಲೆಕ್ಕದಲ್ಲಿ ಕಾಂಗ್ರೆಸ್‌ಗೆ ಲಾಭವಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಬಸವಣ್ಣನ ಕರ್ಮಭೂಮಿಯಲ್ಲಿ ಹಿಡಿತ ಸಾ ಧಿಸ ಬೇಕೆಂದು ಪಣ ತೊಟ್ಟು ಆಡಳಿತಾರೂಢ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಚುನಾವಣೆ ಪ್ರಚಾರ ನಡೆಸಿವೆ.
ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ, ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮತದಾನದ ಕೊನೆ ಹಂತದವರೆಗೂ ವೋಟಿನ ಬೇಟೆ ನಡೆಸಿದ್ದು, ಮತದಾರರು ಈಗ ಯಾರ ಕೈ ಹಿಡಿದಿದ್ದಾರೆ ಎಂಬ ಆಂತರಿಕ ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಮತದಾನ ನಡೆದ ಮತಗಟ್ಟೆ ಕೇಂದ್ರಗಳ ಪಟ್ಟಿ ಹಿಡಿದಿರುವ ಮುಖಂಡರು ಗೆಲುವಿನ ಲೆಕ್ಕಾಚಾರ ನಡೆಸಿದ್ದಾರೆ.
ಬೂತ್ ಮಟ್ಟದಲ್ಲಿ ಜಾತಿವಾರು ಮತದಾರರ ಸಂಖ್ಯೆ, ಯಾವ ಪಕ್ಷಕ್ಕೆ ಬೆಂಬಲ ಸಿಕ್ಕಿದೆ ಎಂಬಿತ್ಯಾದಿ ಪ್ರಶ್ನೆ ಮುಂದಿಟ್ಟುಕೊಂಡು ಮಾಹಿತಿ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಆಂತರಿಕ ಸಮೀಕ್ಷೆ, ವರದಿ ನೋಡಿ ಕಾರ್ಯಕರ್ತರು ನಮ್ಮದೇ ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ಬೀಗುತ್ತಿದ್ದಾರೆ. ಆದರೆ ಇದಕ್ಕೆ ಸ್ಪಷ್ಟ ಉತ್ತರ ಮಾತ್ರ ಮೇ 2ರ ಫಲಿತಾಂಶದಂದೇ ಸಿಗಲಿದೆ. ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ.4 ಮತದಾನ (ಶೇ.61.49) ಕಡಿಮೆ ದಾಖಲಾಗಿದ್ದು, ಮತ ವಿಭಜನೆ ಸಾಧ್ಯತೆ ದಟ್ಟವಾಗಿದ್ದು, ಬಿಜೆಪಿಗೆ ಹೊಡೆತ ಬೀಳಬಹುದು ಎನ್ನಲಾಗುತ್ತಿದೆ.
ಬಿಜೆಪಿ ಸಾಂಪ್ರದಾಯಿಕ ಲಿಂಗಾಯತ ಮತ್ತು ಮರಾಠಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧೆಯಿಂದ ನಗರ ಪ್ರದೇಶದಲ್ಲಿ ಈ ಮತಗಳ ವಿಭಜನೆಯಾಗಿದೆ. ಗ್ರಾಮೀಣ ಭಾಗದಲ್ಲಿ ಈ ಸಮುದಾಯದ ಮತ ಪ್ರಮಾಣ ಈ ಬಾರಿ ಕಡಿಮೆಯಾಗಿದ್ದು, ಇದು ಬಿಜೆಪಿ ಮತಗಳ ಕುಸಿತಕ್ಕೆ ಕಾರಣವಾಗಬಹುದು. ಮಾಜಿ ಸಚಿವ ಪಿಜಿಆರ್ ಸಿಂಧ್ಯಾ “ಕೈ’ ಪರ ಪ್ರಚಾರ ಹಿನ್ನೆಲೆ ಪಕ್ಷಕ್ಕೆ ವರ ಆಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕಾಂಗ್ರೆಸ್ ಮುಸ್ಲಿಂ ಸಮುದಾಯದ ಮತ ನೆಚ್ಚಿಕೊಂಡಿದೆ. ಆದರೆ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ ಸ್ಪರ್ಧೆಯಿಂದ “ಕೈ’ಗೆ ಹಿನ್ನಡೆಯಾಗಬಹುದು ಎಂಬ ಲೆಕ್ಕ ತಪ್ಪಿದಂತಿದೆ. ನಗರ ಪ್ರದೇಶದಲ್ಲಿ ಮುಸ್ಲಿಂ ವೋಟ್ ಗಳು ಜೆಡಿಎಸ್‌ನತ್ತ ಬಿದ್ದಿದ್ದರೂ ಹಳ್ಳಿಗಳಲ್ಲಿ ಕಾಂಗ್ರೆಸ್ ನತ್ತ ವಾಲಿದೆ. ಜತೆಗೆ ಕೋಲಿ-ಕಬ್ಬಲಿಗ ಮತಗಳು ಸಹ “ಕೈ’ ಹಿಡಿದಿವೆ ಎಂಬ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.