14 ದಿನಗಳ ಕರ್ಫ್ಯೂ; ಮಾರ್ಗಸೂಚಿ ಉಲ್ಲಂಘಿಸಿದರೆ ಹುಷಾರ್‌


Team Udayavani, Apr 28, 2021, 6:52 PM IST

28-7

ಯಾದಗಿರಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ಏ.27ರ ರಾತ್ರಿಯಿಂದ 14 ದಿನಗಳವರೆಗೆ ಜಿಲ್ಲಾದ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಜಿಲ್ಲೆಯಲ್ಲಿ ಸಂಪೂರ್ಣ ಕರ್ಫ್ಯೂ ಮಾಡಲಾಗುತ್ತದೆ ಎಂದು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು. ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ತುರ್ತು ಸೇವೆಗಳಾದ ಆಸ್ಪತ್ರೆ, ಔಷಧಿ , ಅಗ್ನಿ ಶಾಮಕ ಸೇವೆಗಳಿಗೆ ಅನುಮತಿಯಿದೆ. ಕೋವಿಡ್‌ ಸೋಂಕು ಹರಡುವ ಸರಪಳಿ ಮುರಿಯಲು ಪ್ರಸ್ತುತ ಪರಿಸ್ಥಿತಿಗೆ ಹೆಚ್ಚು ಆಕ್ರಮಣಕಾರಿ ನಿಯಂತ್ರಣ ಕ್ರಮಗಳ ಕುರಿತು ಸರ್ಕಾರ ಮಾರ್ಗಸೂಚಿಯಂತೆ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್‌ 24ರಡಿ ನೀಡಿದ ಅಧಿ ಕಾರಗಳನ್ವಯ ಸೋಂಕಿನ ಪ್ರಸರಣ ಸರಪಳಿ ಮುರಿಯಲು ಮೇ 12ರ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈಗಾಗಲೇ ಮದುವೆಗೆ ಷರತ್ತುಗಳಿಗೆ ಒಳಪಟ್ಟು 50 ಜನರಿಗೆ ಅವಕಾಶವಿದ್ದು, ಅಂತ್ಯಕ್ರಿಯಿಗೆ 5 ಜನ ಭಾಗವಹಿಸಬಹುದು ಎಂದರು.

ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಡೈರಿ ಮತ್ತು ಹಾಲಿನ ಬೂತ್‌ ಗಳು, ಮಾಂಸ, ಮೀನು ಮತ್ತು ಪ್ರಾಣಿಗಳ ಮೇವುಗಳೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಗ್ಗೆ 6ರಿಂದ 10ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಗಳಿಗೆ ಅನುಮತಿಸಲಾಗಿದೆ. ಸ್ವತಂತ್ರ, ಪ್ರತ್ಯೇಕ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಪಾರ್ಸೆಲ್‌ಗೆ ಅವಕಾಶವಿದೆ ಎಂದು ವಿವರಿಸಿದರು.

ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ (ಹಾಲ್‌ ಟಿಕೆಟ್‌) ಟ್ರಾವೆಲ್‌ ಪಾಸ್‌ ಆಗಿ ಬಳಸಬಹುದು. ಚಾಲ್ತಿಯಲ್ಲಿರುವ ಟ್ಯಾಕ್ಸಿ, ಆಟೋ ರಿûಾ, ಇತ್ಯಾದಿ ಸೇರಿದಂತೆ ಸಾರಿಗೆ ವಿಧಾನ ಬಳಸಲು ಅನುಮತಿಸಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಸಂಬಂಧಪಟ್ಟ ಕಟ್ಟಡ ನಿರ್ಮಾಣ ಸಂಸ್ಥೆಯವರು ಪಾಸ್‌ ನೀಡುವುದು, ತುರ್ತು ಸಂದರ್ಭಗಳಲ್ಲಿ ರೋಗಿಗಳು ಮತ್ತು ಅವರ ಪರಿಚಾರಕರು, ವ್ಯಕ್ತಿಗಳ ಸಂಚಾರಕ್ಕೆ ಅನುಮತಿಸಲಾಗಿದೆ. ವ್ಯಾಕ್ಸಿನೇಷನ್‌ ಮತ್ತು ಕೋವಿಡ್‌ ಪರೀಕ್ಷೆ ಉದ್ದೇಶದ ಸಂಚಾರಕ್ಕಾಗಿ ಕನಿಷ್ಠ ಪುರಾವೆಗಳೊಂದಿಗೆ ಅನುಮತಿಸಲಾಗಿದೆ ಎಂದರು. ಈ ವೇಳೆ ಅಪರ ಜಿಲ್ಲಾ ಧಿಕಾರಿ ಪ್ರಕಾಶ ರಜಪೂತ್‌, ಹಿರಿಯ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಯಾದಗಿರಿ ನಗರಸಭೆ ಪೌರಾಯುಕ್ತ ಬಿ.ಟಿ. ನಾಯಕ ಸೇರಿದಂತೆ ಇತರರು ಇದ್ದರು.

ಸೈದಾಪುರ: ಕೊರೊನಾ ಬಗ್ಗೆ ಜನರಲ್ಲಿ ಭಯ ಬೇಡ. ಅದನ್ನು ಎದುರಿಸಲು ಬೇಕಾದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸಿದರೆ ಸಾಕು ಎಂದು ಗ್ರಾಪಂ ಅಭಿವೃದ್ಧಿ ಅ ಕಾರಿ ಮೌಲಾಲಿ ಐಕೂರು ಹೇಳಿದರು. ಪಟ್ಟಣದ ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಮ ಮಟ್ಟದ ಕಾರ್ಯಪಡೆ ರಚನೆ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಪಡೆಯಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಕಂದಾಯ, ಪೊಲೀಸ್‌, ಆರೋಗ್ಯ ಇಲಾಖೆ ಹಾಗೂ ಪ್ರತಿ ಗ್ರಾಮದ ಒಬ್ಬ ಸದಸ್ಯರನ್ನೊಳಗೊಂಡ ಒಂದು ತಂಡವಿರುತ್ತದೆ. ಈ ತಂಡ ಪ್ರತಿಯೊಂದು ಗ್ರಾಮಗಳಲ್ಲಿ ಮತ್ತು ಸುತ್ತಮುತ್ತ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸಿ ಲಸಿಕೆ ತೆಗೆದುಕೊಳ್ಳಲು ಮನವೊಲಿಸಬೇಕು. ಅಲ್ಲದೇ ಅವರಿಗೆ ಮುನ್ನಚ್ಚರಿಕೆ ಕ್ರಮ ಪಾಲಿಸುವಂತೆ ತಿಳಿಸಬೇಕು ಎಂದರು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾ ಧಿಕಾರಿ ಡಾ| ಸತ್ಯಪ್ರಕಾಶ ಮಾತನಾಡಿ, ಕೊರೊನಾ ಸಾಂಕ್ರಾಮಿಕ ರೋಗ. ಆದ್ದರಿಂದ ಜನರು ಭಯ ಪಡದೇ ಆರೋಗ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು. ರೋಗ ಲಕ್ಷಣಗ್ಳು ಕಂಡು ಬಂದರೆ ತಕ್ಷಣ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದರು. ಈ ವೇಳೆ ಗ್ರಾಪಂ ಅಧ್ಯಕ್ಷ ಮಾಳಪ್ಪ ಅರಿಕೇರಿ, ಉಪಾಧ್ಯಕ್ಷೆ ನೇತ್ರಾವತಿ ತಿಮ್ಮಾರೆಡ್ಡಿ, ಕಂದಾಯ ಇಲಾಖೆ ಪ್ರತಿನಿಧಿ , ಗ್ರಾಪಂ ಸದಸ್ಯರು, ಅಂಗನವಾಡಿ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.