ಯಾದಗಿರಿ: 688 ವರದಿ ಬಾಕಿ
Team Udayavani, Jul 6, 2020, 9:29 AM IST
ಯಾದಗಿರಿ: ನೋವೆಲ್ ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಜು.5ರವರೆಗೆ ಒಟ್ಟು 971 ವರದಿ ಪಾಸಿಟಿವ್ ಬಂದಿವೆ. ರವಿವಾರ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ರವಿವಾರದ 120 ನೆಗೆಟಿವ್ ವರದಿ ಸೇರಿ ಈವರೆಗೆ 25663 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 269 ಮಾದರಿಗಳು ಸೇರಿದಂತೆ 688 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 971 ವ್ಯಕ್ತಿಗಳ ಪೈಕಿ ರವಿವಾರದ 3 ಜನ ಸೇರಿ ಜು.5ರವರೆಗೆ ಒಟ್ಟು 868 ಜನ ಗುಣಮುಖರಾಗಿದ್ದಾರೆ. ಉಳಿದ 102 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1916 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 3181 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 90 ಕಂಟೈನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೈನ್ಮೆಂಟ್ ಝೋನ್ ಗಳನ್ನು ತೆರವುಗೊಳಿಸಲಾಗಿದೆ.
ಹೊಸ ಜಿಲ್ಲಾಸ್ಪತ್ರೆಯಲ್ಲಿ 36 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಸುರಪುರ ಕೋವಿಡ್ ಕೇರ್ ಸೆಂಟರ್‌ನಲ್ಲಿ 11 ಜನರನ್ನು ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 57 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 9 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಒಟ್ಟು 559 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.