ಯಾದಗಿರಿ: 9602 ವರದಿ ಬಾಕಿ
Team Udayavani, Jun 3, 2020, 6:31 AM IST
ಯಾದಗಿರಿ: ನೋವೆಲ್ ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಮಂಗಳವಾರ 5 ಪಾಸಿಟಿವ್ ಸೇರಿದಂತೆ ಜೂನ್ 2ರವರೆಗೆ ಒಟ್ಟು 290 ವರದಿ ಪಾಸಿಟಿವ್ ಬಂದಿವೆ.
ಮಂಗಳವಾರದ 611 ನೆಗೆಟಿವ್ ವರದಿ ಸೇರಿ ಈವರೆಗೆ 8074 ಮಾದರಿಗಳ ವರದಿ ನೆಗೆಟಿವ್ ಬಂದಿವೆ. 218 ಜನರ ಹೊಸ ಮಾದರಿ ಸೇರಿ 9602 ಜನರ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 765 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2093 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 5 ಕಂಟೇನ್ಮೆಂಟ್ ಝೋನ್ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 95 ಜನರನ್ನು ಪತ್ಯೇಕವಾಗಿರಿಸಲಾಗಿದೆ.
ಶಹಾಪುರ ಕೊರೊನಾ ಕೇರ್ ಸೆಂಟರ್‌ನಲ್ಲಿ 61 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್‌ನಲ್ಲಿ 35 ಮತ್ತು ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 86 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 71 ಇನ್ ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್ ಗಳಲ್ಲಿ ಒಟ್ಟು 3391 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.