ಒಂದು ಬಿಟ್ಟರೇ ಮತ್ತೊಂದಿಲ್ಲ ..
ನೂತನ ತಾಲೂಕು ಅನುಷ್ಠಾನಕ್ಕಿಲ್ಲ ಅನುದಾನತಿಂಥಿಣಿ ಬ್ರಿಡ್ಜ್ ಬಳಿ ಜಲಾಶಯ ನಿರ್ಮಾಣ ಉದ್ದೇಶ
Team Udayavani, Mar 6, 2020, 12:29 PM IST
ಯಾದಗಿರಿ: ಗಡಿ ಜಿಲ್ಲೆ ಯಾದಗಿರಿ ಜಿಲ್ಲಾ ಕೇಂದ್ರವಾಗಿ 10 ವರ್ಷ ಕಳೆದರೂ ಸಮರ್ಪಕ ಅಭಿವೃದ್ಧಿ ಕಂಡಿಲ್ಲ. ಇದುವರೆಗೆ ಆಳುವ ಸರ್ಕಾರಗಳು ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸುತ್ತ ಬಂದಿವೆ. ಇದೀಗ ತಾವೇ ಘೋಷಿಸಿದ್ದ ಜಿಲ್ಲೆಯ ಅಭಿವೃದ್ಧಿ ಮರೆತು ಯಡಿಯೂರಪ್ಪ ಅವರೂ ಅದೇ ಮಾರ್ಗದಲ್ಲಿ ಸಾಗಿದ್ದಾರೆ ಎನ್ನುವ ಅಸಮಾಧಾನ ಜಿಲ್ಲೆಯಲ್ಲಿ ವ್ಯಕ್ತವಾಗಿದೆ.
ಬಜೆಟ್ ಜಿಲ್ಲೆಯ ಜನರಲ್ಲಿ ತೀವ್ರ ನಿರಾಸೆ ಮೂಡಿಸುವಂತೆ ಮಾಡಿದೆ. ಮಹತ್ವಾಕಾಂಕ್ಷೆ ಜಿಲ್ಲೆಯ ಶಿಕ್ಷಣ, ಉದ್ಯೋಗ, ನೀರಾವರಿ, ಕೈಗಾರಿಕೆ ವಲಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಯಾವುದೇ ಅನುದಾನ ಮೀಸಲಿರಿ ಸದೇ ಸಂಪೂರ್ಣ ನಿರ್ಲಕ್ಷಿಸಲಾಗಿದೆ ಎಂದು ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಲದ ಬಜೆಟ್‌ನಲ್ಲಿ ಗಡಿ ಜಿಲ್ಲೆಗೆ ಏನೂ ವಿಶೇಷ ಕೊಡುಗೆ ಸಿಕ್ಕಿಲ್ಲ. ಆದರೂ ಈ ಭಾಗದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ದೂರದೃಷ್ಟಿಯಿಂದ ಯೋಜನೆಯೊಂದನ್ನು ಘೋಷಿಸಲಾಗಿದೆ. ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಭಾಗದ ಜನರಿಗೆ ಕುಡಿಯುವ ನೀರಿನ ಸರಬರಾಜಿಗೆ ಅನುಕೂಲವಾಗುವಂತೆ ತಿಂಥಿಣಿ ಬ್ರಿಡ್ಜ್ ಬಳಿ ಕೃಷ್ಣಾ ನದಿಗೆ ಜಲಾಶಯ ನಿರ್ಮಿಸಲು ಯೋಜನಾ ವರದಿ ತಯಾರಿಸಲು ಸರ್ಕಾರ ಘೋಷಿಸಿದೆ.
ಪ್ರಮುಖವಾಗಿ ನೂತನ ಗುರುಮಠಕಲ್, ವಡಗೇರಾ ಹಾಗೂ ಹುಣಸಗಿ ತಾಲೂಕು ಕೇಂದ್ರಗಳು ಘೋಷಣೆಯಾಗಿ ಎರಡು ವರ್ಷ ಕಳೆದರೂ ತಹಶೀಲ್ದಾರ್ ಕಚೇರಿ ಹೊರತು ಪಡಿಸಿ ಬೇರಾವ ಇಲಾಖೆಗಳ ಕಚೇರಿಗಳು ಕಾರ್ಯಾರಂಭವಾಗಿಲ್ಲ. ಈ ಬಜೆಟ್‌ನಲ್ಲಾದರೂ ಅನುದಾನ ನಿಗದಿ ಮಾಡಿ ನೂತನ ತಾಲೂಕು ಕೇಂದ್ರಗಳ ಅನುಷ್ಠಾನಕ್ಕೆ ಒತ್ತು ನೀಡುತ್ತಾರೆ ಎನ್ನುವ ಜನರ ಆಸೆಗೆ ಸರ್ಕಾರ ತಣ್ಣೀರೆರೆಚಿದೆ. ಕೆಂಭಾವಿ ನೂತನ ತಾಲೂಕು ಕೇಂದ್ರ ಘೋಷಣೆಗೆ ಮಾಡುವಂತೆ ಆ ಭಾಗದ ಜನರ ಬಹು ವರ್ಷಗಳ ಬೇಡಿಕೆಯಾಗಿತ್ತು. ಅದು ಕೂಡ ಈಡೇರಿಲ್ಲ.
ಇ ಂ ಜಿ ನಿ ¿ ು ರಿ ಂ ಗ … ಕಾಲೇಜು ಬಹು ವರ್ಷದ
ಬೇಡಿಕೆಗೆ ಈ ಹಿಂದಿನ ಸರ್ಕಾರಗಳಿಂದ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರವೂ ಯಾದಗಿರಿಯನ್ನು ನಿರ್ಲಕ್ಷಿಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ತೋಟಗಾರಿಕೆ ಅಭಿವೃದ್ಧಿಗೆ ಪೂರಕವಾಗಬಹುದಾದ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅನುಷ್ಠಾನವಾಗದೇ ಘೋಷಣೆಗೆ ಮಾತ್ರ ಸೀಮಿತವಾಗಿ ಉಳಿದಿದೆ.
ಸರ್ಕಾರದ ನೂತನ ಸಚಿವರು ಇಸ್ರೇಲ್ ಮಾದರಿ ಕೃಷಿಯನ್ನು ಕೈಬಿಡಲ್ಲ ಎನ್ನುವ ವಿಚಾರ ಹೇಳಿದ್ದರೂ ಅದಕ್ಕೆ ಯಾವುದೇ ಅನುದಾನ ಮೀಸಲಿರಿಸಿಲ್ಲ. ಪ್ರಸಕ್ತ ಬಜೆಟ್‌ನಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ನಗರಕ್ಕೆ ಕುಡಿಯುವ ನೀರಿನ ಯೋಜನೆ, ಯಾದಗಿರಿ ಜಿಲ್ಲಾಸ್ಪತ್ರೆಯನ್ನು ಸೂಪರ್ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯನ್ನಾಗಿಸುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಲ್ಲಿ ಜಿಲ್ಲೆಯ ಕೊನೆ ಭಾಗದ ರೈತರಿಗೆ ನೀರು ತಲುಪಿಸಲು ಕೆಬಿಜೆಎನ್‌ಎಲ್ ಕಾಲುವೆಗಳ ಎತ್ತರಕ್ಕೆ ಬಜೆಟ್‌ನಲ್ಲಿ
1 ಸಾವಿರ ಕೋಟಿ ರೂ. ಮೀಸಲಿಡುವುದು.
ಗುರುಮಠಕಲ್ ಮತಕ್ಷೇತ್ರದ 60 ಕೆರೆಗಳಿಗೆ ನೀರು ತುಂಬುವ ಯೋಜನೆಗೆ 480 ಕೋಟಿ ರೂ. ಮೀಸಲಿಡುವುದು. ಯಾದಗಿರಿ ಭುವನೇಶ್ವರಿ ಬೆಟ್ಟ, ಗವಿಸಿದ್ಧಲಿಂಗೇಶ್ವರ ಪ್ರವಾಸಿ ತಾಣ ಅಭಿವೃದ್ಧಿಗೆ 30 ಕೋಟಿ ರೂ. ಬೇಡಿಕೆ. ಜಿಲ್ಲೆಯ ಶಹಾಪುರ ತಾಲೂಕು ಶಿರವಾಳ ಐತಿಹಾಸಿಕ ಸ್ಮಾರಕಗಳ ಅಭಿವೃದ್ಧಿಗೆ ಆದ್ಯತೆ ನೀಡುವುದು. ಜಿಲ್ಲಾ ಕೇಂದ್ರದಲ್ಲಿ ಟ್ರೀ ಪಾರ್ಕ್ ನಿರ್ಮಾಣ. ಇಂಜಿನಿಯರಿಂಗ್ ಮತ್ತು ಪಶುವೈದ್ಯಕೀಯ ಕಾಲೇಜು ಘೋಷಣೆಗೆ
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಇದರಲ್ಲಿ ಯಾವೊಂದು ಯೋಜನೆ ಪರಿಗಣಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.