ಸಾರ್ವಜನಿಕರ ದೂರು: ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ದಿಢೀರ್ ಭೇಟಿ
Team Udayavani, Apr 18, 2020, 1:17 PM IST
ಯಾದಗಿರಿ: ಜಿನಕೇರಾ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಪಂ ಸಿಇಒ ಶಿಲ್ಪಾ ಶರ್ಮಾ ಪರಿಶೀಲಿಸಿದರು.
ಯಾದಗಿರಿ: ಯಾದಗಿರಿ ತಾಲೂಕಿನ ಹಲವು ಗ್ರಾಪಂ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯ ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ವಿವಿಧ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಜಿನಕೇರಾ, ಸೈದಾಪುರ, ಗುರುಮಠಕಲ್ಲ ತಾಲೂಕಿನ ದೇವರಹಳ್ಳಿ, ಗಾಜರಕೋಟ ಸೇರಿದಂತೆ ವಿವಿಧ ಗ್ರಾಮಗಳ ಶುದ್ಧ ಕುಡಿಯುವ ನೀರಿನ ಘಟಕಗಳು ಹಲವು ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದವು. ಈ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂಸಿಇಒ ಅಂದೇ ಕ್ರಮ ಕೈಗೊಂಡು ಘಟಕಗಳಿಗೆ ಮರುಜೀವ ನೀಡಿದ್ದಾರೆ.
ಎಲ್ಲ ಗ್ರಾಪಂಗಳಲ್ಲಿ ಸರ್ಕಾರದ ನಿರ್ದೇಶನದಂತೆ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಸಮಿತಿಗಳ ಮೂಲಕ ಸಾರ್ವಜನಿಕರಿಗೆ ರೋಗ ತಡೆಗಟ್ಟುವ ಕುರಿತು ಅಗತ್ಯ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ವೈರಸ್ ಹರಡುವುದನ್ನು ತಡೆಗಟ್ಟುವ ಕಾರ್ಯದ ಜತೆಗೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ತೀವ್ರವಾಗಿ ಸ್ಪಂದಿಸಿರುವುದು ಗ್ರಾಮೀಣ ಭಾಗದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾಗರಿಕರಿಗೆ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ತಮ್ಮ ಮನೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮುಖ್ಯವಾಗಿ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರಬಾರದು. ಕೋವಿಡ್ ಬಗ್ಗೆ ಭಯ ಪಡದೆ ಸರ್ಕಾರ ವಿಧಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ
Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.