ಯಾದಗಿರಿಯಲ್ಲಿ ಸಮುದಾಯಕ್ಕೆ ಹರಡಿಲ್ಲ ಕೋವಿಡ್
Team Udayavani, Jun 14, 2020, 6:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಯಾದಗಿರಿಯಲ್ಲಿ 735 ಮಂದಿಗೆ ಸೋಂಕು ತಗುಲಿದ್ದು, ಒಬ್ಬರಲ್ಲೂ ರೋಗ ಲಕ್ಷಣವಿಲ್ಲ. ಜಿಲ್ಲೆಯಲ್ಲಿ ಇಲ್ಲಿ ಸಮುದಾಯಕ್ಕೆ ಸೋಂಕು ಹರಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಸ್ಪಷ್ಟಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದಗಿರಿಯಲ್ಲಿ ಕೊರೊನಾ ಪರೀಕ್ಷಾ ವರದಿಗಳು ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳ ಜತೆ ಮಾತನಾಡಿದ್ದು, 24 ಇಲ್ಲವೇ 36 ತಾಸಿನೊಳಗೆ ವರದಿ ನೀಡಲು ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಇಲ್ಲದ್ದರಿಂದ ಬೇರೆ ಕಡೆ ಅವಲಂಬಿಸಬೇಕಿದೆ. ಇನ್ನು ಒಂದು ವಾರದಲ್ಲಿ ಲ್ಯಾಬ್ ಆರಂಭಿಸಲಾಗುವುದು ಎಂದರು. ಯಾದಗಿರಿ ಮತ್ತು ಉಡುಪಿಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ. ಮಹಾರಾಷ್ಟ್ರದಿಂದ ಆಗಮಿಸಿದವರಲ್ಲೇ ಹೆಚ್ಚು ಸೋಂಕು ಕಂಡುಬರುತ್ತಿದೆ. ಶೇ.95 ಸೋಂಕಿತರಲ್ಲಿ ರೋಗ ಲಕ್ಷಣಗಳಿಲ್ಲ. ರಾಜ್ಯದಲ್ಲಿ 164 (ಶೇ.5) ಸೋಂಕಿತರಿಗೆ ಮಾತ್ರ ರೋಗದ ಲಕ್ಷಣಗಳಿವೆ ಎಂದರು.
ಲಾಕ್‌ಡೌನ್ ಮುಂದುವರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ತರಲು ಸರ್ಕಾರ ಲಾಕ್‌ಡೌನ್ ಘೋಷಿಸಿತ್ತು. ಜೀವ ಉಳಿಸಿಯಾಗಿದೆ. ಈಗ ಜೀವದ ಜತೆಗೆ ಜೀವನವೂ ಸಹಜ ಸ್ಥಿತಿಗೆ ಬರಬೇಕಿದೆ. ಸಾಮಾಜಿಕ ಅಂತರ ಕಾಪಾಡಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.