ಟೆಸ್ಟ್ ಲ್ಯಾಬ್ ಸಿದ್ಧತೆಗೆ ಕೂರ್ಮಾರಾವ್ ಸೂಚನೆ
Team Udayavani, May 8, 2020, 12:11 PM IST
ಯಾದಗಿರಿ: ನೂತನ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿ ಕೋವಿಡ್ ಪರೀಕ್ಷೆಯ ಲ್ಯಾಬ್ ಸ್ಥಾಪನೆಗೆ ಕೈಗೊಂಡ ಸಿದ್ಧತೆ ಪರಿಶೀಲಿಸಿದರು
ಯಾದಗಿರಿ: ನೋವೆಲ್ ಕೋವಿಡ್ ವೈರಸ್‌ಗೆ ಸಂಬಂಧಿಸಿದಂತೆ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್19 ಪರೀಕ್ಷೆ ನಡೆಸುವ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅಧಿಕಾರಿಗಳಿಗೆ ಸೂಚಿಸಿದರು.
ನೂತನ ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ, ಕೋವಿಡ್19 ಟೆಸ್ಟ್ ಲ್ಯಾಬ್ ಸ್ಥಾಪನೆ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳಲು ಪರಿಶೀಲನೆ ನಡೆಸಿದರು. ಜಿಲ್ಲಾಡಳಿತ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚು ಹೆಚ್ಚು ನಡೆಸಬೇಕಿದ್ದು, ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಕೆಎಚ್‌ಎಸ್‌ಡಿಆರ್‌ಪಿ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಕಿರಣ ಸೇರಿದಂತೆ ಇನ್ನಿತರರು ಹಾಜರಿದ್ದರು. 1358 ವರದಿ ನೆಗೆಟಿವ್: ನೋವೆಲ್ ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳಲ್ಲಿ ಗುರುವಾರ ಮತ್ತೆ 47 ಮಾದರಿಗಳ ವರದಿ ನೆಗೆಟಿವ್ ಬಂದಿದ್ದು, ಇಲ್ಲಿಯವರೆಗೆ ಒಟ್ಟು 1,358 ಮಾದರಿಗಳ ವರದಿ ನೆಗೆಟಿವ್ ಬಂದಂತಾಗಿದೆ. ಜಿಲ್ಲೆಯಲ್ಲಿ 29 ಹೊಸ ಮಾದರಿಗಳು ಸೇರಿದಂತೆ 125 ಮಾದರಿಗಳ ವರದಿ ಬರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ಜಿಲ್ಲಾಸ್ಪತ್ರೆಯ ಐಸೊಲೇಷನ್ ವಾರ್ಡ್‌ನಲ್ಲಿ 2 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 2 ಮತ್ತು ಸುರಪುರ ಸೂಪರ್ ಕ್ವಾರಂಟೈನ್ ಸೆಂಟರ್‌ನಲ್ಲಿ 5 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕ 22 ಜನ, ದ್ವಿತೀಯ ಸಂಪರ್ಕದ 63 ಜನರಿದ್ದು, ಇವರನ್ನು ಪ್ರತ್ಯೇಕವಾಗಿರಿಸಲಾಗಿದೆ. ವಿದೇಶಗಳಿಂದ ಜಿಲ್ಲೆಗೆ ಮರಳಿ ಬಂದಿರುವ 71 ಜನರ ಅವಲೋಕನ ಅವಧಿ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಅರಕೇರಾ (ಕೆ) ಇನ್‌ಸ್ಟಿಟ್ಯೂಶನಲ್ ಕ್ವಾರಂಟೈನ್‌ನಲ್ಲಿ 50 ಜನ, ಗುಂಜನೂರಿನಲ್ಲಿ 19 ಜನ, ಹುಣಸಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 139 ಜನ ಮತ್ತು ಕೆಂಭಾವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7 ಜನ ಸೇರಿದಂತೆ ಒಟ್ಟು 215 ಜನರನ್ನು ಇನ್ ಸ್ಟಿಟ್ಯೂಶನಲ್ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.