ಅದ್ದೂರಿ ಆಚರಣೆಗೆ ಕಡಿವಾಣ
ಜಯಂತಿ; ಸರಳವಾಗಿ ಆಚರಿಸಿ ಕೋವಿಡ್ ನಿಯಮ ಪಾಲನೆ ಕಡ್ಡಾಯ
Team Udayavani, Mar 27, 2021, 8:58 PM IST
ಯಾದಗಿರಿ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಡಾ| ಜಗಜೀವನರಾಂ ಹಾಗೂ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏ.5ರಂದು ಡಾ| ಜಗಜೀವನರಾಂ ಹಾಗೂ ಏ.14ರಂದು ಡಾ| ಬಿ.ಆರ್. ಅಂಬೇಡ್ಕರ್ ಜಯಂತಿಗಳ ಆಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ಮಾತನಾಡಿ, ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಜಯಂತಿಗಳನ್ನು ಡಿಸಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು. ಅಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಿ, ಗೌರವ ಸಲ್ಲಿಸಲಾಗುತ್ತದೆ ಎಂದರು.
ಜಯಂತಿಯಲ್ಲಿ ಮೆರವಣಿಗೆಗೆ ಅವಕಾಶ ಇಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಉಪಯೋಗಿಸಬೇಕು ಎಂದರು. ಈ ವೇಳೆ ಜಿಪಂ ಸದಸ್ಯರಾದ ಶಿವಲಿಂಗಪ್ಪ ಪುಟಗಿ, ಎಸ್ಪಿ ಋಷಿಕೇಶ ಭಗವಾನ್ ಸೋನಾವಣೆ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸವ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪ್ರಭು ದೊರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.