ಪೌರ ಕಾರ್ಮಿಕರ ಸೇವೆ ಶ್ಲಾಘನೀಯ: ಮುದ್ನಾಳ
Team Udayavani, Apr 10, 2020, 3:59 PM IST
ಯಾದಗಿರಿ: ನಗರದ ಪ.ಪೂ ಕಾಲೇಜು ಮೈದಾನದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಪೌರ ಕಾರ್ಮಿಕರನ್ನು ಸನ್ಮಾನಿಸಿದರು
ಯಾದಗಿರಿ: ಗಡಿಯಲ್ಲಿ ಸೈನಿಕರು ನಮ್ಮೆಲ್ಲರ ರಕ್ಷಣೆ ಮಾಡುತ್ತಿದ್ದಾರೆ. ಆದರೆ ನಗರ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ಸೇವೆ ಶ್ಲಾಘನೀಯ ಎಂದು ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಹೇಳಿದರು.
ನಗರದ ಸರ್ಕಾರಿ ಪ.ಪೂ ಕಾಲೇಜು ಮೈದಾನದಲ್ಲಿ ವೀರಶೈವ ಸಮಾಜ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪೌರ ಕಾರ್ಮಿಕರಿಗೆ ಸಮವಸ್ತ್ರಗಳು ಹಾಗೂ ವರ್ಧಮಾನ್ ಟ್ರೇಡಿಂಗ್ ಕಂಪನಿ ವತಿಯಿಂದ ತಲಾ 10 ಕೆ.ಜಿ. ಜೋಳ ವಿತರಿಸಿ ಅವರು ಮಾತನಾಡಿದರು.
ಸಾಹಿತ್ಯ ಪರಿಷತ್ತು ಮತ್ತು ವೀರಶೈವ ಸಮಾಜದವರು ಪೌರ ಕಾರ್ಮಿಕರ ಸೇವೆ ಮನಗಂಡು ಸಹಾಯ ನೀಡುತ್ತಿರುವುದು ಪ್ರಶಂಸನೀಯ. ಇದರಂತೆ ಕೊರೊನಾ ತಡೆಗಟ್ಟಲು ಹೋರಾಡುತ್ತಿರುವ ಸರ್ವರಿಗೂ ಸಹಕರಿಸಬೇಕು. ಅದರಂತೆ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳಬೇಕು. ಸರ್ಕಾರದ ಆದೇಶಗಳನ್ನು ತಪ್ಪದೇ ಪಾಲಿಸಬೇಕು. ಈ ಮೂಲಕ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿ ಕೊರೊನಾ ತಡೆಗಟ್ಟಲು ಶ್ರಮಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಸುಮಾರು 80 ಜನ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪೌರಾಯುಕ್ತ ರಮೇಶ ಸುಣಗಾರ, ಸಿಬ್ಬಂದಿ ವರ್ಗ, ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ನಗರ ವೀರಶೈವ ಸಮಾಜದ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ್, ಡಾ| ಸುಭಾಶ್ಚಂದ್ರ ಕೌಲಗಿ, ಸುಭಾಷ ಆಯಾರಕರ್, ಬಸವರಾಜ ಮೋಟ್ನಳ್ಳಿ, ಡಾ| ಭೀಮರಾಯ ಲಿಂಗೇರಿ, ಡಾ| ಎಸ್.ಎಸ್. ನಾಯಕ, ನಗರಸಭೆ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.