ಪೌರ ಕಾರ್ಮಿಕರಿಗೂ ಆರೋಗ್ಯ ತಪಾಸಣೆ
Team Udayavani, Apr 29, 2020, 12:47 PM IST
ಯಾದಗಿರಿ: ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರಕ್ಕೆ ಡಿಸಿ ಕೂರ್ಮಾರಾವ್ ಭೇಟಿ ನೀಡಿ ಪರಿಶೀಲಿಸಿದರು.
ಯಾದಗಿರಿ: ಕೋವಿಡ್ ವಾರಿಯರ್ಗಳಂತೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ಕೊವಿಡ್-19 ಪರೀಕ್ಷೆ ಜೊತೆಗೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಬೇಕು. ಯಾವುದಾದರೂ ಸಮಸ್ಯೆಗಳು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆ ಶಿಫಾರಸು ಮಾಡಲು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.
ಇಲ್ಲಿನ ನಗರಸಭೆಯಲ್ಲಿ ಮಂಗಳವಾರ ಪೌರಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ಗ್ಲೌಸ್, ಸ್ಯಾನಿಟೈಸರ್, ಮಾಸ್ಕ್ ಸೇರಿದಂತೆ ಇನ್ನಿತರ ಸುರಕ್ಷಾ ಸಾಧನ ನೀಡಬೇಕು. ಅವರಿಗೆ ಉಪಾಹಾರ ಕೂಡ ನೀಡಲು ಸೂಚಿಸಿದ ಡಿಸಿ, ಕೋವಿಡ್ ಸಾಂಕ್ರಾಮಿಕ ರೋಗವಾಗಿರುವುದರಿಂದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಡಾ.ಕೀರ್ತಿ ಎಚ್.ಚಿಂತನಹಳ್ಳಿ ನೇತೃತ್ವದ ತಂಡವು ಪೌರಕಾರ್ಮಿಕರು ಹಾಗೂ ನಗರಸಭೆಯ ಎಲ್ಲಾ ಸಿಬ್ಬಂದಿಗೆ ಜ್ವರ, ಶ್ವಾಸಕೋಶ ಹಾಗೂ ರಕ್ತದೊತ್ತಡ ತಪಾಸಣೆ ನಡೆಸಿತು. ಪೌರಾಯುಕ್ತ ರಮೇಶ ಸುಣಗಾರ, ಇಂಜಿನಿಯರ್ ಗಂಗಾಧರಗೌಡ, ಪರಿಸರ ಇಂಜಿನಿಯರ್ ಸಂಗಮೇಶ ಪನಶೆಟ್ಟಿ ಹಾಗೂ ಆರೋಗ್ಯ ನಿರೀಕ್ಷಕರು ಇತರೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.