ಜಿಲ್ಲಾದ್ಯಂತ ಬಣ್ಣದಲ್ಲಿ ಮಿಂದೆದ್ಧ ಜನ

ಪರಸ್ಪರ ಬಣ್ಣ ಎರಚಿ ಸಂತಸ ಹಂಚಿಕೊಂಡ ಚಿಣ್ಣರು-ಯುವಕರು-ಮಹಿಳೆಯರು-ವೃದ್ಧರು

Team Udayavani, Mar 11, 2020, 12:35 PM IST

11-March-8

ಯಾದಗಿರಿ: ಜಿಲ್ಲಾದ್ಯಂತ ಮಂಗಳವಾರ ಸಾರ್ವಜನಿಕರು ಹೋಳಿ ಹಬ್ಬ ಸಂಭ್ರಮದಿಂದ ಆಚರಿಸಿದರು. ವರ್ಷಕ್ಕೊಮ್ಮೆ ಆಚರಿಸುವ ಹೋಳಿ ಹಬ್ಬದಂದು ಜಿಲ್ಲೆಯಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು.

ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚಿ ಕೆಲವರು ಕೊರೊನಾ ವೈರಸ್‌ ಭೀತಿಯಿಂದ ಬಣ್ಣ ಆಡುವುದರಿಂದ ದೂರ ಉಳಿದಿದ್ದರೇ ಇನ್ನೂ ಕೆಲವರು ಅದಾವುದನ್ನು ಲೆಕ್ಕಿಸದೇ ರಂಗಿನ ಓಕಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದರು.

ಸೋಮವಾರ ರಾತ್ರಿ ವಡಗೇರಾ, ಗುರುಮಠಕಲ್‌ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕಾಮ ದಹನ ಜರುಗಿತು. ಮಂಗಳವಾರ ಬೆಳಗ್ಗಿನಿಂದಲೇ ಬಣ್ಣದ ಓಕಳಿ ಪ್ರಾರಂಭವಾಯಿತು. ಕೋಲಿವಾಡದಲ್ಲಿ ಎರಡು ಬಣ್ಣದ ಬಂಡಿಗಳಿಗೆ ಡಿವೈಎಸ್‌ಪಿಯು. ಶರಣಪ್ಪ, ಸಿಪಿಐ ಶರಣಗೌಡ ನ್ಯಾಮನವರ್‌ ಮತ್ತು ನಗರಸಭೆ ಸದಸ್ಯರಾದ ಪ್ರಭಾವತಿ ಮಾರುತಿ ಕಲಾಲ್‌, ಚನ್ನಕೇಶವಗೌಡ ಬಾಣತಿಹಾಳ, ಅಂಬಯ್ಯ ಶಾಬಾದಿ ಚಾಲನೆ ನೀಡಿದರು.

ಬಣ್ಣದ ಆಟದಲ್ಲಿ ಎಲ್ಲ ಸಮುದಾಯ ಜನ ಉಲ್ಲಾಸದಿಂದ ಪಾಲ್ಗೊಂಡು ಪರಸ್ಪರ ಬಣ್ಣ ಹಚ್ಚಿ ಸೌಹಾರ್ದಯುತವಾಗಿ ಹಬ್ಬ ಆಚರಿಸಿದರು. ಶಾಂತಿ ಸಮಿತಿ ಸದಸ್ಯರಾದ ಅಯ್ಯಣ್ಣ ಹುಂಡೇಕಾರ, ಡಾ| ಸಿದ್ದಪ್ಪ ಹೊಟ್ಟಿ, ನಾಗೇಂದ್ರ ಜಾಜಿ, ನೂರೊಂದಪ್ಪ ಲೇವಡಿ, ಪ್ರಮುಖರಾದ ಶಂಕರ ಗೋಸಿ, ಮಾರುತಿ ಕಲಾಲ್‌, ಮಲ್ಲಯ್ಯ ಪೂಜಾರಿ, ಮಹಾದೇವಪ್ಪ ಗಣಪುರ, ಸಿದ್ದಯ್ಯ ಪೂಜಾರಿ, ಮಾಹದೇವಪ್ಪ, ಯಂಕಪ್ಪ ಗೋಸಿ, ವಿಜಯ ಪಾಟೀಲ ಸೇರಿದಂತೆ ಯುವಕರು, ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಬಣ್ಣ ಆಡಿ ಸಂಭ್ರಮಿಸಿದರು.

ನಿತ್ಯದ ಕೆಲಸದ ಒತ್ತಡಗಳಲ್ಲಿರುವ ಅಧಿಕಾರಿಗಳಿಗೆ ಇಲ್ಲಿನ ಪತ್ರಕರ್ತರು ಹೋಳಿ ಸಂಭ್ರಮದಲ್ಲಿ ತೊಡಗುವಂತೆ ಮಾಡಿದರು. ಬೆಳಗ್ಗೆ ಜಿಲ್ಲಾಧಿ ಕಾರಿ, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಬಣ್ಣ ಹಚ್ಚಿ ಸಂಭ್ರಮಿಸಿದರು.

ಇನ್ನೂ ಅಂಬೇಡ್ಕರ್‌ ನಗರದಲ್ಲಿ ಯುವತಿಯರು ಪರಸ್ಪರ ಬಣ್ಣ ಎರಚಿ ಸಂತಸ ಪಟ್ಟರು. ಹೋಳಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್‌ ಹಾಗೂ ಗೃಹ ರಕ್ಷಕ ದಳದ ನಿಯೋಜನೆ ಮಾಡಲಾಗಿತ್ತು.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.