ಹೋಂ ಕ್ವಾರಂಟೈನ್‌ ವಿರೋಧಿಸುವಂತಿಲ್ಲ

ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಸೂಚನೆ|ವಲಸೆ ಕಾರ್ಮಿಕರಿಗೆ ಪಡಿತರ ವಿತರಿಸಲು ಕ್ರಮ ಕೈಗೊಳ್ಳಿ

Team Udayavani, May 31, 2020, 12:35 PM IST

31-May-07

ಸಾಂದರ್ಭಿಕ ಚಿತ್ರ

ಯಾದಗಿರಿ: ಹೋಂ ಕ್ವಾರಂಟೈನ್‌ನಲ್ಲಿರುವುದಕ್ಕೆ ಗ್ರಾಮಸ್ಥರು ಯಾವುದೇ ಕಾರಣಕ್ಕೂ ವಿರೋಧಿಸುವಂತಿಲ್ಲ. ಅಲ್ಲದೆ ಹೋಂ ಕ್ವಾರಂಟೈನ್‌ ಗೊಳಗಾದ ವ್ಯಕ್ತಿಗಳು ಕೂಡ ಮನೆ ಬಿಟ್ಟು ಹೊರಗಡೆ ಬರತಕ್ಕದ್ದಲ್ಲ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್‌.ವಿ. ಪ್ರಸಾದ್‌ ಎಚ್ಚರಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್‌-19 ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮಮಟ್ಟದ ಟಾಸ್ಕ್ಫೋರ್ಸ್‌ ಸಮಿತಿಗಳಲ್ಲಿರುವ ಜನಪ್ರತಿನಿಧಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳು ಹೋಂ ಕ್ವಾರಂಟೈನ್‌ನಲ್ಲಿದ್ದವರ ಚಲನವಲನಗಳ ಮೇಲೆ ನಿಗಾವಹಿಸಬೇಕು. ಮನೆಬಿಟ್ಟು ಹೊರಗಡೆ ಓಡಾಡಿದಲ್ಲಿ ಅಥವಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ಜಿಲ್ಲಾಡಳಿತದ ಕಂಟ್ರೋಲ್‌ ರೂಂ. 08473 253950 ಸಂಖ್ಯೆಗೆ ಮಾಹಿತಿ ನೀಡಲು ತಿಳಿಸಿ ಎಂದು ಸಲಹೆ ನೀಡಿದರು.

ಇನ್ನು ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇರಲಿ ಅಥವಾ ಇಲ್ಲದಿರಲಿ ಆಹಾರ ಧಾನ್ಯ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಸರ್ಕಾರದ ಹೊಸ ಮಾರ್ಗಸೂಚಿಯಂತೆ ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ನಿಗದಿತ ಅವಧಿವರೆಗೆ ಸಾಂಸ್ಥಿಕ ಕ್ವಾರಂಟೈನ್‌ ನಂತರ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಕ್ವಾರಂಟೈನ್‌ನ ಅವಧಿಯಲ್ಲಿ ಶಿಷ್ಟಾಚಾರದಂತೆ ಗಂಟಲು ದ್ರವ ಮಾದರಿ ಸಂಗ್ರಹಿಸಬೇಕು. ನಂತರ ಅವರ ಆರೋಗ್ಯ ಸ್ಥಿತಿ ಮತ್ತು ಯಾವ ರಾಜ್ಯದಿಂದ ಹಿಂದಿರುಗಿದವರು ಎಂಬ ಆಧಾರದ ಮೇಲೆ ಹೋಂ ಕ್ವಾರಂಟೈನ್‌ಗೆ ಸೂಚಿಸಬಹುದು. ಮನೆಗೆ ಕಳುಹಿಸುವ ಮುನ್ನ ಕ್ವಾರಂಟೈನ್‌ಗೆ ಒಳಪಟ್ಟವರ ಕೈ ಮೇಲೆ ಸ್ಟ್ಯಾಂಪಿಂಗ್‌ ಮತ್ತು ಹೆಲ್ತ್‌ ಸ್ಕ್ರೀನಿಂಗ್‌ ಮಾಡಬೇಕು. ಈ ಸಂದರ್ಭದಲ್ಲಿ ಅವರ ವಿಳಾಸ, ಮೊಬೈಲ್‌ ಸಂಖ್ಯೆ ಸೇರಿದಂತೆ ಇನ್ನಿತರ ವಿವರಗಳನ್ನು ಮತ್ತೂಮ್ಮೆ ಖಚಿತಪಡಿಸಿಕೊಳ್ಳಬೇಕು. ಮನೆಯಲ್ಲಿ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರಿದ್ದು ಹೋಂ ಕ್ವಾರಂಟೈನ್‌ ಬದಲು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರುವುದಾಗಿ ಮನವಿ ಮಾಡಿದಲ್ಲಿ 14 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಲು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಮಾತನಾಡಿ, ಹೊರ ರಾಜ್ಯಗಳಿಂದ ಯಾದಗಿರಿ ಜಿಲ್ಲೆಗೆ ಆಗಮಿಸಿದ ಒಟ್ಟು 13,141 ಜನರನ್ನು ಜಿಲ್ಲೆಯ 211 ಇನ್‌
ಸ್ಟಿಟ್ಯೂಶನಲ್‌ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಈ ಪೈಕಿ ಈಗಾಗಲೇ 11 ಸಾವಿರ ಜನರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಲಸೆ ಕಾರ್ಮಿಕರ ಅವಲೋಕನ ಅವಧಿ ಮುಕ್ತಾಯವಾದ ನಂತರ ಅವರನ್ನು ಬಿಡುಗಡೆಗೊಳಿಸುವಾಗ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ತಾಲೂಕುವಾರು ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮೇ 29ರಂದು 1502 ಜನರನ್ನು ಕ್ವಾರಂಟೈನ್‌ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್‌19 ಟೆಸ್ಟ್‌ ಪೂರ್ವಭಾವಿಯಾಗಿ ನಡೆಸುವ 2 ಟ್ರೂನ್ಯಾಟ್‌ ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್‌ ಟೆಸ್ಟ್‌ ಲ್ಯಾಬ್‌ ಸ್ಥಾಪನೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಷಿನ್‌ ಬಂದ ನಂತರ ಜಿಲ್ಲೆಯಲ್ಲಿಯೇ ಪರೀಕ್ಷೆ ನಡೆಸಬಹುದು. ಹೊಸ ಜಿಲ್ಲಾಸ್ಪತ್ರೆಯಲ್ಲಿ 132 ಹಾಸಿಗೆಗಳಿಗೆ ಹೈಫ್ಲೋ ಆಕ್ಸಿಜನ್‌ ಸರಬರಾಜು ವ್ಯವಸ್ಥೆ ಮಾಡಲಾಗಿದೆ. 33 ತಜ್ಞ ವೈದ್ಯರು, 63 ವೈದ್ಯರು, 18 ಶುಶ್ರೂಷಕರು, 16 ಲ್ಯಾಬ್‌ ತಂತ್ರಜ್ಞರು ಹಾಗೂ 20 ಫಾರ್ಮಾಸಿಸ್ಟ್‌ಗಳ ಅವಶ್ಯಕತೆ ಇದೆ. ಅರ್ಜಿ ಕರೆದರೂ ತಜ್ಞವೈದ್ಯರು, ವೈದ್ಯರು, ಲ್ಯಾಬ್‌ ತಂತ್ರಜ್ಞರು ಬರುತ್ತಿಲ್ಲ ಎಂದು ತಿಳಿಸಿದರು.

ಶೇ.78.47 ಸರ್ವೇ ಕಾರ್ಯ
ಜಿಲ್ಲೆಯಲ್ಲಿ ಸುರಪುರದ ಆಸರ್‌ವೊಹಲ್ಲಾ, ಶಹಾಪುರ ತಾಲೂಕಿನ ಕನ್ಯಾಕೋಳೂರು, ಚಂದಾಪುರ ಕೆಳಗಿನ ತಾಂಡಾ ಮತ್ತು ಯಾದಗಿರಿ ನಗರದ ದುಖಾನವಾಡಿ ಸೇರಿ ಒಟ್ಟು 4 ಕಂಟೇನ್ಮೆಂಟ್‌ ಝೋನ್‌ಗಳನ್ನು ಗುರತಿಸಲಾಗಿದ್ದು, ಸಿಝಡ್‌ ಆ್ಯಪ್‌ ಮೂಲಕ ಶೇ.78.47ರಷ್ಟು ಸರ್ವೇ ಮಾಡಲಾಗಿದೆ. ಇನ್ನು ಜಿಲ್ಲೆಯಾದ್ಯಂತ ಮತಗಟ್ಟೆ ಅಧಿಕಾರಿಗಳು, ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರಿಂದ ಹೆಲ್ತ್‌ ವಾಚ್‌ ಆ್ಯಪ್‌ ಮೂಲಕ ನಡೆಸುತ್ತಿರುವ ಕುಟುಂಬಗಳ ಸಾರ್ವತ್ರಿಕ ಸಮೀಕ್ಷೆ ಕಾರ್ಯ ಶೇ.79.44ರಷ್ಟು ಪೂರ್ಣಗೊಂಡಿದೆ ಎಂದು ವಿವರಿಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.