Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ
Team Udayavani, Jul 25, 2024, 5:13 PM IST
ಯಾದಗಿರಿ: ಜಿಲ್ಲೆಯ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಗುರುವಾರ 2.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಪ್ರದೇಶಗಳಿಗೆ ಈಗಾಗಲೇ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.
ಶಹಾಪುರ ತಾಲೂಕಿನ ಕೊಳ್ಳೂರು ಸೇತುವೆ ಅಪಾಯಮಟ್ಟ ತಲುಪಿದ್ದು, ಸೇತುವೆ ಮೇಲೆ ನೀರು ಹರಿಯುತ್ತಿವೆ. ಜಿಲ್ಲಾಡಳಿತ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಮಾಡಿ ಡಿಸಿ ಡಾ.ಸುಶೀಲಾ ಬಿ ಆದೇಶ ಹೊರಡಿಸಿದ್ದಾರೆ.
ಕೊಳ್ಳೂರ ಸೇತುವೆ ಮುಳುಗಡೆಯಾಗುವ ಸ್ಥಳಕ್ಕೆ ಶಹಾಪುರ ತಹಶೀಲ್ದಾರ ಉಮಾಕಾಂತ ಹಳ್ಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸೇತುವೆ ಮುಳಗಡೆ ಭೀತಿ ಹಿನ್ನೆಲೆಯಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ವಾಹನಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.
ಮಹಾರಾಷ್ಟ್ರದಲ್ಲಿ ಮಳೆ ಭಾರಿ ಪ್ರಮಾಣದಲ್ಲಿ ಸುರಿದಿದ್ದು ಭೀಮಾ ನದಿಗೆ ಒಳ ಹರಿವು ಹೆಚ್ಚಾಗಿದೆ. ತಾಲೂಕಿನ ವಡಗೇರಾ ತಾಲೂಕಿನ ಗುರಸುಣಗಿ ಬ್ಯಾರೇಜ್‌ನಿಂದ ಭೀಮಾ ನದಿಗೆ 3000 ಕ್ಯೂಸೆಕ್ ನೀರು ಬಿಡಲಾಗಿದೆ.
ಯಾದಗಿರಿ ನಗರದ ಭೀಮಾ ನದಿ ತಟದಲ್ಲಿರುವ ವೀರಾಂಜನೇಯ ಹಾಗೂ ಕಂಗಳೇಶ್ವರ ದೇಗುಲ ಜಲಾವೃತಗೊಂಡಿದ್ದು, ನದಿ ದಡದಲ್ಲಿರುವ ಶಿವಲಿಂಗಕ್ಕೆ ಭೀಮಾ ನದಿ ನೀರು ತಗುಲಿದ್ದು ಜನರು ಶಿವಲಿಂಗ ನೋಡಲು ಯತ್ನಿಸುತ್ತಿದ್ದಾರೆ.
ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ
ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಹರಿ ಬಿಡಲಾಗಿದ್ದು, ನದಿ ಪಾತ್ರದ ಪದೇಶಗಳಲ್ಲಿ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಕ್ಕಾಗಿ ಕಟ್ಟೆಚ್ಚರಿಕೆ ಘೋಷಿಸಿದ್ದು, ನದಿ ನೀರಿಗೆ ರೈತರು, ಜಾನುವಾರುಗಳು ಇಳಿಯದಂತೆ ನಿಗಾವಹಿಸುವಂತೆ ಗ್ರಾಮದ ಪಿಡಿಓ ಹಾಗೂ ಗಸ್ತು ಪೊಲೀಸರಿಗೆ ಜಿಲ್ಲಾಡಳಿತ ಸೂಚಿಸಿದೆ. ಶಹಾಪುರ ತಾಲೂಕಿನ ಕೊಳ್ಳೂರು ಗ್ರಾಮದ ಸೇತುವೆ ಮುಳುಗಡೆ ಸಾಧ್ಯತೆ ಇದ್ದು, ಪೊಲೀಸರು ವಾಹನ ಸಂಚಾರಕ್ಕೆ ತಡೆಹಿಡಿದಿದ್ದಾರೆ. ಕೊಳ್ಳೂರು ಸೇತುವೆ ಸ್ಥಳಕ್ಕೆ ಶಹಾಪುರ ತಹಶಿಲ್ದಾರ್ ಉಮಾಕಾಂತ ಹಳ್ಳಿ ಭೇಟಿ ನೀಡಿದರು.
ಕೃಷ್ಣಾ ನದಿಗೆ 2.5 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಈಗಾಗಲೇ ತಾಲೂಲು ಮಟ್ಟದ ಅಧಿಕಾರಿಗಳಿಗೆ ನಿಗಾ ವಹಿಸುವಂತೆ ಸೂಚಿಸಿದ್ದು, ಕೊಳ್ಳೂರು ಸೇತುವ ಹಾಗೂ ಯಾದಗಿರಿ ನಗರದ ಭೀಮಾ ನದಿಗೆ ಪೊಲೀಸರ ಬಂದೋಬಸ್ತ್ ನಿಯೋಜಿಸಲಾಗಿದೆ. ನದಿಗೆ ರೈತರು ಹಾಗೂ ಜಾನುವಾರುಗಳು ಇಳಿಯದಂತೆ ಗ್ರಾ.ಪಂ ಮಟ್ಟದ ಅಧಿಕಾರಿಗಳು ಎಚ್ಚರಿಕೆ ಕ್ರಮ ವಹಿಸಿದ್ದಾರೆ ಎಂದು ಡಿಸಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.