21ರಿಂದ ಕಾನೂನು ಸಾಕ್ಷರತಾ ರಥ ಸಂಚಾರ: ಶಿವನಗೌಡ
Team Udayavani, Jan 19, 2020, 3:33 PM IST
ಯಾದಗಿರಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 4 ದಿನಗಳಂತೆ ಜ.21ರಿಂದ ಫೆ.7ರ ವರೆಗೆ ಸಂಚರಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವನಗೌಡ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನ ಜಿಲ್ಲೆಯಲ್ಲಿ ಸಂಚರಿಸುವ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
ಯಾದಗಿರಿ ತಾಲೂಕಿನಲ್ಲಿ ಜ.21ರಿಂದ 24ರ ವರೆಗೆ ಸಾಕ್ಷರತಾ ರಥ ಸಂಚರಿಸಲಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಿ ಗ್ರಾಮಾಂತರ ಪ್ರದೇಶದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಾಹನ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ದಿನಕ್ಕೆ ಮೂರು ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆ ಪ್ರಚಾರ ಮಾಡಬೇಕು ಎಂದು ಸೂಚಿಸಿದರು. ಕಾರ್ಯಕ್ರಮಗಳಲ್ಲಿ ಜನನ ಮರಣ ನೋಂದಣಿ, ಮಕ್ಕಳ ಹಕ್ಕುಗಳು, ಕಡ್ಡಾಯ ಶಿಕ್ಷಣದ ಹಕ್ಕು, ಉತ್ತರಾ ಧಿಕಾರತ್ವ, ಗ್ರಾಪಂ ಆಸ್ತಿ ಸಂರಕ್ಷಣೆ, ಬಾಲ ಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹ ನಿಷೇಧ, ವಿಕಲಚೇತನರ ಕಾಯ್ದೆ, ಹಿರಿಯ ನಾಗರಿಕರ ಕಾಯ್ದೆ ಸೇರಿದಂತೆ ಮುಂತಾದ ವಿಷಯಗಳ ಕುರಿತು ಉಪನ್ಯಾಸ ನೀಡಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ. ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಿವಿಲ್ ನ್ಯಾಯಾಧೀಶ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ ಉಪಸ್ಥಿತರಿದ್ದರು.
ಡಿವೈಎಸ್‌ಪಿ ಯು. ಶರಣಪ್ಪ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.