8ರಂದು ರಾಷ್ಟ್ರೀಯ ಲೋಕ್ ಅದಾಲತ್
ಅದಾಲತ್ ಸದ್ಬಳಕೆಗೆ ಕರೆ ಸಾರ್ವಜನಿಕರ ಪ್ರಕರಣ ಇತ್ಯರ್ಥಕ್ಕೆ ಅವಕಾಶ: ನ್ಯಾ| ಶಿವನಗೌಡ
Team Udayavani, Feb 1, 2020, 12:57 PM IST
ಯಾದಗಿರಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರ ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಫೆ. 8ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಯಾದಗಿರಿ, ಸುರಪುರ ಮತ್ತು ಶಹಾಪುರ ನ್ಯಾಯಾಲಯಗಳ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವನಗೌಡ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದಲ್ಲಿ ಫೆ. 8, ಏ.11, ಜು.11, ಸೆ.12 ಹಾಗೂ ಡಿ. 12ರಂದು ಸೇರಿದಂತೆ ಒಟ್ಟು 5
ರಾಷ್ಟ್ರೀಯ ಲೋಕ್ ಅದಾಲತ್‌ಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಶೀಘ್ರದಲ್ಲಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಫೆ. 8ರ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ
1,207 ಪ್ರಕರಣಗಳನ್ನು ರಾಜಿ ಮೂಲಕ ಪರಿಹರಿಸಲು ಗುರುತಿಸಲಾಗಿದೆ.
ಫೆ. 8ರ ವರೆಗೆ ಪ್ರಕರಣಗಳನ್ನು ಗುರುತಿಸುವ ಕಾರ್ಯ ಚಾಲ್ತಿಯಲ್ಲಿರುತ್ತದೆ.
ಸಾರ್ವಜನಿಕರು ಅದಾಲತ್ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಹೆಚ್ಚಿನ ಮಾಹಿತಿಗಾಗಿ ನ್ಯಾಯ ಸಂಯೋಗ, ಕಾನೂನು ನೆರವು ಘಟಕ ನ್ಯಾಯ
ದೇಗುಲ ಮೊದಲನೆ ಮಹಡಿ, ಹೆಚ್. ಸಿದ್ದಯ್ಯ ರಸ್ತೆ, ಬೆಂಗಳೂರು-560027, ದೂರವಾಣಿ ಸಂಖ್ಯೆ:080-22111730 ಹಾಗೂ ವೆಬ್‌ಸೈಟ್ www.kslsa.
kar.nic.in ಸಂಪರ್ಕಿಸಬಹುದು. ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿ ಶಹಾಪುರ/ ಸುರಪುರ ಸದಸ್ಯ ಕಾರ್ಯದರ್ಶಿ ಅವರನ್ನು
ಸಂಪರ್ಕಿಸಬಹುದು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದೂ: 08473 252325 ಸಂಪರ್ಕಿಸಬಹುದು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.