ಮಹಾನ್ ಪುರುಷರ ಆದರ್ಶ ಪಾಲಿಸಿ
ಸನ್ಮಾರ್ಗ ತೋರಿದ ಶರಣರುಮಡಿವಾಳ ಮಾಚಿದೇವ ತತ್ವ-ಸಿದ್ಧಾಂತ ಆಲಿಸಿದರೆ ಸಾಲದು, ಮೈಗೂಡಿಸಿಕೊಳ್ಳಿ: ಶಾಸಕ ಮುದ್ನಾಳ
Team Udayavani, Feb 2, 2020, 1:51 PM IST
ಯಾದಗಿರಿ: 12ನೇ ಶತಮಾನದ ಸಾಮಾಜಿಕ ವ್ಯವಸ್ಥೆಯಲ್ಲಿ ಮೂಢನಂಬಿಕೆ, ತಾರತಮ್ಯ ಹಾಗೂ ಧಾರ್ಮಿಕ ಅಂಧ ಆಚರಣೆಗಳನ್ನು ಖಂಡಿಸಿ, ತಮ್ಮ ವಚನಗಳಲ್ಲಿ ಸಮಾಜವನ್ನು ತಿದ್ದುವ ಮೂಲಕ ಸನ್ಮಾರ್ಗ ತೋರಿದ ಶರಣರಲ್ಲಿ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಡಿವಾಳ ಮಾಚಿದೇವರು ಬಸವಣ್ಣನವರ ತತ್ವ-ಸಿದ್ಧಾಂತದಿಂದ ಪ್ರಭಾವಿತರಾಗಿ ಕಲ್ಯಾಣಕ್ಕೆ ಬಂದು ನೆಲೆಸಿದರು. ಎಲ್ಲಾ ಜಾತಿ, ಮತಗಳು ಒಂದೇ. ನಾವೆಲ್ಲರೂ ಒಂದಾಗಿರಬೇಕು ಎಂದು ಸಾರಿದರು. ಆದ್ದರಿಂದ ಮಡಿವಾಳ ಮಾಚಿದೇವರ ತತ್ವ, ಸಿದ್ಧಾಂತಗಳನ್ನು ಆಲಿಸಿದರೆ ಸಾಲದು, ಮೈಗೂಡಿಸಿಕೊಂಡು ಪಾಲಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ ಮಾತನಾಡಿ, 12ನೇ ಶತಮಾನದಲ್ಲಿ ಶರಣರು ನಡೆಸಿದ ವಚನ ಚಳವಳಿ ಇಡೀ ದೇಶವೇ ಕರ್ನಾಟಕದತ್ತ ನೋಡುವಂತೆ ಮಾಡಿತು. ಮಡಿವಾಳ ಮಾಚಿದೇವರು ಶರಣರ ಬಟ್ಟೆಗಳನ್ನು ಮಡಿ ಮಾಡುವ ಕಾರ್ಯ ಬಹಳ ನಿಷ್ಠೆಯಿಂದ ಮಾಡುತ್ತಿದ್ದರು. ಕಾರ್ಯ ಯಾವುದಾದರೇನು ಮನಸ್ಸು ಶುದ್ಧವಾಗಿಟ್ಟುಕೊಂಡು ಎಲ್ಲರೂ ತಮ್ಮ ಕಾಯಕ ಮಾಡುತ್ತಿರಬೇಕು ಎಂದು ಹೇಳಿದ ಮಾಚಿದೇವರ ಕಾಯಕ ನಿಷ್ಠೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಅಂದಾಗ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.
ಯಾಮರೆಡ್ಡಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಭೀಮರಾಯ ಲಿಂಗೇರಿ ಉಪನ್ಯಾಸ ನೀಡಿ, ಮಡಿವಾಳ ಮಾಚಿದೇವರು ತುಳಿತಕ್ಕೆ ಒಳಗಾದ ಸಮಾಜವನ್ನು ತಮ್ಮ ವಚನಗಳ ಮೂಲಕ ತಿದ್ದಿದರು. 12ನೇ ಶತಮಾನದ ಕ್ರಾಂತಿಕಾರಿ ಶರಣರಾದ ಇವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರಹಿಪ್ಪರಗಿಯ ಪರ್ವತಯ್ಯ ಮತ್ತು ಸುಜ್ಞಾನಮ್ಮ ದಂಪತಿಗೆ 1120-30ರ ಸುಮಾರಿನಲ್ಲಿ ಜನಿಸಿದರು ಎಂಬುದಾಗಿ ಇತಿಹಾಸದಿಂದ ತಿಳಿದು ಬರುತ್ತದೆ ಎಂದರು.
ವಚನಗಳ ರಕ್ಷಕ ಮಡಿವಾಳ ಮಾಚಿದೇವರು ಅನುಭವ ಮಂಟಪಕ್ಕೆ ಬರುವ ಶರಣರನ್ನು ಬರಮಾಡಿಕೊಳ್ಳುವ ಕಾಯಕವು ಇಂದಿನ ವಿದೇಶಾಂಗ, ರಕ್ಷಣಾ ಸಚಿವರ ಕಾಯಕದಂತೆ ಇತ್ತು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ತತ್ವವನ್ನು ವಚನ ಚಳವಳಿ ಮೂಲಕ ತಿಳಿಸಿದರು. ಅಂತಹ ಶರಣರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸರೆಡ್ಡಿಗೌಡ ಪಾಟೀಲ ಅನಪುರ, ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಡಿವಾಳಪ್ಪ ಬಿಜಾಸ್ಪೂರ, ಮಹಾದೇವಪ್ಪ ಯಲಸತ್ತಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಮತ್ತು ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Karkala: ಇಳಿಜಾರಿನಲ್ಲಿ ಯು-ಟರ್ನ್; ಅತ್ತೂರು ರಸ್ತೆಯಲ್ಲಿ ಅಪಾಯ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
Kundapura: ಚೋರಾಡಿ; ಕರೆ ಬಂದರೆ ಬೆಟ್ಟ ಹತ್ತಬೇಕು!
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.