ಯಾದಗಿರಿ: ನಿನ್ನೆ ಒಬ್ಬರಿಗೆ ಸೋಂಕು ದೃಢ
Team Udayavani, Jul 5, 2020, 10:01 AM IST
ಯಾದಗಿರಿ: ನೋವೆಲ್ ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಶನಿವಾರ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈವರೆಗೆ 971 ವರದಿ ಪಾಸಿಟಿವ್ ಬಂದಿವೆ. ಇಂದು 970 ನೆಗೆಟಿವ್
ವರದಿ ಸೇರಿ ಈವರೆಗೆ 25543 ಮಾದರಿಗಳ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಸಂಗ್ರಹಿಸಿದ 464 ಮಾದರಿಗಳು ಸೇರಿದಂತೆ 539 ಮಾದರಿಗಳ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಕೋವಿಡ್-19 ಖಚಿತಪಟ್ಟ 971 ವ್ಯಕ್ತಿಗಳಲ್ಲಿ ಶನಿವಾರ ಮತ್ತೆ 10 ಜನ ಸೇರಿ ಜು.4ರವರೆಗೆ ಒಟ್ಟು 865 ಜನ ಗುಣಮುಖರಾಗಿದ್ದಾರೆ. ಉಳಿದ 105 ಪ್ರಕರಣಗಳು ಸಕ್ರಿಯವಾಗಿರುತ್ತವೆ.
ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1916 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 3181 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 90 ಕಂಟೈನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೈನ್ಮೆಂಟ್ ಝೋನ್‌ಗಳನ್ನು ತೆರವುಗೊಳಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 37 ಜನರನ್ನು ಪತ್ಯೇಕವಾಗಿರಿಸಲಾಗಿದೆ.
ಶಹಾಪುರ ಕೋವಿಡ್ ಕೇರ್ ಸೆಂಟರ್ ನಲ್ಲಿ 4 ಜನ, ಸುರಪುರ ಕೋವಿಡ್ ಕೇರ್ ಸೆಂಟರ್‌ನಲ್ಲಿ 11 ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್ ನಲ್ಲಿ 57 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 9 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಒಟ್ಟು 559 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.