ಪರಿಹಾರ ವಿತರಣೆ ಕಾರ್ಯ ಶೀಘ್ರವಾಗಲಿ

ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ

Team Udayavani, Feb 12, 2020, 1:10 PM IST

12-February-9

ಯಾದಗಿರಿ: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ, ಹಾವು ಕಡಿತ, ಆಕಸ್ಮಿಕ ಸಾವು, ಬಣವೆ ನಷ್ಟದ ಪರಿಹಾರಗಳನ್ನು ಶೀಘ್ರ ವಿತರಿಸಬೇಕು ಎಂದು ಜಿಪಂ ಅಧ್ಯಕ್ಷ ರಾಜಶೇಖರಗೌಡ ವಜ್ಜಲ ತಾಕೀತು ಮಾಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳು ಕಾರ್ಯಕ್ರಮ ಆಯೋಜಿಸಿದಾಗ ಜಿಪಂ ಸದಸ್ಯರಿಗೆ ಮಾಹಿತಿ ನೀಡುವ ಜತೆಗೆ ಆಹ್ವಾನಿಸಬೇಕು. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್‌. ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 116.4 ಲಕ್ಷ ರೂಪಾಯಿಗಳನ್ನು ರೈತರ ಆತ್ಮಹತ್ಯೆ ಇನ್ನಿತರ ಪರಿಹಾರಗಳಿಗೆ ಖರ್ಚಾಗಿದೆ.ಎರಡು ಪ್ರಕರಣದಲ್ಲಿ ಎಫ್‌ಎಸ್‌ಎಲ್‌ ವರದಿ ಬರಬೇಕಿದೆ ಎಂದು ಮಾಹಿತಿ ನೀಡಿದರು.

ಚೀನಾದಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್‌ ಬಗ್ಗೆ ಜಿಲ್ಲೆಯಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಸ್ವಚ್ಛತೆ ಕುರಿತಂತೆ ಅರಿವು ಮೂಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಆಮೆಗತಿಂಯಲ್ಲಿ ಸಾಗುತ್ತಿವೆ. ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಕೆಆರ್‌ಐಡಿಎಲ್‌, ನಿರ್ಮಿತಿ ಕೇಂದ್ರ ಹಾಗೂ ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ವಿಭಾಗ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.

ನಿರ್ಮಿತಿ ಕೇಂದ್ರದಿಂದ ನಡೆಯುವ ಕಾಮಗಾರಿಗಳು ಹಲವೆಡೆ ಪೂರ್ಣಗೊಂಡಿಲ್ಲ. ಅಲ್ಲದೇ ಸುರಪುರ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳು ಶಿಥಿಲಗೊಂಡಿವೆ. ಮರು ನಿರ್ಮಾಣದ ಕೆಲಸಗಳು ಆಗಿಲ್ಲ. ಇನ್ನು ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿ ಬೆಡ್‌, ಕಾಟ್‌ ಹಾಗೂ ಕಾಂಪೌಂಡ್‌ ಸಮಸ್ಯೆಗಳಿವೆ. ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. ಇನ್ನು ದೇವದಾಸಿ ಪುನರ್ವಸತಿ ಯೋಜನೆಯಲ್ಲಿ ಈಗಾಗಲೇ ಇರುವ ಫಲಾನುಭವಿಗಳಿಗಷ್ಟೇ ಯೋಜನೆ ಲಾಭ ಕೊಡಬೇಕು. ದೇವದಾಸಿ ಎಂಬ ಅನಿಷ್ಠ ಪದ್ಧತಿ ನಿರ್ಮೂಲನೆ ಮಾಡಲು ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ಇನ್ನು ಕೆಲ ಹಳ್ಳಿಗಳಲ್ಲಿ ವಿದ್ಯುತ್‌ ತಂತಿಗಳು ಹಳೆಯದಾಗಿ ಜೋತು ಬಿದ್ದಿವೆ. ಕೆಲವು ಕಟ್‌ ಆಗಿ ಬೀಳುತ್ತಿವೆ. ಅವುಗಳನ್ನು ಸರಿಪಡಿಸಬೇಕು. ಜತೆಗೆ ಗಂಗಾಕಲ್ಯಾಣ ಯೋಜನೆಯಲ್ಲಿ ಕೊಳವೆಬಾವಿ ಹಾಕಿಸಿದ ಫಲಾನುಭವಿಗಳಿಗೆ ಮೂರ್ನಾಲ್ಕು ವರ್ಷಗಳಿಂದ ವಿದ್ಯುತ್‌ ಸಂಪರ್ಕ ನೀಡಿಲ್ಲ ಎಂದು ದೂರುಗಳು ಬರುತ್ತಿವೆ. ಶೀಘ್ರ ವಿದ್ಯುತ್‌ ಸಂಪರ್ಕ ನೀಡಬೇಕು ಎಂದು ಸೂಚಿಸಿದರು.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ ಮಾತನಾಡಿ, ಕೋಟಗೇರಾ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣ ಕಾರ್ಮಾಣ ಕಾಮಗಾರಿ ನನೆಗುದಿದೆ ಬಿದ್ದಿದೆ. ಅದನ್ನು ಏಕೆ ಪ್ರಾರಂಭಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ನಿರ್ಮಿತಿ ಕೇಂದ್ರದ ಅಧಿಕಾರಿ ಮಾತನಾಡಿ, ಪ್ರಕರಣ ಕೋರ್ಟ್‌ನಲ್ಲಿದೆ ಎಂದು ವಿವರಿಸಿದರು.

ಈಗಾಗಲೇ ಕಾಮಗಾರಿ ನಿರ್ವಹಣೆಗೆ 27 ಲಕ್ಷ ಖರ್ಚಾಗಿದೆ ಎಂದು ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್‌. ರೊಟ್ನಡಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರೆಡ್ಡಿ ಗೌಡ ಇದ್ದರು.

ಜಿಪಂ ಉಪ ಕಾರ್ಯದರ್ಶಿ ಮುಕ್ಕಣ ಕರಿಗಾರ, ಜಿಪಂ ಮುಖ್ಯ ಯೋಜನಾಧಿಕಾರಿ ಸುನೀಲ ಬಿಸ್ವಾಸ್‌, ಜಿಪಂ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.