ಯಾದಗಿರಿ: 17ರ ವರೆಗೆ ನಿಷೇಧಾಜ್ಞೆ
Team Udayavani, May 14, 2020, 5:38 AM IST
ಯಾದಗಿರಿ: ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ 19 ಪಾಸಿಟಿವ್ ಸೋಂಕು ದೃಢಪಟ್ಟಿರುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮೇ 12ರ ಮಧ್ಯರಾತ್ರಿಯಿಂದ ಮೇ 17ರ ಮಧ್ಯರಾತ್ರಿ ವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಎಂ.ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ಬಟ್ಟೆ, ಚಿನ್ನದ ಅಂಗಡಿ ಹೊರತುಪಡಿಸಿ ಜಿಲ್ಲೆಯಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 7:00ರಿಂದ ಮಧ್ಯಾಹ್ನ 1:00ರವರೆಗೆ ಮಾತ್ರ ತೆರೆಯಲು ಅನುಮತಿ ನೀಡಿದ್ದಾರೆ. ಮದ್ಯ ಮಾರಾಟ ಸನ್ನದುಗಳಾದ ಸಿಎಲ್-02, ಸಿಎಲ್-04, ಸಿಎಲ್-07, ಸಿಎಲ್-09 ಹಾಗೂ ಸಿಎಲ್-11 ಸಿ ಅಂಗಡಿಗಳು ಜಿಲ್ಲಾದ್ಯಂತ ಬೆಳಗ್ಗೆ 7:00ರಿಂದ ಮಧ್ಯಾಹ್ನ 1:00ರ ವರೆಗೆ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ವಯ ಮಾತ್ರ ಕಾರ್ಯನಿರ್ವಹಿಸತಕ್ಕದ್ದು ಎಂದು ಸೂಚಿಸಿದ್ದಾರೆ. ಕಂಟೇನ್ಮೆಂಟ್ ವಲಯಕ್ಕೆ ಸಂಬಂಧಿ ಸಿದಂತೆ ಪ್ರತ್ಯೇಕ ಕಟ್ಟುನಿಟ್ಟಿನ ನಿರ್ಬಂಧನೆಗಳು ಇರುವುದರಿಂದ ಈ ಆದೇಶ ಅನ್ವಯಿಸುವುದಿಲ್ಲ. ಈ ಆದೇಶ ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧ ಅಂಗಡಿಗಳು ಇತ್ಯಾದಿ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.