ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಬಸ್‌ ಪ್ರಯಾಣ ದರ ಶೇ. 12 ಹೆಚ್ಛಿಸಿ ಬಡವರ ಮೇಲೆ ಗದಾ ಪ್ರಹಾರ

Team Udayavani, Feb 28, 2020, 12:39 PM IST

28-Febraury-9

ಯಾದಗಿರಿ: ಬಸ್‌ ಪ್ರಯಾಣ ಮತ್ತು ಅನಿಲ ದರ ಏರಿಕೆ ವಿರೋಧಿಸಿ ಮತ್ತು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಸ್‌ಯುಸಿಐಸಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಕೆ. ಸೋಮಶೇಖರ, ಸಾರಿಗೆ ಸಂಸ್ಥೆಗಳು ಬಸ್‌ ಪ್ರಯಾಣ ದರ ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ್ದರಿಂದ ಬಡವರ ಹೊಟ್ಟೆ ಮೇಲೆ ಬರೆ ಹಾಕಿದಂತಾಗಿದೆ. ವಾರದ ಹಿಂದೆ ಅನಿಲ ದರ ಹೆಚ್ಚಿಗೆ ಮಾಡಲಾಗಿದೆ. ಹಾಲಿನ ದರ ಹೆಚ್ಚಾಗಿದೆ. ಪಡಿತರದಲ್ಲಿ ಪ್ರತಿಯಬ್ಬರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯಲ್ಲಿ 2 ಕೆಜಿ ಅಕ್ಕಿ ಕಡಿತಗೊಳಿಸಲಾಗಿದೆ. ಹೀಗಾಗಿ ಬಡವರು ನೆಮ್ಮದಿಯಿಂದ ಬದುಕಲು ಸರ್ಕಾರ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್‌ -ಡೀಸೆಲ್‌ ದರ ಏರಿಕೆ ಮಾಡುತ್ತಿದೆ. ರೈಲು ಪ್ರಯಾಣ ದರ ಏರಿಸಿದೆ. ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿಸಿವೆ. ಆ ಮೂಲಕ ಜನ ಸಾಮಾನ್ಯರ ಬೆನ್ನಿನ ಮೇಲೆ ಒಂದಾದ ಮೇಲೊಂದರಂತೆ ದೊಡ್ಡ ದೊಡ್ಡ ಬರೆಗಳನ್ನು ಎಳೆದಿದೆ. ಇನ್ನೊಂದೆಡೆ ರಾಜ್ಯ ಸರ್ಕಾರ ಇತ್ತೀಚೆಗೆ ಹಾಲಿನ ದರ ಏರಿಸಿದೆ.

ಪಡಿತರ ಅಂಗಡಿಗಳಲ್ಲಿ ವಿತರಿಸುತ್ತಿರುವ ವಿವಿಧ ಸಬ್ಸಿಡಿ ಆಹಾರ ದಾನ್ಯಗಳನ್ನು ಕಡಿತ ಮಾಡಿದೆ. ಬಿಪಿಎಲ್‌ ಕುಟುಂಬದ ಪ್ರತಿ ವ್ಯಕ್ತಿಗೆ ವಿತರಿಸುತ್ತಿದ್ದ 7 ಕೆಜಿ ಅಕ್ಕಿಯಲ್ಲಿ 2 ಕೆಜಿ ಕಡಿತ ಮಾಡುವುದಾಗಿ ಪ್ರಕಟಿಸಿದೆ. ಕಳೆದ ಎರಡು ವರ್ಷಗಳ ಸತತ ಪ್ರವಾಹದಿಂದ ಸಂತ್ರಸ್ತರಾದ ಜನರು ಇನ್ನೂ ಚೇತರಿಸಿಕೊಂಡಿಲ್ಲ. ಇದೀಗ ಮತ್ತೇ ಶೇ. 12ರಷ್ಟು ಬಸ್‌ ಪ್ರಯಾಣ ದರ ಏರಿಕೆ ಗದಾ ಪ್ರಹಾರ ಮಾಡಿ ಬಡವರು ಮೇಲೇಳದಂತಹ ಹೊಡೆತ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಅನಿಲ ದರ ಏರಿಕೆ ಮಾಡಿರುವುದನ್ನು ನೋಡಿದರೆ ಬಡವರು ಬದುಕುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮನಬಂದಂತೆ ಪೆಟ್ರೋಲ್‌, ಅನಿಲ ದರಗಳನ್ನು ಏರಿಕೆ ಮಾಡಿದರೆ, ರಾಜ್ಯ ಸರ್ಕಾರ ಬಸ್‌ ಪ್ರಯಾಣ, ಹಾಲಿನ ದರ ಹೆಚ್ಚು ಮಾಡಿದೆ. ಕೂಡಲೇ ಕೇಂದ್ರ, ರಾಜ್ಯ ಸರ್ಕಾರಗಳು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು.

ಎಲ್ಲರಿಗೂ ಉದ್ಯೋಗ ನೀಡಬೇಕು. ಬಸ್‌ ಪ್ರಯಾಣ ದರ ಏರಿಕೆ ಕೂಡಲೇ ವಾಪಸ್‌ ಪಡೆಯಬೇಕು. ಇಲ್ಲವಾದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಘಟನೆ ಮುಖ್ಯಸ್ಥೆ ಉಮಾದೇವಿ, ರಾಮಲಿಂಗಪ್ಪ ಬಿ.ಎನ್‌., ಸೈದಪ್ಪ ಎಚ್‌.ಪಿ., ಸುಭಾಷಚಂದ್ರ ಬಿ.ಕೆ., ಸಿಂಧು ಬಿ., ಜಮಾಲ್‌ ಸಾಬ್‌, ನಾಗರಾಜ, ಮಲ್ಲಮ್ಮ, ಸಾಬಮ್ಮ, ಲಕ್ಷ್ಮಮ್ಮ, ದೇವಕಮ್ಮ, ನಜೀರಾಬೇಗಂ, ಅಮೀನಾಬೇಗಂ, ಮೈನೊದ್ಧೀನ್‌ ಇದ್ದರು.

ಟಾಪ್ ನ್ಯೂಸ್

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Praja-Souhda

Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.