ದಾಸರಲ್ಲಿ ಪುರಂದರದಾಸರು ಶ್ರೇಷ್ಠರು

ಬದುಕಿನ ಸುಖದುಃಖ ಹರಿ ಸಮರ್ಪಣೆ ಮಾಡಿ ನಿಶ್ಚಿಂತೆಯಿಂದಿರಿ: ನರಸಿಂಹಾಚಾರ್ಯ

Team Udayavani, Jan 27, 2020, 3:00 PM IST

27-Janauary-17

ಯಾದಗಿರಿ: ಕೀರ್ತನ ಸಾಹಿತ್ಯದಲ್ಲಿ ಪುರಂದರ ದಾಸರದ್ದು ಬಹು ದೊಡ್ಡ ಹೆಸರು. ಗಾತ್ರ-ಗುಣ ಎರಡರಲ್ಲೂ ಅವರ ಕೃತಿಗಳದು ಗಿರಿತೂಕ. ಯತಿವರ್ಯರಾದ ವ್ಯಾಸರಾಯರು ಪುರಂದರ ವ್ಯಕ್ತಿತ್ವಕ್ಕೆ ಮಾರು ಹೋಗಿ ದಾಸರೆಂದರೆ ಪುರಂದರದಾಸರಯ್ಯ ಎಂದು ಪರಮ ತೃಪ್ತಿಯ ಉದ್ಗಾರವೆತ್ತಿದ್ದಾರೆ. ಅಂತವರ ಕೀರ್ತನೆಗಳನ್ನು ಅರಿತು ಮೋಕ್ಷದ ಹಾದಿ ಕಾಣಬೇಕು ಎಂದು ಪಂ| ನರಸಿಂಹಾಚಾರ್ಯ ಪುರಾಣಿಕ ಹೇಳಿದರು.

ನಗರದ ರಾಘವೇಂದ್ರ ಪರಿಮಳ ಮಂಟಪದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ ಅಂಗವಾಗಿ ನಗರ ಕೀರ್ತನ ಸಂಕಿರ್ತನ ನಂತರದಲ್ಲಿ ಅವರು ಉಪನ್ಯಾಸ ನೀಡಿದರು. ಪುರಂದರದಾಸರು ವ್ಯಾಸರಾಯರಿಂದ ದೀಕ್ಷೆ ಪಡೆದು ಪುರಂದರ ವಿಠಲ ಎಂಬ ಅಂಕಿತ ಸ್ವೀಕರಿಸಿ ಮಧ್ವಮತಾನುಯಾಯಿಗಳಾಗಿದ್ದರೂ ವಿಶಾಲವಾದ ಭಾಗವತ ಮನೋಧರ್ಮ ಬೆಳೆಸಿಕೊಂಡವರು. ಆದ್ದರಿಂದಲೇ ಪುರಂದರದಾಸರು ಅಲ್ಲಿ ಮಾತ್ರವಲ್ಲ ಎಲ್ಲಿಯೂ ಸಲ್ಲುವ ಕನ್ನಡದ ಮಹಾಪುರುಷ. ಸಂತ ತ್ಯಾಗರಾಜರಂತಹ ಮಹಾಮಹಿಮರಿಂದಲೂ ಪೂಜಿಸಲ್ಪಟ್ಟ ಶ್ರೇಷ್ಠರು ಎಂದು ಹೇಳಿದರು.

ಪುರಂದರರು ತಮ್ಮ ಕೃಪಣತೆಗೆ ಪ್ರಸಿದ್ಧರಾದವರು. ಹೆಂಡತಿ ಸರಸ್ವತಿ ಔದಾರ್ಯ ಮತ್ತು ದೈವಭಕ್ತಿಯಿಂದ ಯಾವುದೋ ಒಂದು ಸಂದರ್ಭದಲ್ಲಿ ಪುರಂದರರಿಗೆ ಲೌಕಿಕ ಭೋಗದಲ್ಲಿ ಜಿಜ್ಞಾಸೆ ಹುಟ್ಟಿ ವೈರಾಗ್ಯ ಉಂಟಾಯಿತು. ಪುರಂದರದಾಸರು ತಿರುಪತಿ, ಶ್ರೀರಂಗ, ಕಳಸ, ಬೇಲೂರು, ನಂಜನಗೂಡು, ಶ್ರೀರಂಗಪಟ್ಟಣ, ಉಡುಪಿ, ಪಂಢರಾಪುರ ಕ್ಷೇತ್ರಗಳನ್ನು ಸಂದರ್ಶಿಸಿ ಸುಮಾರು 4 ಲಕ್ಷ ಕೀರ್ತನೆ ರಚಿಸಿದ್ದಾರೆ ಎಂದು ಹೇಳಿದರು.

ಮಾನವ ಜನ್ಮ ದೊಡ್ಡದು ಅದನು ಹಾನಿ ಮಾಡಬೇಡಿ ಹುಚ್ಚಪ್ಪಗಳಿರಾ ಎಂದು ಅವರ ಮೊರೆ. ಈಸಬೇಕು ಇದ್ದು ಜಯಿಸಬೇಕು. ನರಜನ್ಮ ಬಂದಾಗ ನಾಲಿಗೆ ಇರುವಾಗಕೃಷ್ಣ
ಎನಬೇಕು. ಬದುಕಿನ ಸುಖ ದುಃಖಗಳನ್ನೆಲ್ಲ ಹರಿಸಮರ್ಪಣೆ ಮಾಡಿ ನಿಶ್ಚಿಂತೆಯಿಂದಿರಬೇಕು. ಅಂತಹ ನಿಶ್ಚಿಂತೆ ಪುರಂದರ ವಿಠಲನ ಬಿಡದೆ ಚಿಂತಿಸಿದರೆ ನಮ್ಮ ಬದಕು ಹಸನವಾಗುವುದು ಎಂದು ಹೇಳಿದರು. ನಗರದ ಬಾಲಾಜಿ ಮಂದಿರದಿಂದ ರಾಘವೇಂದ್ರ ಪರಿಮಳ ಮಂಟಪದವವರಿಗೆ ನಗರ ಸಂಕೀರ್ತನೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಪುರುಷ ಹಾಗೂ ಮಹಿಳಾ ಭಜನಾ ಮಂಡಳಿ ಸದಸ್ಯರು ಸೇರಿದಂತೆ ಮಕ್ಕಳು, ವಿಪ್ರ ಮುಖಂಡರು ಭಾಗವಹಿಸಿದ್ದರು. ಪುರಂದರ ರಥೋತ್ಸವ ಹಾಗೂ ವಿಶೇಷ ಪೂಜೆ ನಂತರ ತೀರ್ಥ ಪ್ರಸಾದ ಮಾಡಲಾಯಿತು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.