![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 23, 2020, 12:52 PM IST
ಯಾದಗಿರಿ: ಜಿಲ್ಲೆಯ ಕಡೇಚೂರು- ಬಾಡಿಯಾಳ ಕೈಗಾರಿಕಾ ಪ್ರದೇಶದ ಎಸ್.ಬಿ ಪೈರಾಲೀಸಿಸ್ ಇಂಡಸ್ಟ್ರೀಸ್‌ನ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಸರ್ಕಾರ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕಳೆದ ಮಾ.10ರಂದು ಹಳೆಯ ಟೈರ್ ಗಳಿಂದ ಎಣ್ಣೆ ತೆಗೆಯುವ ವೇಳೆ ಬಾಯ್ಲರ್ ಸ್ಫೋಟಗೊಂಡು 8 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡ ಎಂಟು ಜನರಲ್ಲಿ ಹುಸೇನ್ ಮತ್ತು ಆರೀಫ್ ಇಬ್ಬರು ವ್ಯಕ್ತಿಗಳು ಮೃತ ಪಟ್ಟಿದ್ದರು. ಸ್ಫೋಟದಲ್ಲಿ ಗಾಯಗೊಂಡಿರುವ ಗಾಯಾಳುಗಳ ವೈದ್ಯಕೀಯ ವೆಚ್ಚದ ಶೇ.50 ಕಾರ್ಖಾನೆ ಆಡಳಿತ ವರ್ಗ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಿಂದ ಪಾವತಿ ಮಾಡಲಾಗುವುದು.
ಕಾರ್ಖಾನೆ ಆಡಳಿತ ವರ್ಗ ವೈದ್ಯಕೀಯ ವೆಚ್ಚ ಭರಿಸದಿದ್ದಲ್ಲಿ ಶೇ.100 ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯೇ ಭರಿಸಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪ್ರತಿಕ್ರಿಯಿಸಿ, ಬಾಯ್ಲರ್ ಸ್ಫೋಟದಲ್ಲಿ ಮೃತ ಹಾಗೂ ಗಾಯಾಳುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಮಂಡಲ ಅಧಿವೇಶನದಲ್ಲಿ ಒತ್ತಾಯಿಸಲಾಗಿತ್ತು. ಇದೀಗ ಸರ್ಕಾರ ಮೃತರಿಗೆ 3ಲಕ್ಷ ಹಾಗೂ ಗಾಯಾಳುಗಳಿಗೆ ವೈದ್ಯಕೀಯ ವೆಚ್ಚ ನೀಡುವುದಾಗಿ ತಿಳಿಸಿದೆ ಎಂದಿದ್ದಾರೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.