ಸರ್ವಾಂಗೀಣ ಅಭಿವೃದ್ಧಿಗೆ ದುಡಿಯೋಣ

ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಒತ್ತು  ಜಿಲ್ಲೆಯಲ್ಲಿ ಗುಳೆ ತಪ್ಪಿಸಲು ಉದ್ಯೋಗ ಖಾತ್ರಿ ಯೋಜನೆ ವರದಾನ

Team Udayavani, Jan 27, 2020, 12:32 PM IST

27-Janauary-8

ಯಾದಗಿರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಧ್ವಜಾರೋಹಣ ನೆರವೇರಿಸಿದರು

ಯಾದಗಿರಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು, ಅಧಿಕಾರಿಗಳು, ವೈದ್ಯರು, ಸರ್ವರು ಬದ್ಧತೆಯಿಂದ ತನು, ಮನದಿಂದ ದುಡಿಯೋಣ. ಈ ಮೂಲಕ ಯಾದಗಿರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸೋಣ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ ಹಾಗೂ ಭಾವೈಕ್ಯತಾ ಸಮಿತಿ ಸಂಯುಕ್ತಾಶ್ರಯದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ 71ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಗಣರಾಜ್ಯವಾದ ತರುವಾಯ ಜಿಲ್ಲೆ ಅನೇಕ ಬೆಳವಣಿಗೆ ಕಂಡಿದೆ. ನೂತನ ಜಿಲ್ಲೆಯಾದ ಯಾದಗಿರಿಗೆ ಈಗ ದಶಕದ ಸಂಭ್ರಮ. ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾದ ನಂತರ ನಿರೀಕ್ಷೆ ಮೀರಿ ಬೆಳೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ವಸತಿ, ಶಾಲೆ ಕಟ್ಟಡ, ಆಸ್ಪತ್ರೆ, ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುದ್ದೀಪ ಹೀಗೆ ಮುಂತಾದ ಅಭಿವೃದ್ಧಿ ಕಾರ್ಯಗಳಿಂದ ಜಿಲ್ಲೆ ಪ್ರಗತಿ ಪಥದಲ್ಲಿ ಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳ ಸಲಹೆ-ಸೂಚನೆಯಂತೆ ಪ್ರಮುಖವಾಗಿ ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಕಳೆದ ನವೆಂಬರ್‌ನಲ್ಲಿ ಆರೋಗ್ಯ ಮತ್ತು ಪೌಷ್ಟಿಕಾಂಶದ ಡೆಲ್ಟಾ ಸ್ಕೋರ್‌ನಲ್ಲಿ ಜಿಲ್ಲೆ ದೇಶಕ್ಕೆ 3ನೇ ರ್‍ಯಾಂಕ್‌ ಪಡೆದಿದೆ ಎಂದು ಹೇಳಿದರು.

ಗಣರಾಜ್ಯೋತ್ಸವ ಸಾರ್ವಭೌಮತ್ವದ ಸಂಕೇತ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆಯುವುದರೊಂದಿಗೆ ಮುನ್ನೂರು ವರ್ಷಗಳ ದಾಸ್ಯದ ಸರಪಳಿ ಕಳಚಿಕೊಂಡ ಭಾರತದಲ್ಲಿ 1950ರ ಜನವರಿ 26 ರಂದು ಸಂವಿಧಾನವನ್ನು ಅಧಿಕೃತವಾಗಿ ಜಾರಿಗೊಳಿಸಿ ವಿಶ್ವದಲ್ಲಿ ತಾನೂ ಒಂದು ಸಾರ್ವಭೌಮ ರಾಷ್ಟ್ರ ಎಂದು ಸಾರಿದ ದಿನವೇ ಗಣರಾಜ್ಯೋತ್ಸವ.

ದಾಸ್ಯದಿಂದ ಬಿಡುಗಡೆಯಾದ ಸಂದರ್ಭವನ್ನು  ಸ್ವಾತಂತ್ರ್ಯೋತ್ಸವ ಎಂದು ಆಚರಿಸಿದರೆ, ರಾಷ್ಟ್ರದ ಸಾರ್ವಭೌಮತ್ವದ ಸಂಕೇತವಾಗಿ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಹಾಗೂ ನೇತಾಜಿ ಸುಭಾಷಚಂದ್ರ ಬೋಸ್‌ ಅರಂತಹ ನಾಯಕರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದ ಸ್ವಾತಂತ್ರ್ಯ , ಸತ್ಯ-ಶಾಂತಿ ಹಾಗೂ ಅಹಿಂಸೆಯಿಂದ ಪ್ರೇರಿತಗೊಂಡಿದ್ದಾಗಿದೆ ಎಂದು ವಿವರಿಸಿದರು.

ಗಣರಾಜ್ಯದ ಇಂದಿನ ಅಸ್ತಿತ್ವಕ್ಕೆ ಸಂವಿಧಾನವೇ ತಳಹದಿ. ಸಂವಿಧಾನ ಕರಡು ಸಮಿತಿಯಲ್ಲಿ ಮತ್ತು ರಚನಾ ಸಭೆಯಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಪಾತ್ರ ವಿಶೇಷವಾಗಿತ್ತು. ತಮ್ಮ ಪಾತ್ರವನ್ನು ಸಂಪೂರ್ಣವಾಗಿ ನಿರ್ವಹಿಸುವಲ್ಲಿ ಡಾ|ಅಂಬೇಡ್ಕರ್‌ ಅವರಿಗೆ ಹಲವಾರು ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿದ ಅನುಭವ ನೆರವಾಯಿತು. ಅವರ ಸೇವೆಗೆ ಮನ್ನಣೆ ದೊರೆತು ಅವರನ್ನು ಸಂವಿಧಾನದ ಪಿತಾಮಹ ಎಂದು ನಾವು ಸ್ಮರಿಸುವಂತಾಗಿದೆ ಎಂದು ಹೇಳಿದರು.

ಜಿಲ್ಲೆಯ ಜನರು ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನೆರವಾಗುತ್ತಿದೆ. ಈ ಯೋಜನೆಯಡಿ 2019-20ನೇ ಸಾಲಿನಲ್ಲಿ 26.61 ಲಕ್ಷ ಮಾನವ ದಿನಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ 19.27 ಲಕ್ಷ ಮಾನವ ದಿನಗಳ ಗುರಿ ತಲುಪಿದ್ದು, ಶೇ.72.41 ರಷ್ಟು ಸಾಧಿಸಲಾಗಿದೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ 2013-14ರಿಂದ 2019-20ನೇ ಸಾಲಿನವರೆಗೆ ಒಟ್ಟು 2,506 ಕಾಮಗಾರಿ
ಕೈಗೊಂಡಿದ್ದು, ಇವುಗಳಲ್ಲಿ 1696 ಕಾಮಗಾರಿಗಳು ಪೂರ್ಣಗೊಂಡಿವೆ. 578 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಸಕಾಲ ಅರ್ಜಿಗಳ ವಿಲೆವಾರಿಯಲ್ಲಿ ನವೆಂಬರ್‌- 2019ರ ಮಾಹೆಯಲ್ಲಿ ಯಾದಗಿರಿ ಜಿಲ್ಲೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಕಾಲ ಹಾಗೂ ಕಾರ್ಮಿಕ ಸಚಿವ ಎಸ್‌. ಸುರೇಶಕುಮಾರ ಜಿಲ್ಲೆಯ ಭೂಮಿ ಅಧಿಕಾರಿ, ಸಿಬ್ಬಂದಿ ಕಾರ್ಯ ಅಭಿನಂದಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ತಾಪಂ ಅಧ್ಯಕ್ಷೆ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ್‌ ಭಗವಾನ್‌ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

ಪಾಲ್ಗೊಂಡಿದ್ದರು. ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಮತ್ತು ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸರಕಾರಿ ಪದವಿ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿ ಡಾ| ಜ್ಯೋತಿಲತಾ ತಡಿಬಿಡಿಮಠ ನಿರೂಪಿಸಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ ವಂದಿಸಿದರು.

ಟಾಪ್ ನ್ಯೂಸ್

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.