ಸರ್ವಜ್ಞನ ವಚನಗಳು ಸಾರ್ವಕಾಲಿಕ

ಸಂತ ಕವಿಗೆ ಗಣ್ಯರಿಂದ ಪುಷ್ಪ ನಮನಸಮಾಜ ಬದಲಾವಣೆಗೆ ಪ್ರತಿಯೊಬ್ಬರ ಮನಸ್ಥಿತಿ ಬದಲಾಗಲಿ

Team Udayavani, Feb 21, 2020, 12:09 PM IST

21-February-8

ಯಾದಗಿರಿ: ಅಂದಿನ ಸಾಮಾಜಿಕ ವ್ಯವಸ್ಥೆಯಲ್ಲಿರುವ ಅಸಮಾನತೆಯನ್ನು ಸಂತ ಕವಿ ಸರ್ವಜ್ಞ ತ್ರಿಪದಿ ವಚನಗಳ ಮೂಲಕ ತಿದ್ದಿದ್ದರು. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ವಚನಗಳ ಸಂದೇಶ ಅರಿತುಕೊಳ್ಳುವ ಅಗತ್ಯವಿದೆ ಎಂದು ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಗುರುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತಕವಿ ಸರ್ವಜ್ಞ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂತಕವಿ ಸರ್ವಜ್ಞ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಬಾಚವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಬಂಗಾರಪ್ಪ ಕುಂಬಾರ ಯರಗೋಳ ಉಪನ್ಯಾಸ ನೀಡಿ, ಸರ್ವಜ್ಞನು ಗರ್ವದಿಂದ ಕಲಿತವನಲ್ಲ, ಸರ್ವರೊಳು ಒಂದೊಂದು ನುಡಿ ಕಲಿತು ಸರ್ವಜ್ಞನಾದನು. 16ನೇ ಶತಮಾನದಲ್ಲಿ ಸರಳ ಭಾಷೆ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಮ್ಮ ತ್ರಿಪದಿ ವಚನಗಳ ಮೂಲಕ ತಿದ್ದುವ ಕೆಲಸ ಮಾಡಿದವರಲ್ಲಿ ಕವಿ ಸರ್ವಜ್ಞ ಒಬ್ಬರಾಗಿದ್ದಾರೆ.  ಸರ್ವಜ್ಞ ಎಂಬುವುದು ಸರ್ವವನ್ನು ತಿಳಿದವರು ಎಂದು ಉತ್ತಂಗಿ ಚನ್ನಪ್ಪನವರ ಬರೆದ ಪುಸ್ತಕದಲ್ಲಿ ಉಲ್ಲೇಖವಿದೆ. ತಂದೆ ಬಸವ ಅರಸ, ತಾಯಿ ಕುಂಬಾರ ಮಾಳಮ್ಮ ಅವರ ಮಗನಾಗಿ ಜನಿಸಿದ ಸರ್ವಜ್ಞ ಹಲವು ತ್ರಿಪದಿಗಳ ಮೂಲಕ ಹೆಸರಾಗಿದ್ದಾರೆ ಎಂದರು.

ಶಿಕ್ಷಣದಿಂದ ಸಮಾಜದ ಅಭಿವೃದ್ಧಿ: ಸರ್ವಜ್ಞ ಎಲ್ಲ ಸಮಸ್ಯೆಗಳಿಗೂ ವಚನಗಳ ಮೂಲಕ ಉತ್ತರ ನೀಡಿದ್ದಾರೆ. ಅವರ ವಚನಗಳನ್ನು ಪಾಲಿಸಿದರೆ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ. ಕುಂಬಾರ ಸಮಾಜದವರು ಮುಗ್ಧರು. ಯಾರಿಗೂ ಕೇಡು ಬಯಸಿದವರಲ್ಲ. ಎಲ್ಲರೊಂದಿಗೆ ಬೆರೆತು ಬದುಕುವ ಸಮಾಜವಾಗಿದೆ. ಪ್ರಸ್ತುತ ಸಮಾಜದಲ್ಲಿ ಎಲ್ಲವೂ ಡಿಜಿಟಲೀಕರಣವಾಗಿದೆ. ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಪ್ರತಯೊಬ್ಬರೂ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.

ಸಂತಕವಿ ಹಲವಾರು ತ್ರಿಪದಿ ವಚನಗಳು ಇಂದಿಗೂ ಪ್ರಕಾಶಿಸುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಭಜನಾ ಕಾರ್ಯಕ್ರಮಗಳಲ್ಲಿ ಸರ್ವಜ್ಞರ ವಚನಗಳು ಪ್ರಥಮದಲ್ಲೇ ಹೇಳುವರು. ಅದರಂತೆ ಕುಂಬಾರ ಸಮಾಜದ ಎಲ್ಲರೂ ಮಕ್ಕಳಿಗೆ ಸಂತಕವಿ ವಚನಗಳ ಬಗ್ಗೆ ತಿಳಿಸಬೇಕು ಎಂದರು.

ಕುಂಬಾರ ಸಮಾಜದ ಜಿಲ್ಲಾಧ್ಯಕ್ಷರಾದ ದೇವಿಂದ್ರಪ್ಪ ಕುಂಬಾರ ದರ್ಶನಾಪುರ, ಸಮಾಜದ ಜಿಲ್ಲಾ ಗೌರವಾಧ್ಯಕ್ಷ ಹಣಮಂತಪ್ಪ ಮಿನಾಸ್‌ಪುರ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು, ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.

ಕಲಾ ತಂಡದೊಂದಿಗೆ ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ನಗರದ ಹೊಸಳ್ಳಿ ಕ್ರಾಸ್‌ನಿಂದ ಜಿಲ್ಲಾಡಳಿತ ಭವನದವರೆಗೆ ಕಲಾತಂಡಗಳೊಂದಿಗೆ ಸಂತಕವಿ ಸರ್ವಜ್ಞರ ಭಾವಚಿತ್ರದ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.