ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ ನಿಷೇಧ

ವಿದ್ಯಾರ್ಥಿಗಳಿಗೆ ತ್ವರಿತಗತಿಯಲ್ಲಿ ಪ್ರವೇಶ ಪತ್ರ ವಿತರಿಸಿ ನಿಗದಿತ ಸಮಯದಲ್ಲಿ ಪ್ರಶ್ನೆ ಪತ್ರಿಕೆ ತಲುಪಿಸಿ

Team Udayavani, Feb 26, 2020, 1:15 PM IST

26-February-09

ಯಾದಗಿರಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ.4ರಿಂದ 23ರ ವರೆಗೆ ಜಿಲ್ಲೆಯ ಒಟ್ಟು 13 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು, ಅಧೀಕ್ಷಕರು ಹಾಗೂ ಸಿಬ್ಬಂದಿ ಮೊಬೈಲ್‌ ಫೋನ್‌ ಸೇರಿದಂತೆ ಇತರೆ ಯಾವುದೇ ವಿದ್ಯುನ್ಮಾನ ಸಾಧನ ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಕಟ್ಟುನಿಟ್ಟಾಗಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-2020ರ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗಳು ಮಕ್ಕಳ ಭವಿಷ್ಯ ನಿರ್ಧರಿಸುತ್ತವೆ. ಕೆಲವರ ತಪ್ಪಿನಿಂದ ಮುಗ್ಧ ವಿದ್ಯಾರ್ಥಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಮೊಬೈಲ್‌ ಫೋನ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಮಾಹಿತಿ, ದಾಖಲೆ ಚಿತ್ರೀಕರಿಸುವುದು, ಚಿತ್ರೀಕರಿಸಲು ಪ್ರಯತ್ನಿಸುವುದು ಮತ್ತು ಸಮೂಹ ಮಾಧ್ಯಮ ಅಥವಾ ಜಾಲತಾಣಗಳಲ್ಲಿ ಹರಿದಾಡುವಂತೆ ಮಾಡುವುದು ಅಪರಾಧವಾಗಿದೆ. ಒಂದು ವೇಳೆ ಕಂಡುಬಂದಲ್ಲಿ ಇಲಾಖಾ ಕ್ರಮದಂತೆ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಾಧ್ಯಮದವರಿಗೂ ಕೂಡ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿಲ್ಲ. ಯಾವುದೇ ಪ್ರಕರಣಗಳು ಕಂಡುಬಂದಾಗ ಸಿಸಿ ಟಿವಿ ಕ್ಯಾಮೆರಾಗಳು ಸಾಕ್ಷ್ಯ ಒದಗಿಸುತ್ತವೆ. ಆದ್ದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಇವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತಂತೆ ಪರಿಶೀಲಿಸಬೇಕು. ಇನ್ನು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ತ್ವರಿತಗತಿಯಲ್ಲಿ ವಿತರಿಸಬೇಕು ಎಂದು ನಿರ್ದೇಶಿಸಿದರು.

ಸೂಕ್ಷ್ಮ ಪರೀಕ್ಷಾ ಕೇಂದ್ರಗಳಾದ ಸುರಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಭು ಪದವಿ ಪೂರ್ವ ಕಾಲೇಜು ಮತ್ತು ರಂಗಂಪೇಟನ ಡಾ| ಬಾಬಾಸಾಹೇಬ ಅಂಬೇಡ್ಕರ್‌ ಕಾಲೇಜುಗಳಿಗೆ ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ವಿದ್ಯುತ್‌ ಸೌಕರ್ಯ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿಸಬೇಕು. ಪರೀಕ್ಷೆ ಅತಿ ಸೂಕ್ಷ್ಮ ಪ್ರಕ್ರಿಯೆಯಾಗಿದೆ. ಈ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದೊಳಗೆ ತಲುಪಿಸಬೇಕು. ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್‌ ಅಳವಡಿಸುತ್ತಿದ್ದು, ನಿಗದಿಪಡಿಸಿದ ಮಾರ್ಗದಲ್ಲೆ ಚಲಿಸಬೇಕು ಎಂದು ಸೂಚಿಸಿದರು.

ಕೊಠಡಿಯಿಂದ ಹೊರಗೆ, ಕಾರಿಡಾರ್‌ ಅಥವಾ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಸುವಂತಿಲ್ಲ. ಪರೀಕ್ಷಾ
ಕೇಂದ್ರಗಳ ಸುತ್ತಲೂ 200 ಮೀಟರ್‌ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು. ಪರೀಕ್ಷಾಕೇಂದ್ರದ ಸಂಪೂರ್ಣ ಜವಾಬ್ದಾರಿ ಮುಖ್ಯ ಅಧೀಕ್ಷಕರಾಗಿ ನೇಮಕಗೊಂಡ ಅಧಿಕಾರಿಯದ್ದಾಗಿರುತ್ತದೆ. ಪರೀಕ್ಷಾ ಕಾರ್ಯಗಳಿಗಾಗಿ ನೇಮಕಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಕೇಂದ್ರದಲ್ಲಿರಬೇಕು. ಅನ್ಯ ವ್ಯಕ್ತಿಗಳು ಕೇಂದ್ರದೊಳಗೆ ಕಂಡುಬಂದಲ್ಲಿ ಮುಖ್ಯ ಅಧೀಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಾಟರ್‌ ಬಾಯ್‌ಗಳ ನೇಮಕ ರದ್ದುಪಡಿಸಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯನ್ನು 2, 3
ಕೊಠಡಿಗಳ ಅಂತರದಲ್ಲಿ ಕೊಠಡಿ ಹೊರಗೆ ವ್ಯವಸ್ಥೆ ಮಾಡಬೇಕು. ಆಯಾ ದಿನದ ವಿಷಯ ಪರೀಕ್ಷೆಗಳು ಮುಗಿದ ತಕ್ಷಣವೇ ಉತ್ತರ ಪತ್ರಿಕೆಗಳನ್ನು ಕ್ರೂಢೀಕರಿಸಿ ಬಂಡಲ್‌ ಗಳನ್ನು ಸೀಲು ಮಾಡಿ ರವಾನಿಸಬೇಕು ಎಂದು ಸೂಚಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್‌.
ಸೋಮನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.