ಗೆರಿಲ್ಲಾ ತಂತ್ರಕ್ಕೆ ಖ್ಯಾತಿ ಶಿವಾಜಿ ಮಹಾರಾಜ
ಹಿಂದೂ ಧರ್ಮ ರಕ್ಷಣೆಗೆ ಹೋರಾಡಿದ ಕೀರ್ತಿ ಒಂದು ಸಮಾಜಕ್ಕೆ ಸೀಮಿತ ವ್ಯಕ್ತಿಯಲ್ಲ
Team Udayavani, Feb 20, 2020, 5:29 PM IST
ಯಾದಗಿರಿ: ಶಕ್ತಿ ಮತ್ತು ಯುಕ್ತಿಯ ಸಂಗಮವಾಗಿದ್ದ ಶಿವಾಜಿ ಮಹಾರಾಜರು ದೇಶಭಕ್ತಿಯ ಪ್ರತೀಕವಾಗಿದ್ದರು. ಸ್ವರಾಜ್ಯದ ಕಲ್ಪನೆಯನ್ನು ಮೊದಲು ಪ್ರತಿಪಾದಿಸಿದ್ದರು. ಪ್ರತಿದಿನವೂ ಶಿವಾಜಿ ಮಹಾರಾಜರ ಆಡಳಿತವನ್ನು ಮೆಲುಕು ಹಾಕಿದಾಗ ಮಾತ್ರ ನಾವು ರಾಷ್ಟ್ರ ರಕ್ಷಣೆಗೆ ಸಿದ್ಧರಾಗಲು ಸಾಧ್ಯವಾಗುತ್ತದೆ ಎಂದು ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಗೆರಿಲ್ಲಾ ಯುದ್ಧತಂತ್ರದ ಪರಿಕಲ್ಪನೆಯ ಮೂಲಕ ದೇಶದ ಸಂರಕ್ಷಣೆಗೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರವರ ದೇಶಪ್ರೇಮ, ಜೀವನದ ತತ್ವಾದರ್ಶಗಳನ್ನು ಯುವ ಸಮುದಾಯ ಅಳವಡಿಸಿಕೊಂಡಾಗ ಸುಭದ್ರವಾದ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ. ಮಹಾರಾಜರು ಯಾವುದೇ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲ.
ಇಡೀ ದೇಶಕ್ಕೆ ಒಂದು ಶಕ್ತಿ ಇದ್ದಂತೆ ಎಂದು ಅಭಿಪ್ರಾಯಪಟ್ಟರು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಸರ್ವೋದಯ ಶಿವಪುತ್ರ ಉಪನ್ಯಾಸ ನೀಡಿ, ಶಿವಾಜಿ ಮಹಾರಾಜರು 1627ರಲ್ಲಿ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಶಿವನೇರಿಯಲ್ಲಿ ಜನಿಸಿದರು. ತಾಯಿ ಜೀಜಾಬಾಯಿಯು ದೇವಗಿರಿಯ ಯಾದವ ರಾಜಮನೆತನ, ತಂದೆ ಶಹಾಜಿ ಬೋಸ್ಲೆಯು ಶಿಸೋಡಿಯ ರಾಜಮನೆತನದವರು ಆಗಿದ್ದರು. ಹೀಗಾಗಿ ಶಿವಾಜಿಗೆ ರಕ್ತಗತವಾಗಿ ಧೈರ್ಯ, ಶಕ್ತಿ ಹಾಗೂ ಕ್ಷತ್ರೀಯ ಗುಣಗಳಿದ್ದವು ಎಂದರು.
ರಾಷ್ಟ್ರದ ಸಂರಕ್ಷಣೆ, ಹಿಂದೂ ಸಂಸ್ಕೃತಿ, ಹಿಂದೂ ಧರ್ಮದ ಉಳಿವಿಗೆ ಗುಡ್ಡಗಾಡಿನ ಮಾವಳಿ ಜನಾಂಗದವರೊಂದಿಗೆ ಸಂಪರ್ಕ ಹೊಂದಿ ಗೆರಿಲ್ಲಾ ಯುದ್ಧ ತಂತ್ರದಿಂದ ಮೋಘಲರು, ದೆಹಲಿಯ ಸುಲ್ತಾನ್, ವಿಜಯಪುರದ ಆದಿಲ್‌ಶಾಹಿ ಸುಲ್ತಾನರು ಹಾಗೂ ಪೋರ್ಚ್‌ಗೀಸರೊಂದಿಗೆ ಅನೇಕ ಯುದ್ಧಗಳನ್ನು ಮಾಡಿದರು ಎಂದು ತಿಳಿಸಿದರು.
ಜೀಜಾಬಾಯಿ ಶಿವಾಜಿ ಮಹಾರಾಜರಿಗೆ ಚಿಕ್ಕಂದಿನಲ್ಲೆ ರಾಮಾಯಣ, ಮಹಾಭಾರತದ ಕಥೆಗಳು, ದೇಶಕಟ್ಟುವಲ್ಲಿ ಹೋರಾಡಿದ ಮಹಾಪುರುಷರ ಜೀವನ ಸಾಧನೆಗಳನ್ನು ಹೇಳಿ ಶಿವಾಜಿಯಲ್ಲಿ ಧೈರ್ಯ ತುಂಬುತ್ತಿದ್ದರು.
ಮರಾಠ ಸಮುದಾಯವನ್ನು ಸಂಘಟಿಸಿದ ಶಿವಾಜಿ ಮಹಾರಾಜರು ಸ್ತ್ರೀಯರಿಗೆ ಪ್ರಾಮುಖ್ಯತೆ ನೀಡಿದರು. ಸಾಮಾಜಿಕ, ರಾಜಕೀಯ, ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ರಕ್ಷಣೆ ಪಡೆಯಲು ಎಲ್ಲರೂ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅಗತ್ಯವಿದೆ. ಜೀಜಾಬಾಯಿಯವರಂತೆ ತಮ್ಮ ಮಕ್ಕಳಿಗೆ ಉತ್ತಮ ಜೀವನ ಮೌಲ್ಯಗಳನ್ನು ಹೇಳಿಕೊಡಬೇಕು ಎಂದು ಸಲಹೆ ನೀಡಿದರು.
ಛತ್ರಪತಿ ಎಂದರೆ ರಾಜರ ರಾಜ, ಅರಸರ ಅರಸ ಎಂದು ಅರ್ಥವಾಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜರು ಶಕ್ತಿಯಿಂದ ಮಾಡಲು ಆಗದ ಕೆಲಸವನ್ನು ಯುಕ್ತಿಯಿಂದ ಮಾಡುತ್ತಿದ್ದರು. ಕಲ್ಯಾಣ ಕರ್ನಾಟಕಕ್ಕೆ ಕೂಡ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅಪಾರವಾಗಿದೆ. ಮುಂದಾಲೋಚನೆ, ತೀಕ್ಷ ಮತಿಯುಳ್ಳವರಾಗಿದ್ದ ಶಿವಾಜಿ ಮಹಾರಾಜರು ಆಡಳಿತದ ಸುಧಾರಣೆಗೆ ಅಷ್ಟ ಪ್ರಧಾನರೆಂಬ ಮಂತ್ರಿಮಂಡಲ ರಚಿಸಿ ಆಡಳಿತಾತ್ಮಕವಾಗಿ ಅಪಾರ ಕೊಡುಗೆ ನೀಡಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಶ್ಚಂದ್ರ ಕೌಲಗಿ, ಸಮಾಜದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಚವ್ಹಾಣ, ನಗರಸಭೆ ಮಾಜಿ ಸದಸ್ಯ ನಾರಾಯಣರಾವ್ ಚವ್ಹಾಣ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು, ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಗೀತ ಶಿಕ್ಷಕರಾದ ಚಂದ್ರಶೇಖರ ಗೋಗಿ ಹಾಗೂ ತಂಡದವರು ನಾಡಗೀತೆ ಹಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Water Price Hike: ಬಸ್ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.