ಸಾಮಾಜಿಕ ಅಂತರ ಕಾಪಾಡದೆ ಎಡವಟ್ಟು
Team Udayavani, Apr 30, 2020, 1:56 PM IST
ಯಾದಗಿರಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎದುರು ರೈತರು ಗುಂಪಾಗಿ ಕುಳಿತಿರುವುದು
ಯಾದಗಿರಿ: ಹಸಿರು ವಲಯ ಪಟ್ಟಿಯಲ್ಲಿರುವ ಗಡಿ ಜಿಲ್ಲೆ ಯಾದಗಿರಿಗೆ ರಾಜ್ಯ ಸರ್ಕಾರ ಮಂಗಳವಾರವಷ್ಟೇ ಮೇ 3ರ ವರೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದರಿಂದ ಮೊದಲಿನಿಂದಲೂ ಲಾಕ್‌ಡೌನ್‌ನಿಂದ ಸ್ವಲ್ಪ ವಿನಾಯಿತಿ ಸಿಕ್ಕಿದ್ದು, ಬಹುತೇಕ ಕಡೆಗಳಲ್ಲಿ ಸಾಮಾಜಿಕ ಅಂತರ ಕಾಪಾಡದಿರುವುದು ಎಡವಟ್ಟು ಸಂಭವಿಸುತ್ತಿದೆ.
ಜಿಲ್ಲೆಯಲ್ಲಿ ಅಗತ್ಯ ವಸ್ತುಗಳು ಸೇರಿದಂತೆ ದಿನಸಿ ವ್ಯಾಪಾರ, ತರಕಾರಿ, ಕೃಷಿ ಚಟುವಟಿಕೆಗಳ ಸಾಮಗ್ರಿ, ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಉಪಕರಣಗಳ ಮಳಿಗೆ ಆರಂಭವಾಗಿರುವುದರಿಂದ ರಸ್ತೆಯಲ್ಲಿ ಜನರ ಓಡಾಟ ಕಂಡು ಬರುತ್ತಿದೆ. ಇದೀಗ ಕೈಗಾರಿಕೆ ವಲಯಕ್ಕೂ ಶೇ.50ರಷ್ಟು ಸಿಬ್ಬಂದಿ ಬಳಸಿಕೊಂಡು ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿದ್ದು, ಜಿಲ್ಲೆಯ ರೈಸ್‌ಮಿಲ್, ದಾಲ್‌ಮಿಲ್, ಕಾಟನ್‌ಮಿಲ್‌ಗಳು ಆರಂಭ ವಾಗಲಿವೆ. ಬೇಸಿಗೆ ದಿನವಾಗಿದ್ದರಿಂದ ಮನೆ ನಿರ್ಮಾಣದ ಕಾಮಗಾರಿಗಳು ಎಲ್ಲೆಡೆ ಸಾಗಿದ್ದು, ಜನರು ಕಬ್ಬಿಣದ ವಸ್ತುಗಳು ಸೇರಿದಂತೆ ಇತರೆ ಉಪಕರಣ ಖರೀದಿಸಲು ಹಾರ್ಡ್‌ವೇರ್ ಅಂಗಡಿಗಳ ಎದುರು ಜಮಾವಣೆಗೊಳ್ಳುತ್ತಿದ್ದು, ಸಾಮಾಜಿಕ ಅಂತರ ಗಾಳಿಗೆ ತೂರಲಾಗುತ್ತಿದೆ.
ಮಂಗಳವಾರವಷ್ಟೇ ಜಿಲ್ಲಾಧಿಕಾರಿಗಳು ಸಹಕಾರಿ ಬ್ಯಾಂಕ್‌ಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಿದ್ದರು. ಆದರೇ ಇಂದು ಬ್ಯಾಂಕ್‌ಗೆ ಬಂದಿದ್ದ ರೈತರು ಗುಂಪು ಗುಂಪಾಗಿ ನೆಲದ ಮೇಲೆಯೇ ಕುಳಿತುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.