ಸಿಎಂ ಆಗಿ ಬಿಎಸ್‌ವೈ ಅವರೇ ಮುಂದುವರೆಯಲಿ : ಯಾದಗಿರಿಯಲ್ಲಿ ಮಠಾಧೀಶರ ಒತ್ತಾಯ
Team Udayavani, Jul 22, 2021, 6:12 PM IST
ಯಾದಗಿರಿ: ಬಿ.ಎಸ್ ಯಡಿಯೂರಪ್ಪನವರು ಹಲವು ವರ್ಷಗಳಿಂದ ಜನಪರ ಹೋರಾಟದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಎಲ್ಲಾ ವರ್ಗದ ಜನರಿಗೆ ಜನಪರ ಯೋಜನೆಗಳನ್ನು ನೀಡಿದ್ದಾರೆ.ಎಲ್ಲ ಜಾತಿಯ ಜನರ ಪ್ರೀತಿ ವಿಶ್ವಾಸ ಅವರ ಮೇಲಿದೆ. ಅವರ ಆಡಳಿತ ರಾಜ್ಯಕ್ಕೆ ಅವಶ್ಯಕವಿದೆ ಎಂದು ಯಾದಗಿರಿಯಲ್ಲಿ ಮಠಾಧೀಶರು ಬಿಎಸ್‌ವೈ ಪರ ಬ್ಯಾಟಿಂಗ್ ಮಾಡಿದರು.
ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ವೀರಶೈವ ಮಠಾಧೀಶರ ಒಕ್ಕೂಟದಿಂದ ಆಯೋಜಿಸಿದ ಸುದ್ದೀಗೋಷ್ಠಿಯಲ್ಲಿ ಮಾತನಾಡಿದ ಡಾ.ಗಂಗಾಧರ ಶ್ರೀ, ಬಿಜೆಪಿ ಹೈ ಕಮಾಂಡ್ ಬಿಎಸ್‌ವೈರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಸೂಕ್ತ ಎಂದರು.
ಗುರುಮಠಕಲ್ ಖಾಸಾಮಠದ ಪೀಠಾಧೀಪತಿ ಶಾಂತವೀರ ಗುರು ಮುರುಘರಾಜೇಂದ್ರ ಮಹಾ ಸ್ವಾಮೀಜಿ ಮಾತನಾಡಿ, ಬಿ.ಎಸ್ ಯಡಿಯೂರಪ್ಪನವರು ವೀರಶೈವ ಸಮಾಜದ ಹಿರಿಯ ನಾಯಕರಲ್ಲದೆ, ರಾಜ್ಯದ ಎಲ್ಲಾ ಸಮಾಜದ ಜನರನ್ನು ಒಟ್ಟಿಗೆ ತೆಗೆದು ಕೊಂಡು ಹೋಗುವ ಜೊತೆಗೆ ಪ್ರಗತಿ ಪೂರಕ ಆಡಳಿತ ನೀಡಿದ್ದಾರೆ. ಆದ್ದರಿಂದ ಬಿಜೆಪಿ ಹೈ ಕಮಾಂಡ್ ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ನೇರಡಗುಂಬದ ಪಂಚಮ ಸಿದ್ದಲಿಂಗ ಸ್ವಾಮೀಜಿ, ಹೆಡಗಿಮದ್ರಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಶಹಾಪೂರದ ಪಕೀರೇಶ್ವರ ಮಠದ ಪೀಠಾಧಿಪತಿ ಗುರುಪಾದಯ್ಯ ಸ್ವಾಮೀಜಿ, ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ, ಕಡೇಚೂರಿನ ಗುರುಮೂರ್ತಿ ಶಿವಾಚಾರ್ಯರು, ಕೆಂಬಾವಿ ಹಿರೇಮಠದ ಚನ್ನಬಸವ ಶಿವಾಚಾರ್ಯರು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.