ಮತದಾನ ಪ್ರತಿಯೊಬ್ಬ ಪ್ರಜೆ ಕರ್ತವ್ಯ

ರಾಷ್ಟ್ರೀಯ ಮತದಾರರ ದಿನಾಚರಣೆಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಮತದಾನ ಅವಶ್ಯ

Team Udayavani, Jan 26, 2020, 6:32 PM IST

26-January-27

ಯಾದಗಿರಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಇತರೆ ದೇಶಗಳಿಂದ ಮಹತ್ವದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಉಳಿವು ಮತ್ತು ರಾಷ್ಟ್ರದ ಭದ್ರತೆಗೆ 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಅಧ್ಯಕ್ಷ ಶಿವನಗೌಡ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವು ದೇಶಗಳಲ್ಲಿ ಸರ್ವಾ ಧಿಕಾರ ದೋರಣೆ ಆಡಳಿತ ಇದೆ. ಅಲ್ಲಿ ಜನಿಸಿದ ಯಾರಿಗೂ ಮತದಾನದ ಸ್ವಾತಂತ್ರ್ಯವಿಲ್ಲ. ಆದರೆ ಸ್ವತಂತ್ರ ಭಾರತದಲ್ಲಿ ಮತದಾನ ಮಾಡುವುದು ಎಲ್ಲರ ಕರ್ತವ್ಯ ಮತ್ತು ಹಕ್ಕು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಈ ಮೂರು ಅಂಗಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಮತದಾನ ಮಾಡಬೇಕು ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ನಾಮದೇವ ಕೆ. ಸಾಲಮಂಟಪಿ ಮಾತನಾಡಿ, ದೇಶವು ಹಲವು ಸಂಸ್ಕೃತಿ, ವರ್ಗ ಹಾಗೂ ವರ್ಣಗಳಿಂದ ಕೂಡಿದ್ದರೂ ಭಾರತದ ಸಂವಿಧಾನವು 18 ವರ್ಷ ತುಂಬಿದ ನಂತರ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ. ಇದನ್ನು ಯಾವುದೇ ಪ್ರಭಾವ, ಆಸೆ-ಆಮಿಷಗಳಿಗೆ ಒಳಗಾಗದೇ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು ಎಂದು ಹೇಳಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರ ಪ್ರಕಾಶ ಅರ್ಜುನ ಬನಸೊಡೆ ಮಾತನಾಡಿ, ರಾಷ್ಟ್ರೀಯ ಮತದಾರರ ದಿನವು 18 ವರ್ಷ ತುಂಬಿದವರಿಗೆ ಮತದಾನದ ಹಕ್ಕಿನ ಬಗ್ಗೆ ಜಾಗೃತಿ ಮಾಡಲು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ತಿಳಿವಳಿಕೆ ನೀಡಲು ಆಚರಿಸಲಾಗುತ್ತದೆ. ಭವ್ಯ ಭಾರತದ ನಿರ್ಮಾಣಕ್ಕೆ ಮತದಾನದ ಹಕ್ಕು ಪ್ರಮುಖವಾಗಿದೆ. ಪ್ರತಿಯೊಬ್ಬರೂ ನಿಷ್ಪಕ್ಷಪಾತವಾಗಿ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ನೀಡಿದರು.

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಬಿಎಲ್‌ ಒಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಸಿವಿಲ್‌ ನ್ಯಾಯಾಧೀಶ ಲೋಕೇಶ್‌ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಡಿವೈಎಸ್‌ಪಿ ಯು. ಶರಣಪ್ಪ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ ಉಪಸ್ಥಿತರಿದ್ದರು.

ಸರ್ಕಾರಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅಶ್ವಿ‌ನಿ ಪ್ರಾರ್ಥನಾ ಗೀತೆ ಹಾಡಿದರು. ಡಾನ್‌ ಬೊಸ್ಕೋ ಶಾಲೆ ವಿದ್ಯಾರ್ಥಿನಿ ಡಯಾನಾ ಹಾಗೂ ಸಂಗಡಿಗರು ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಸ್ವಾಗತಿಸಿದರು. ಶಿಕ್ಷಕ ಹಫೀಜ್‌ ಪಟೇಲ್‌ ನಿರೂಪಿಸಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್‌. ಸೋಮನಾಳ ವಂದಿಸಿದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.