ಯೋಗ-ಧ್ಯಾನ-ಸುದರ್ಶನ ಕ್ರಿಯಾ ಶಿಬಿರ
Team Udayavani, Dec 11, 2021, 12:30 PM IST
ಯಾದಗಿರಿ: ಯೋಗ, ಧ್ಯಾನ ಮತ್ತು ಸುದರ್ಶನ ಕ್ರಿಯೆಯಿಂದ ಶಾಂತಿ-ನೆಮ್ಮದಿ ಸಿಗಲು ಸಾಧ್ಯ. ಹೀಗಾಗಿ ಪ್ರತಿದಿನ ಯೋಗಾಸನ ಮಾಡಿ, ಅಪರಾಧಕ್ಕೆ ಕೊನೆಯಿಲ್ಲ. ಅದಕ್ಕಾಗಿ ಪರಿವರ್ತನೆಯಾಗೋದು ಬಹಳಮುಖ್ಯ. ನಾವು ಬದಲಾವಣೆಯಾದರೆ ಮಾತ್ರ ಜಗತ್ತು ಬದಲಾವಣೆ ಆಗುತ್ತದೆ. ಎಲ್ಲರೂ ಪರಿವರ್ತನೆಯಾದರೆ ಮಾತ್ರ ಕುಟುಂಬದಲ್ಲಿನ ಸದಸ್ಯರು ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಸಾಹಿಲ್ ಅಹ್ಮದ್ ಕುನ್ನಿಭಾವಿ ಅಭಿಪ್ರಾಯಪಟ್ಟರು.
ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಯೋಗ, ಧ್ಯಾನ ಮತ್ತು ಸುದರ್ಶನ ಕ್ರಿಯಾ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ ಎಂದು ಬಸವಣ್ಣನವರ ವಚನವನ್ನು ನ್ಯಾಯಾಧಿಧೀಶರು ಗುಣಗಾನ ಮಾಡಿ ಶರಣರ ತತ್ವಗಳನ್ನು ಎಲ್ಲರೂ ಮೈಗೂಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ ಮಾತನಾಡಿ, ಸಿಟ್ಟು ಮಾನವನ ಸಹಜವಾದ ಗುಣ. ಆದರೆ ಕೋಪ, ಆವೇಶದ ಕೈಗೆ ಬುದ್ದಿ ಕೊಟ್ಟರೆ ಆಗಬಾರದ ಅನಾಹುತಗಳು ನಡೆಯುವ ಸಂಭವವಿದೆ. ಅದಕ್ಕಾಗಿ ಸಿಟ್ಟು ಬಂದಾಗ ಅಂಕಿ-ಅಂಶಗಳನ್ನು ಎಣಿಸಿ ಅಥವಾ ದೀರ್ಘವಾದ ಉಸಿರು ಎಳೆದುಕೊಂಡು ದೇವರನ್ನು ಪ್ರಾರ್ಥಿಸಿ, ಯಾವುದೇ ಅಪರಾಧಗಳಲ್ಲಿ ಭಾಗಿಯಾಗುವುದಿಲ್ಲವೆಂದು ಪಣ ತೊಡಬೇಕು ಎಂದರು.
ಯೋಗ ಗುರು ಎಸ್.ಎಚ್ ರೆಡ್ಡಿ ಮಾತನಾಡಿ, ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಬೇಕು, ಆರೋಗ್ಯಕರ ಸಮಾಜದ ನಿರ್ಮಾಣದ ಗುರಿಯೇ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಗುರಿಯಾಗಿದೆ. ಯೋಗ, ಧ್ಯಾನ ಮತ್ತು ಪ್ರಾಣಾಯಾಮ ಮಾಡುತ್ತಾ ಮಾನಸಿಕ ಒತ್ತಡದಿಂದ ನಾವು ಹೊರಬರಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರಾಗೃಹದ ಅಧೀಕ್ಷಕ ಎಸ್.ಜಿ ರಾಠೊಡ್ ಮತ್ತು ಕಾರಾಗೃಹದ ಸಿಬ್ಬಂದಿ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.