ಹಿರಿಯ ಕಲಾವಿದೆಗೆ ರಾಜೋತ್ಸವ ಪ್ರಶಸ್ತಿ
ಶಾಂತಮ್ಮ ಪೂಜಾರ ಬದುಕು ರೂಪಿಸಿದ ರಂಗಭೂಮಿಜಿಲ್ಲಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
Team Udayavani, Oct 31, 2019, 3:09 PM IST
ಮಲ್ಲಪ್ಪ ಮಾಟರಂಗಿ
ಯಲಬುರ್ಗಾ: ರಂಗಭೂಮಿ ಕಲಾವಿದೆ ಪಟ್ಟಣದ ಶಾಂತಮ್ಮ ಪೂಜಾರ ಅವರಿಗೆ 2019-20ನೇ ಸಾಲಿನ ಜಿಲ್ಲಾ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಒಲಿದಿದೆ.
ಶಾಂತಮ್ಮ ಪೂಜಾರ ಅವರು 1985 ರಿಂದ ರಂಗಭೂಮಿ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಪೌರಾಣಿಕ, ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಶಾಂತಮ್ಮ ಅವರು ಕಣ್ಣು ನೋವಿನಿಂದ ಬಳಲುತ್ತಿದ್ದು, ಅಂಗವಿಕಲೆಯಾಗಿದ್ದಾರೆ. ಇವರು ಪ್ರಥಮ ಬಾರಿ ಪುತ್ಥಳಿ ಎಂಬ ನಾಟಕದಲ್ಲಿ ಅಭಿನಯಿಸಿದ್ದಾರೆ.
ಮೂವತ್ತು ವರ್ಷಗಳ ಹಿಂದೆಯೇ ಇವರು ರಂಗಭೂಮಿ ಬಗ್ಗೆ ಆಸಕ್ತಿ ಬೆಳೆಸಿಕೊಂಡು, ರಂಗಭೂಮಿಯಲ್ಲೇ ಸಕ್ರಿಯರಾಗಿದ್ದರು.
ಶಾಂತಮ್ಮರ ಪತಿ ಕೆಇಬಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಅವರು ಸಂಜೆ ವೇಳೆ ಮನೆ ಇರುತ್ತಿರಲಿಲ್ಲವಂತೆ. ಒಂದು ದಿನ ಅವರ ಮನೆ ಎದುರು ಹಾವು ಬಂದಿತ್ತು. ಇದರಿಂದ ಭಯಗೊಂಡ ಶಾಂತಮ್ಮ ಅವರು ಪತಿಯೊಂದಿಗೆ ತಾವೂ ಕೆಲಸಕ್ಕೆ ಹೋಗುತ್ತಿದ್ದರು. ಆಗ ಪಟ್ಟಣಕ್ಕೆ ಗೋಕಾಕ್, ಬಾದಾಮಿ ಸೇರಿ ಇನ್ನಿತರ ನಾಟಕ ಕಂಪನಿಗಳು ಆಗಮಿಸುತ್ತಿದ್ದವು. ಆ ಸಂದರ್ಭದಲ್ಲಿ ಇವರು ನಿತ್ಯ ನಾಟಕ ನೋಡುವ ಹವ್ಯಾಸ ಬೆಳೆಸಿಕೊಂಡು ನಂತರ ರಂಗಭೂಮಿಯಲ್ಲೇ ತೊಡಗಿಸಿಕೊಂಡಿದ್ದಾಗಿ ಸ್ಮರಿಸಿದರು.
ಹಲವು ಪಾತ್ರ: ಕಡ್ಲಿಮಟ್ಟಿ ಕಾಶಿಬಾಯಿ ಸೇರಿದಂತೆ ಹಲವಾರು ನಾಟಕಗಳಲ್ಲಿ ತಾಯಿ, ಮಗಳು, ಸೊಸೆ, ಅತ್ತೆ ಸೇರಿದಂತೆ ವಿವಿಧ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಗುಡಗೇರಿ, ಧುತ್ತರಗಿ, ಮಂಡಲಗಿರಿ ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚು ನಾಟಕ ಕಂಪನಿಗಳಲ್ಲಿ ಅಭಿನಯಿಸಿದ್ದಾರೆ.
ಇವರಿಗೆ ದಿ. ಗೋಕಾಕ ಬಸವಣೆಪ್ಪ, ಕುಕನೂರಿನ ರಹೆಮಾನವ್ವ ಕಲ್ಮನಿ ರಂಗಭೂಮಿ ಗುರುಗಳು. ಬಾದಾಮಿ, ಸಾಹಿತ್ಯ ಸಮ್ಮೇಳನ ಸೇರಿ ರಾಜ್ಯದ ಇತರೆಡೆಗಳಲ್ಲೂ ಕಲೆ ಪ್ರದರ್ಶಿಸಿ, ಸೈ ಎನಿಸಿಕೊಂಡಿದ್ದಾರೆ.
ಹಲವು ಪ್ರಶಸ್ತಿ: ಇವರಿಗೆ ಈಗಾಗಲೇ ಬಳ್ಳಾರಿ ರಂಗಭೂಮಿ ಕಲಾ ಸಂಸ್ಥೆಯವರು ರಂಗಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅಷ್ಟೇ ಅಲ್ಲದೇ ವಿವಿಧ ಸಂಘ ಸಂಸ್ಥೆಗಳು ಇವರ ಪ್ರತಿಭೆ ಗುರುತಿಸಿ ಸನ್ಮಾನಿಸಿವೆ. ನಾಟಕಗಳಲ್ಲಿ ಶಾಂತಮ್ಮ ಪಾತ್ರ ಇತ್ತೆಂದರೆ ರಂಗಮಂದಿರದ ತುಂಬಿರುತ್ತಿತ್ತು.
ಇಂದಿನ ಮಹಿಳಾ ಕಲಾವಿದರು ಇವರ ಬಳಿ ಬಂದು ಸಲಹೆ, ಮಾರ್ಗದರ್ಶನ ಪಡೆಯುತ್ತಾರೆ. ಶಾಂತಮ್ಮಗೆ ಓರ್ವ ಪುತ್ರಿ, ಇಬ್ಬರು ಪುತ್ರರಿದ್ದಾರೆ. ಜೀವನ ನಿರ್ವಹಣೆಗೆ ಸಣ್ಣ ಕಿರಾಣಿ ಅಂಗಡಿ ಇಟ್ಟುಕೊಂಡಿದ್ದಾರೆ. ರಾಜೋತ್ಸವ ಪ್ರಶಸ್ತಿಗೆ ಕೊನೆ ದಿನ 25ರಂದು ಅರ್ಜಿ ಹಾಕಿದ್ದೆ. ಆಯ್ಕೆಯಾಗುವ ಭರವಸೆ ಇರಲಿಲ್ಲ. ಆದರೂ ಪ್ರತಿಭೆ ಗುರುತಿಸಿ ಆಯ್ಕೆ ಮಾಡಿದ್ದು ಸಂತಸ ತಂದಿದೆ ಎಂದರು.
ರಂಗಭೂಮಿಯಿಂದ ಬದುಕು ಉತ್ತಮವಾಗಿದೆ. ಜೀವನ ನಿರ್ವಹಣೆಗೆ ಯಾವುದೇ ತೊಂದರೆಯಾಗಲಿಲ್ಲ, ಆದರೇ ಇಂದಿನ ಪೀಳಿಗೆ ನಾಟಕಗಳಲ್ಲಿ ಅಭಿನಯ ಮಾಡುವವರು ಸಂಪೂರ್ಣ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಪ್ರಸ್ತುತ ದಿನಮಾನಗಳಲ್ಲಿ ರಂಗಭೂಮಿ ಕಲೆ ಉಳಿಸಿ
ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ಇಲಾಖೆ ಹಾಗೂ ಜನಪ್ರತಿನಿಧಿ ಗಳು ಗಮನಹರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ನ. 1ರಂದು ಕೊಪ್ಪಳದಲ್ಲಿ ನಡೆಯುವ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.