ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ವೇದವ್ಯಾಸ್ ಕಾಮತ್
Team Udayavani, Sep 22, 2019, 1:31 PM IST
ಮಂಗಳೂರು: ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಪೂರ್ಣ ಪ್ರಮಾಣದ ಸಹಕಾರ ಒದಗಿಸುವುದಾಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಎಕ್ಕೂರು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಕೆಲವು ಸ್ಥಳಗಳನ್ನು ಗುರುತಿಸಿದ್ದು ನೂತನ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವ ಕಾರ್ಯ ಪ್ರಾರಂಭಿಸಲಾಗುವುದು. ಬೆಂಗ್ರೆ ಪ್ರದೇಶ ಸೇರಿದಂತೆ ಕೆಲವು ಕಡೆಗಳಲ್ಲಿ ಕಾಮಗಾರಿ ಆರಂಭವಾಗಿದ್ದು, ಇನ್ನಷ್ಟು ಅಂಗನವಾಡಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದರು.
ಗರ್ಭಿಣಿ ಸ್ತ್ರೀಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಕೊಡಮಾಡುವ ಪೌಷ್ಟಿಕ ಆಹಾರ ಪದಾರ್ಥಗಳನ್ನು ವ್ಯವಸ್ಥಿತವಾಗಿ ನೀಡಬೇಕು ಹಾಗೂ ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡಲಾಗುವ ಆಹಾರದ ಗುಣಮಟ್ಟವನ್ನೂ ಏರಿಸುವಂತೆ ಸರಕಾರಕ್ಕೆ ಮನವಿ ಮಾಡುವುದಾಗಿ ಇದೆ ವೇಳೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಪಿ, ಓಂಕಾರ ಶಾಖೆ ಅಧ್ಯಕ್ಷ ಭರತ್ ಶೆಟ್ಟಿ, ನಂದಾದೀಪ ಮಹಿಳಾ ಮಂಡಲದ ಮುಖಂಡರಾದ ತೇಜಸ್ವಿನಿ ಬಿ ಆಚಾರ್ಯ, ಅಂಗನವಾಡಿ ಮೇಲ್ವಿಚಾರಕಿ ಅನುಪಮ, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಗ್ರಾಮ ಕರಣಿಕ ರಾಜ್ ಕುಮಾರ್, ರತ್ನಾಕರ್ ರಾವ್, ಕಿರಣ್ ರೈ ಎಕ್ಕೂರು, ಭರತ್ ರಾಜ್ ಶೆಟ್ಟಿ ಎಕ್ಕೂರು ಮತ್ತಿತರರು ಉಪಸ್ಥಿತರಿದ್ದರು. ನಂದಾದೀಪ ಮಹಿಳಾ ಮಂಡಲದ ಕಾರ್ಯದರ್ಶಿ ರೇಖಾ ಶೆಟ್ಟಿ ನಿರೂಪಿಸಿ, ತನುಜಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.