ಮನಸೆಳೆಯುತ್ತಿವೆ ಗುಲ್‌ಮೊಹರ್!
Team Udayavani, Jun 3, 2021, 10:46 PM IST
ಆರ್.ಬಸವರೆಡ್ಡಿ ಕರೂರು
ಸಿರುಗುಪ್ಪ: ಮೇ ತಿಂಗಳಿನಲ್ಲಿಯೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ನೋಡಿದಲ್ಲೆಲ್ಲ ಈಗ ಕೆಂಪು ಪುಷ್ಪಗಳು ಸೂಜಿಗಲ್ಲಿನಂತೆ ಗಮನ ಸೆಳೆಯುತ್ತಿವೆ. ಮೇಫÉವರ್ ಎಂದೆ ಕರೆಯಲ್ಪಡುವ ಗುಲ್‌ಮೊಹರ್ ಹೂ ಅರಳುವ ಸಮಯ ಇದಾಗಿದ್ದು, ನಗರ ಸೇರಿದಂತೆ ಗ್ರಾಮ, ರಸ್ತೆ, ಹೊಲ, ಗದ್ದೆ, ಶಾಲೆಗಳ ಬಳಿ ಗುಲ್‌ಮೊಹರ್ ಅರಳಿರುವುದು ಈಗ ಕಾಣ ಸಿಗುತ್ತದೆ.
ಉಷ್ಣವಲಯದ ಮರವಾಗಿರುವ ಇದು, ಪ್ರಪಂಚದ ಎಲ್ಲೆಡೆ ಬೆಳೆಯುತ್ತದೆ. ಮದುವೆ, ಹಬ್ಬ ಮತ್ತು ಗೃಹ ಪ್ರವೇಶದ ಸಂದರ್ಭದಲ್ಲಿ ಇದರ ಹೂ ಗೊಂಚಲನ್ನು ಕಿತ್ತು, ಚಪ್ಪರಗಳ ನಡುವೆ ಅಲಂಕರಿಸುವ ಪರಂಪರೆ ಗ್ರಾಮೀಣ ಭಾಗಗಳಲ್ಲಿ ಇನ್ನು ಉಳಿದಿದೆ. ಸುಮಾರು 10ರಿಂದ 60 ಅಡಿ ಎತ್ತರ ಬೆಳೆಯುವ ಇದನ್ನು ಪಾರ್ಕ್‌ಗಳಲ್ಲಿ ಮತ್ತು ರಸ್ತೆಯ ಬದಿಯಲ್ಲಿ ಹೆಚ್ಚು ಬೆಳೆಸಲಾಗುತ್ತದೆ.
ಇದು ಕೆಂಪು ಹೂ, ಕಿತ್ತಳೆಗೆಂಪು, ಕೇಸರಿ ಲತೆಗಳು, ಹಸಿರು ವೃಕ್ಷಕ್ಕೆ ಬಾಸಿಂಗ ತೊಡಿಸಿದಂತೆ ಆಕರ್ಷಕವಾಗಿ ಕಾಣುತ್ತದೆ. ಮಳೆಗಾಲದ ಮುಂಜಾವಿನ ರಸ್ತೆಯಲ್ಲಿ ಪುಷ್ಪಗಳು ಉದುರಿದಾಗ ಪುಷ್ಪದ ಚಾದಾರ ಎದ್ದುಕಾಣುತ್ತದೆ. ಹಳದಿ ಮತ್ತು ಬಿಳಿ ಹೂಗಳ ಸಂತತಿ ಕಾಣಬಹುದು. ಇದರ ಪುಷ್ಪ ಪಾತ್ರೆಯನ್ನು ಕಿತ್ತು, ಇದರೊಳಗಿನ ಕೇಸರದ ಕೊಕ್ಕೆಯನ್ನು ತೆಗೆದು ಆಟವಾಡುವ ಸಂಭ್ರಮ ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಕಾಣಬಹುದು.
ಅವರೆ ಕಾಯಿಯಂತಹ ಉದ್ದನೆಯ ಕತ್ತಿಯಾಕಾರದ ಕೋಡು, ಸಣ್ಣಗಾತ್ರದ 20-30 ಬೀಜಗಳನ್ನು ಹೊಂದಿರುತ್ತದೆ. 5 ಸೆಂಟಿಮೀಟರ್ ಉದ್ದ ಬೆಳೆಯುವ ಹಸಿರು ಬಣ್ಣದ ಕೋಡು, ಬಲಿತಾಗ ಕಡು ಕಂದುಬಣ್ಣ ಹೊಂದಿದರೆ, ಮರದ ಕಾಂಡ ಬೂದಿ ಮಿಶ್ರಿತ ಕಂದುಬಣ್ಣ ಪಡೆಯುತ್ತದೆ. ಬೀಜ ಮತ್ತು ರೆಂಬೆನೆಟ್ಟು ಹೊಸ ಸಸ್ಯ ಬೆಳೆಸಬಹುದು. ಅಲಂಕಾರಿಕಕ್ಕೆ ಇಲ್ಲವೆ ನೆರಳಿಗಾಗಿ ಸಾಲು ಮರದಂತೆ ಬೆಳೆಸುತ್ತಾರೆ.
“ಮೇ, ಜೂನ್, ಜುಲೈಗಳಲ್ಲಿ ಹೂಗಳಿಂದ ಜನರನ್ನು ಆಕರ್ಷಿಸುವ ಈ ಮರ ವರ್ಷಪೂರ್ತಿ ಜನರಿಗೆ ನೆರಳು ನೀಡುತ್ತವೆ. ಬೇಸಿಗೆಯ ದಾಹ ನೀಗಲು ಸಂಜೆ ಮತ್ತು ಬೆಳಿಗ್ಗೆ ವಾಯು ವಿಹಾರಿಗಳು ನಡೆದಾಡುವಾಗ ಮರದ ನೆರಳಿನಲ್ಲಿ ಸ್ವಲ್ಪ ಸಮಯ ಕುಳಿತು ವಿಶ್ರಮಿಸುತ್ತಾರೆ. ನಗರದ ಕೃಷ್ಣ ನಗರದ ಬಡಾವಣೆಯಲ್ಲಿ ಗುಲ್‌ಮೊಹರ್ ಲತೆಗಳು ಹಸಿರು ವೃಕ್ಷಕ್ಕೆ ಕೆಂಪು ಛತ್ರಿ ತೊಟ್ಟಂತೆ ಜನರನ್ನು ಆಕರ್ಷಿಸುತ್ತಿವೆ’ ಎನ್ನುತ್ತಾರೆ ಪತ್ರಿಕಾ ವಿತರಕ ಹುಸೇನ್‌ಸಾಬ್ ಬೀಜದಿಂದ ಉತ್ಪಾದಿಸುವ ಅಂಟು, ಎಣ್ಣೆಯನ್ನು, ಜವಳಿ, ಚರ್ಮ, ಸಾಬೂನು, ಔಷ ಧಿ ಮೊದಲಾದ ಉದ್ದಿಮೆಗಳಲ್ಲಿ ಬಳಸಲಾಗುತ್ತದೆ.
ಈ ವೃಕ್ಷದ ಮೂಲ ಮಡಗಾಸ್ಕರ್. ಸೆಭಾಷಿಯೇ ಕುಟುಂಬದ ಸೀತಂತಿನಿಯೋಯಿಡೆ ಉಪಕುಟುಂಬಕ್ಕೆ ಸೇರಿದೆ. ಇದರ ಸಸ್ಯ ಶಾಸ್ತ್ರಿಯ ಹೆಸರು “ಡೆಲೋನಿಕ್ಸ್ ರೇಜಿಯಾ’, ಕನ್ನಡದಲ್ಲಿ ಕತ್ತಿಕಾಯಿ ಮರ, ಹಿಂದಿಯಲ್ಲಿ ಗುಲ್‌ಮೊಹರ್, ಬೆಂಕಿಮರ, ದೊಡ್ಡರತ್ನಗಂದಿ, ಸೀಮೆ ಸಂಕೇಶ್ವರ, ಕೃಷ್ಣಾಚುರ ರಾಧಾಚುರ ಎಂಬ ಹೆಸರುಗಳಿಂದ ಕರೆಯಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ
Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…
Golden Jubliee: ಕನ್ನಡಕ್ಕೆ ಹೋರಾಡುತ್ತಲೇ ಇರಬೇಕಾದ ಸ್ಥಿತಿ ಬಾರದಿರಲಿ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.