ಮದರಂಗಿಯಲ್ಲಿ ಮೂಡಿಬಂತು ವಿಜ್ಞಾನದ ಕಂಪು!

Team Udayavani, May 13, 2021, 10:23 PM IST

13-15

ಸಿರಿಗೆರೆ: ಹಲವು ವೈವಿಧ್ಯಮಯ ಶೈಕ್ಷಣಿಕ ಚಟುವಟಿಕೆಗಳಿಂದ ಗಮನ ಸೆಳೆಯುತ್ತಿರುವ ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿನಿಯರು ಈಗ ಮತ್ತೂಮ್ಮೆ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಮೆಹಂದಿ ಬಳಸುವ ಮೂಲಕ ತಮ್ಮ ಪಠ್ಯದಲ್ಲಿರುವ ಹಲವು ವಿಜ್ಞಾನದ ಚಿತ್ರಗಳನ್ನು ತಮ್ಮ ಕೈ ಮೇಲೆ ಅರಳಿಸಿಕೊಂಡು ವಿಜ್ಞಾನದ ಕಂಪುನ್ನು ಮೂಡಿಸಿದ್ದಾರೆ.

ಕೋವಿಡ್‌ ಎರಡನೇ ಅಲೆಯ ತೀವ್ರತೆಯಿಂದ ಶಾಲಾ ಕಾಲೇಜುಗಳು ಬಂದ್‌ ಆಗಿವೆ. ಆದರೂ ಮುಂದೆ ಬರಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಎದುರಿಸುವ ತವಕ ವಿದ್ಯಾರ್ಥಿಗಳಲ್ಲಿ ಇದ್ದೇ ಇದೆ. ಶಾಲೆಯೂ ಇಲ್ಲ, ಪಾಠವೂ ಇಲ್ಲ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಜಡತ್ವ ಬೆಳೆಯಬಾರದು ಎಂಬ ಉದ್ದೇಶದಿಂದ ಕಡ್ಲೆàಗುದ್ದು ಶಾಲೆಯಲ್ಲಿ ಹಲವು ಶೈಕ್ಷಣಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಇವುಗಳು ಮುಂದೆ ಬರುವ ಪರೀಕ್ಷೆಗೆ ಸಹಾಯಕವಾಗಲಿ ಎಂಬ ಉದ್ದೇಶದಿಂದ ಈ ಚಟುವಟಿಕೆ ಆರಂಭವಾಗಿದೆ.

ಈ ನಿಟ್ಟಿನಲ್ಲಿ ಮಕ್ಕಳಿಗೆ, ಅದರಲ್ಲೂ ಶಾಲಾ ಹೆಣ್ಣು ಮಕ್ಕಳಿಗೆ ಮೆಹಂದಿ ಎಂದರೆ ತುಂಬಾ ಇಷ್ಟ. ಮೆಹಂದಿಯಲ್ಲಿ ಏಕೆ ವಿಜ್ಞಾನ ಪಠ್ಯಕ್ಕೆ ಸಂಬಂಧಿಸಿದ ಹಲವು ಚಿತ್ರಗಳನ್ನು ಮೂಡಿಸುವಂತಹ ಕೆಲಸ ಮಾಡಬಾರದು ಎಂಬ ಆಲೋಚನೆ ಬಂದದ್ದೇ ತಡ, ಶಾಲಾ ಶಿಕ್ಷಕರು ಇಂತಹದೊಂದು ಕಾರ್ಯಕ್ಕೆ ಕೈಹಾಕಿದರು. ಮದರಂಗಿ ಬಳಸಿಕೊಂಡು ತಮಗಿಷ್ಟವಾದ ವಿಜ್ಞಾನ ಚಿತ್ರಗಳನ್ನು ತಮ್ಮ ಕೈಗಳ ಮೇಲೆ ಚಿತ್ರರೂಪದಲ್ಲಿ ಬಿಡಿಸಲು ಸೂಚಿಸಲಾಯಿತು. ವಿದ್ಯಾರ್ಥಿನಿಯರು ತುಂಬಾ ಉತ್ಸುಕತೆಯಿಂದ ಮೆಹಂದಿಯಲ್ಲಿ ವಿಜ್ಞಾನ ಚಿತ್ರಗಳನ್ನು ಅರಳಿಸಿದ ಶಾಲಾ ಶಿಕ್ಷಕರು ಹುಬ್ಬೇರಿಸುವಂತೆ ಮಾಡಿದ್ದಾರೆ.

ಪೋಷಕರು ತಮ್ಮ ಮಕ್ಕಳ ಕೈಗಳಲ್ಲಿ ವೈವಿಧ್ಯಮಯ ವಿಜ್ಞಾನದ ಚಿತ್ರಗಳನ್ನು ನೋಡಿ ಖುಷಿ ಪಟ್ಟಿದ್ದಾರೆ. ಇದರಿಂದ ವಿನೂತನವಾದ ರೀತಿಯಲ್ಲಿ ಈ ಶಾಲೆಯ ಶಿಕ್ಷಕರು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿದಂತಾಗಿದೆ. “ಮೆಹಂದಿ ಎಂದರೆ ನನಗೆ ತುಂಬಾ ಇಷ್ಟ. ಹಾಗಾಗಿ ಅಂದಚಂದಕ್ಕೆ ಕೈಮೇಲೆ ಮದರಂಗಿಯಿಂದ ಚಿತ್ರ ಬಿಡಿಸಿಕೊಳ್ಳುತ್ತಿದೆ. ನಮ್ಮ ಶಾಲೆಯಲ್ಲಿ ವಿಜ್ಞಾನ ಚಿತ್ರ ಬಿಡಿಸುವ ಕಾರ್ಯಕ್ರಮ ಇರಿಸಿಕೊಂಡಾಗ ಇನ್ನಿಲ್ಲದ ಸಂತೋಷವಾಯಿತು. ಇದನ್ನು ಸದುಪಯೋಗ ಮಾಡಿಕೊಂಡು ನನ್ನ ಎರಡೂ ಕೈಗಳ ಮೇಲೆ ಪಠ್ಯಕ್ರಮದ ಚಿತ್ರಗಳನ್ನು ಬಿಡಿಸಿಕೊಂಡಿದ್ದೇನೆ’ ಎನ್ನುತ್ತಾಳೆ 10ನೇ ತರಗತಿಯ ವಿದ್ಯಾರ್ಥಿನಿ ಸೃಷ್ಟಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ವಿಷಯದಲ್ಲಿ 16 ಅಂಕಗಳನ್ನು ಚಿತ್ರಗಳಿಗೆ ನಿಗದಿಗೊಳಿಸಲಾಗಿದೆ.

ಚಿತ್ರಗಳನ್ನು ಈ ರೀತಿಯಾಗಿ ಮಕ್ಕಳು ಆಸಕ್ತಿಯಿಂದ ಕಲಿತರೆ 16 ಅಂಕಗಳನ್ನು ಸುಲಭವಾಗಿ ಗಳಿಸಬಹುದು. ಹಾಗಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಅವರಿಗಿಷ್ಟವಾದ ವಿಜ್ಞಾನ ಚಿತ್ರಗಳನ್ನು ಮೆಹಂದಿಯಲ್ಲಿ ಬರೆಯಲು ತಿಳಿಸಲಾಗಿತ್ತು. ಎಲ್ಲ ವಿದ್ಯಾರ್ಥಿಗಳು ತುಂಬಾ ಸಂತೋಷದಿಂದ ಚಿತ್ರಗಳನ್ನು ಬರೆದಿದ್ದಾರೆ’ ಎಂದು ಶಾಲೆಯ ಮುಖ್ಯ ಶಿಕ್ಷಕರಾದ ಮಹೇಶ್‌ ತಿಳಿಸಿದರು.

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.