ವರ್ಷಕ್ಕೆ 76,000 ಭಾರತೀಯ ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ಬಲಿ!
Team Udayavani, Aug 16, 2017, 11:14 AM IST
ದುಬೈ: ಬೇಗನೆ ಚಿಕಿತ್ಸೆ ಕೊಡದೆ ಇರುವ ಕಾರಣಕ್ಕಾಗಿ ಭಾರತದಲ್ಲಿ 2020 ರ ವೇಳೆ ವರ್ಷಕ್ಕೆ 76,000 ಮಹಿಳೆಯರು ಸ್ತನ ಕ್ಯಾನ್ಸರ್‌ಗೆ ಬಲಿಯಾಗುವ ಸಾಧ್ಯತೆಗಳಿವೆ ಎಂಬ ಆತಂಕಕಾರಿ ವಿಚಾರವನ್ನು ಸಂಶೋಧಕರು ಹೊರಹಾಕಿದ್ದಾರೆ.
ಸ್ತನ ಕ್ಯಾನ್ಸರ್ ಭಾರತೀಯ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಆಗಿದ್ದು, 2012 ರಲ್ಲಿ 70,218 ಮಹಿಳೆಯರನ್ನು ಬಲಿ ಪಡೆದಿದೆ ಎಂದು ವ್ಯವಹಾರಿಕ ಅಧ್ಯಯನಗಳ ಮಾಸ ಪತ್ರಿಕೆ ವಿವರ ನೀಡಿದೆ. ಮೃತಪಟ್ಟ ಮಹಿಳೆಯರಲ್ಲಿ ಹೆಚ್ಚಿನವರು 30 ರಿಂದ 50 ವರ್ಷದ ಒಳಗಿನವರು ಎಂದು ವರದಿ ಹೇಳಿದೆ.
ಭಾರತದಲ್ಲಿ ಈ ಸಮಸ್ಯೆ ಪ್ರಮಾಣ ಅಗಾಧವಾಗಿದ್ದು ಸರ್ಕಾರದ ಮೇಲೆ ಗಂಭೀರ ಸ್ವರೂಪದ ಪರಿಣಾಮ ಬೀರಿದೆ ಎಂದು ದುಬೈನ ಉಲ್ಲೊಂಗಾಂಗ್‌ನ ಸಂಶೋಧನಾ ವಿಭಾಗದ ಅಸೋಸಿಯೇಟ್ ಡೀನ್ ವಿಜಯ್ ಪಿರೇರಾ ಹೇಳಿದ್ದಾರೆ.
ಸ್ತನ ಕ್ಯಾನ್ಸರನ್ನು ಸ್ವಯಂ ಪರೀಕ್ಷಿಸಿಕೊಳ್ಳುವಲ್ಲಿ ಮಹಿಳೆಯರಲ್ಲಿನ ತಿಳುವಳಿಕೆಯ ಕೊರತೆ ಮತ್ತು ಸಂಕೋಚವೇ ಕಾಯಿಲೆ ಉಲ್ಬಣಗೊಳ್ಳಲು ಪ್ರಮುಖ ಕಾರಣವಾಗಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.
ಮಹಿಳೆಯರು ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿ ನಿರ್ಲಕ್ಷ್ಯ ವಹಿಸುತ್ತಾರೆ. ಬಹುತೇಕರು ಪುರುಷ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳಲು ಸಂಕೋಚ ಹೊಂದಿರುತ್ತಾರೆ. ಹೀಗಾಗಿ ಕಾಯಿಲೆ ಪ್ರಾಣವನ್ನು ಕಸಿದುಕೊಳ್ಳುತ್ತಿದೆ ಎಂದು ಸಂಶೋಧಕರು ಕಾರಣ ನೀಡಿದ್ದಾರೆ.
ಪುರುಷರಿಗೂ ಈ ಬಗ್ಗೆ ತಿಳುವಳಿಕೆ ನೀಡಬೇಕಾಗಿರುವ ಅಗತ್ಯವಿದೆ ಎಂದಿರುವ ಸಂಶೋಧಕರು, ಆರಂಭಿಕ ಹಂತದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚುವ ಅರಿವು ಹೊಂದಿದಲ್ಲಿ ಪ್ರಾಣ ಕಳೆದುಕೊಳ್ಳುವುದನ್ನು ತಡೆಯಬಹುದು ಎಂದು ಸಂಶೋಧಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ವಿವಾಹಿತ ಮಹಿಳೆಯರು ಪತಿಯ ಬಳಿ ಖಾಸಗಿ ವಿಚಾರಗಳನ್ನೂ ಹೇಳಿಕೊಳ್ಳಲು ಹಿಂಜರಿಕೆ ತೋರಬಾರದು, ಈ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲದು. ಸೂಕ್ತ ಕಾಲದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಶಂಕೆ ಪರಿಹರಿಸಿಕೊಳ್ಳಬೇಕು ಎಂದು ಸಂಶೋಧಕರು ಕರೆ ನೀಡಿದ್ದಾರೆ.
ಮಹಿಳೆಯರು ತಡವಾಗಿ ಗರ್ಭ ದಿರಿಸುವುದು, ಮಕ್ಕಳಿಗೆ ಸ್ತನ್ಯ ಪಾನ ನೀಡುವ ಅವಧಿ ಕಡಿಮೆಗೊಳಿಸುವುದು, ಬಾಣಂತಿಯಾಗಿರುವ ವೇಳೆ ಪಾಶ್ಚಾತ್ಯ ಆಹಾರ ಪದ್ಧತಿ, ಸ್ಥೂಲಕಾಯ, ವೇಗದ ಆರ್ಥಿಕ ಅಭಿವೃದ್ಧಿ ಮತ್ತು ಹೆಚ್ಚಾಗಿ ಆಗುತ್ತಿರುವ ನಗರೀಕಣವೂ ಸ್ತನ ಕ್ಯಾನ್ಸರ್‌ಗೆ ಕಾರಣವಾಗಿದೆ ಎಂಬ ಅಂಶಗಳನ್ನು ಸಂಶೋಧಕರು ಅಧ್ಯಯನದ ವೇಳೆ ಕಂಡು ಕೊಂಡಿದ್ದಾರೆ.
ಸ್ತನ ಕ್ಯಾನ್ಸರ್‌ನ ಬಗ್ಗೆ ಅರಿವು ಮೂಡಿಸುವಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ದಾದಿಯರು ಹೆಚ್ಚಿನ ಕೆಲಸ ಮಾಡಬೇಕಾಗಿದೆ.ಅಂತೆಯೇ, ಸಾಮಾಜಿಕ ತಾಣಗಳು, ಶಾಲಾ-ಕಾಲೇಜ್‌ಗಳು ಮತ್ತು ಮಾಧ್ಯಮಗಳು ಪರಿಣಾಮಕಾರಿಯಾಗಿ ಅರಿವು ಮೂಡಿಸಬಲ್ಲವು ಎಂದು ಸಂಶೋಧಕರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snuff: ನಶ್ಯ ತಂದಿಟ್ಟ ಸಮಸ್ಯೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.