ಲಕ್ಷಣವಿರದ ಗರ್ಭಿಣಿಯರಿಗೂ ಕೋವಿಡ್‌ ಪರೀಕ್ಷೆ !


Team Udayavani, Feb 5, 2022, 1:18 PM IST

ಲಕ್ಷಣವಿರದ ಗರ್ಭಿಣಿಯರಿಗೂ ಕೋವಿಡ್‌ ಪರೀಕ್ಷೆ !

ಬೆಂಗಳೂರು: ರಾಜ್ಯದಲ್ಲಿ ಐಸಿಎಂಆರ್‌ ಸೂಚನೆಯಂತೆ ಆರೋಗ್ಯ ಇಲಾಖೆ ಕೇವಲ ಲಕ್ಷಣ ಹೊಂದಿರುವವರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸಿದರೂ, ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಲಕ್ಷಣ ರಹಿತ ಗರ್ಭಿಣಿಯರಿಗೆ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಆರೋಗ್ಯ ಇಲಾಖೆ ಕೋವಿಡ್‌ ಪರೀಕ್ಷೆಗೆ ಮಾರ್ಗಸೂಚಿ ಪರಿಷ್ಕೃತಗೊಳಿಸಿ ಕೊರೊನಾ ಲಕ್ಷಣಹೊಂದಿರುವವರಿಗೆ ಮಾತ್ರ ಕಡ್ಡಾಯವಾಗಿ ಕೊರೊನಾಪರೀಕ್ಷೆಗೆ ಒಳಗಾಗುವಂತೆ ಹಾಗೂ ತುರ್ತು ಶಸ್ತ್ರ ಚಿಕಿತ್ಸೆ,ಹೆರಿಗೆ ಸಂದರ್ಭದಲ್ಲಿ ಅಗತ್ಯವಿದ್ದರೆ ಆದ್ಯತೆಯ ಮೇರೆಗೆಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಜತೆಗೆಲಕ್ಷಣವಿಲ್ಲದ ವ್ಯಕ್ತಿಗಳಿಗೆ ಕೊರೊನಾ ಪರೀಕ್ಷೆಯನ್ನು ನಡೆಸದಂತೆ ಆದೇಶಿಸಲಾಗಿದೆ.

ಆದರೆ, ನಗರದ ಕೆಲ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಮಾರ್ಗಸೂಚಿಯನ್ನು ಪಾಲನೆ ಮಾಡುತ್ತಿಲ್ಲ. ಒಂದರಿಂದ8 ತಿಂಗಳು ಗರ್ಭಿಣಿಯಲ್ಲಿ ಪ್ರತಿ ತಿಂಗಳುಹಾಗೂ 9 ತಿಂಗಳು ಗರ್ಭಿಣಿಯರಲ್ಲಿ ವಾರದಲ್ಲಿ ಒಮ್ಮೆ ವೈದ್ಯರ ತಪಾಸಣೆಗೆ ಬರುವ ಕೋವಿಡ್‌ ಲಕ್ಷಣ ರಹಿತ ಗರ್ಭಿಣಿಯರನ್ನು ಕೋವಿಡ್‌ ಪರೀಕ್ಷೆ ವರದಿ ಸಲ್ಲಿಕೆ ಮಾಡುವಂತೆ ಹೇಳಲಾಗು ತ್ತಿದೆ. ಕೋವಿಡ್‌ ಪರೀಕ್ಷೆಮಾಡಿಸಲು ಒಪ್ಪದ ಮಹಿಳೆಯರನ್ನು ಈಬಗ್ಗೆ ಪ್ರಶ್ನಿಸಿದರೆ, ಇಷ್ಟವಿದ್ದರೆ ಪರೀಕ್ಷೆ ಮಾಡಿಸಿ ಎನ್ನುವುದಾಗಿ ಆರೋಗ್ಯಾಧಿಕಾರಿಗಳು ಉತ್ತರಿ ಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಇರದವರು ಪರೀಕ್ಷೆಯಿಂದ ಆತಂಕಕ್ಕೆ ಒಳಗಾಗುತ್ತಿದ್ದಾರೆ.

ಯಾರಿಗೆ ಪರೀಕ್ಷೆ: ಸೋಂಕಿನ ಲಕ್ಷಣ ಇರುವವರಿಗೆ, ಲ್ಯಾಬ್‌ಗಳಲ್ಲಿ ಖಾತ್ರಿಯಾದ ಅಪಾಯಕಾರಿ ಸೋಂಕಿತರ ಸಂಪರ್ಕಕ್ಕೆ ಬಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಸಹ- ಅಸ್ವಸ್ಥೆಗಳಾದ ಮಧುಮೇಹಸೇರಿದಂತೆ ಇತರೆ ಮಾರಣಾಂತಿಕ ಕಾಯಿಲೆಯಿಂದ ಬಳಲುವವರಿಗೆ, ವಿದೇಶಕ್ಕೆ ತೆರಳುವವರಿಗೆ,ವಿದೇಶಿದಿಂದ ಬಂದವರು ಮಾತ್ರ ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಬೇಕು. ಸಮುದಾಯ ಮಟ್ಟದಲ್ಲಿ ರೋಗ ಲಕ್ಷಣವಿಲ್ಲದವರಿಗೆ, ಸೋಂಕಿತರ ಸಂಪ ರ್ಕಕ್ಕೆ ಬಂದಹಿರಿಯ ನಾಗರಿಕರು ಹಾಗೂ ಸಹ ಅಸ್ವಸ್ಥೆಯಿಂದ ಬಳಲುತ್ತಿರು ವವರನ್ನು ಹೊರತು ಪಡಿಸಿ ಇತರರಿಗೆ,ಲಕ್ಷಣ ರಹಿತ ಗರ್ಭಿಣಿ ಹಾಗೂ ಇತರರ ಶಸ್ತ್ರಚಿಕಿತ್ಸೆ ವೇಳೆ, ಗೃಹ ಹಾಗೂ ಆಸ್ಪತ್ರೆ ಯಿಂದ ಬಿಡುಗಡೆಗೊಂಡ ರೋಗಿಗಳಿಗೆ ಕೋವಿಡ್‌ ಪರೀಕ್ಷೆ ಇಲ್ಲ ಎಂಬುದು ಮಾರ್ಗಸೂಚಿಯಲ್ಲಿದೆ. ಆದರೆ, ಪಾಲಿಕೆ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಗಸೂಚಿ ಪಾಲಿಸುತ್ತಿಲ್ಲ .

ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಗೆ ಒಪಿಡಿ ಸೇವೆಗೆ ಬರುವ ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದರಿಂದ ಲಕ್ಷಣವಿಲ್ಲದವರಿಗೆ ಸೋಂಕು ದೃಢವಾದರೆ ಆರೋಗ್ಯದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಪರೀಕ್ಷೆ ಮಾಡಲಾಗುತ್ತಿದೆ. ಇಲ್ಲಿ ಗರ್ಭಿಣಿಯರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವೇನೂ ಇಲ್ಲ. ಬಾಲಸುಂದರ್‌, ಮುಖ್ಯ ಆರೋಗ್ಯಾಧಿಕಾರಿ, ಬಿಬಿಎಂಪಿ

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.