ಮೊಳಕೆ ಕಾಳು ಬಳಸಿ ಆರೋಗ್ಯ ವೃದ್ಧಿಸಿ

ಪ್ರೋಟೀನ್‌ ಹೆಚ್ಚಾಗಿದ್ದು ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

Team Udayavani, Nov 11, 2020, 11:34 AM IST

ಮೊಳಕೆ ಕಾಳು ಬಳಸಿ ಆರೋಗ್ಯ ವೃದ್ಧಿಸಿ

ಆರೋಗ್ಯವೃದ್ಧಿಗೆ ನಾನಾ ರೀತಿಯ ಕಸರತ್ತು ಮಾಡುವುದು ಅಗತ್ಯ. ಇದರೊಂದಿಗೆ ಆಹಾರದಲ್ಲೂ ಒಂದಷ್ಟು ಬದಲಾವಣೆ ಬೇಕಾಗುತ್ತದೆ. ಆಗ ಮಾತ್ರ ಉತ್ತಮ ಆರೋಗ್ಯ, ದೇಹಪ್ರಕೃತಿ ನಮ್ಮದಾಗುವುದು. ಉತ್ತಮ ಆರೋಗ್ಯದಲ್ಲಿ ಮೊಳಕೆ ಕಾಳು  ಪ್ರಮುಖ ಪಾತ್ರವಹಿಸುತ್ತದೆ.

ಅದರಲ್ಲೂ ಬೆಳಗ್ಗಿನ ಜಾವ ಖಾಲಿ ಹೊಟ್ಟೆಯಲ್ಲಿ ಮೊಳಕೆ ಕಾಳುಗಳನ್ನು ಸೇವಿಸುವುದರಿಂದ ಅನೇಕ ಲಾಭಗಳಿವೆ. ಇವು ದೇಹಕ್ಕೆ ಬೇಕಾದ ಪೌಷ್ಟಿಕಾಂಶ ವನ್ನು ಒದಗಿಸುವುದು ಮಾತ್ರವಲ್ಲದೆ ದಿನ ವಿಡೀ ಉಲ್ಲಾಸದಿಂದ ಇರಲು ಸಹಾಯ ಮಾಡುತ್ತದೆ. ಮೊಳಕೆ ಬರಿಸಿದ ಹಸಿ ಕಾಳುಗಳಲ್ಲಿ ಬ್ಯಾಕ್ಟೀರಿಯಾ ಪ್ರಮಾಣ ಜಾಸ್ತಿ ಇರುವುದರಿಂದ ಬೇಯಿಸಿ ತಿನ್ನುವುದು ಉತ್ತಮ.

ಡಯಟ್‌ನವರಿಗೆ ಉತ್ತಮ
ಬೆಳಗ್ಗೆ ಮೊಳಕೆ ಕಾಳುಗಳನ್ನು ತಿನ್ನುವುದಿಂದ ದೇಹಕ್ಕೆ ಬೇಕಾಗುವ ಪೌಷ್ಟಿಕಾಂಶ ದೊರೆತು ಮೆಟಾ ಬೊಲಿಸಮ್‌ ಹೆಚ್ಚಾಗಿ ಕೊಬ್ಬು ಕರಗಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್‌, ಪ್ರೋಟೀನ್‌ ಹೆಚ್ಚಾಗಿದ್ದು ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ.

ಹಸಿವನ್ನು ನಿಯಂತ್ರಿಸಿ ಆರೋಗ್ಯವಾಗಿರಲು ಸಹಕಾರಿ. ಇದನ್ನು ಅನುಕ್ರಮವಾಗಿ ಪ್ರತಿನಿತ್ಯ ಒಂದೇ ಸಮಯದಲ್ಲಿ ತೆಗೆದುಕೊಳ್ಳುವುದರಿಂದ ರಕ್ತದ ಕಣಗಳು ಶುದ್ಧವಾಗುತ್ತದೆ. ಅಲ್ಲದೆ ಚರ್ಮವನ್ನು ಕಾಂತಿಯಕ್ತವಾಗಿ ಮಾಡುತ್ತದೆ. ವೃದ್ಧಾಪ್ಯದ ಲಕ್ಷಣಗಳು ಬೇಗ ಬಾರದಂತೆ ನೋಡಿಕೊಳ್ಳುತ್ತದೆ.

ಮೊಳಕೆ ಬರಿಸಿದ ಹೆಸರು ಕಾಳು
ಇದರಲ್ಲಿ ವಿಟಮಿನ್‌ ಸಿ ಅಧಿಕವಾಗಿದ್ದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಹಲವಾರು ಸೋಂಕು ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಫ್ರೀ ರಾಡಿಕಲ್ ‌ ನಿಂದ ರಕ್ಷಿಸುತ್ತದೆ. ಫ್ರೀ ರಾಡಿಕಲ್ ಕಲ್‌ ಅನ್ನು ಆ್ಯಂಟಿ ಆಕ್ಸಿಡೆಂಟ್‌ಗಳು  ತಟಸ್ಥಗೊಳಿಸದೇ ಇದ್ದರೆ ಅದು ಆರೋಗ್ಯಕರ ಕೋಶಗಳ ಮೇಲೆ ದಾಳಿ ಮಾಡುವುದು.

ರಕ್ತ ಸಂಚಾರವನ್ನು ಸುಗಮಗೊಳಿಸಿ ದೇಹದ ವಿವಿಧ ಅಂಗಾಂಶ ಹಾಗೂ ಕೋಶಗಳಿಗೆ ಆಮ್ಲಜನಕವು ಸರಬರಾಜು ಆಗಲು ನೆರವಾಗುತ್ತದೆ. ಹಾಲಿನಲ್ಲಿರುವಷ್ಟು ಪೋಷಕಾಂಶ ಮೊಳಕೆ ಕಾಳಿನಲ್ಲಿ ದೊರೆಯುವುದರಿಂದ ಮೂಳೆಗಳು ಗಟ್ಟಿಗೊಳ್ಳುತ್ತವೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಲ್ಲೂ ಜೀರ್ಣಕ್ರಿಯೆಯ ಸಮಸ್ಯೆ ಇರುತ್ತದೆ.

ಅಂಥವರು ಮೊಳಕೆಕಾಳುಗಳನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದು ಬಿಸಿ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಇದನ್ನು ಸಂಜೆ ತಿನ್ನುವುದು ಕೂಡ ಉತ್ತಮ. ಹೆಸರುಕಾಳು ಮಾತ್ರವಲ್ಲ ಮಡಕೆ ಕಾಳು, ಹುರುಳಿ ಕಾಳುಗಳಲ್ಲಿ ಯಾವುದಾದರನ್ನು ಪ್ರತಿ ನಿತ್ಯ ಸೇವಿಸುವುದರಿಂದ ಆರೋಗ್ಯ ಉತ್ತಮವಾಗಿರಿಸಿಕೊಳ್ಳಬಹುದು.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.