ಮನೆಮದ್ದುಗಳನ್ನು ಬಳಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ…
Team Udayavani, Nov 29, 2021, 11:12 AM IST
ಕೋವಿಡ್ -19 ರೋಗವು ತನ್ನ ಕಬಂಧ ಬಾಹುಗಳನ್ನು ಎಲ್ಲೆಡೆ ಚಾಚಿಬಿಟ್ಟಿದೆ.ಶರವೇಗದಲ್ಲಿ ಹಬ್ಬುತ್ತಿರುವ ಈ ರೋಗ, ಎಲ್ಲರಲ್ಲಿಯೂ ಭಯ ಹುಟ್ಟಿಸಿದೆ. ಹೆಚ್ಚಿನರೋಗ ನಿರೋಧಕ ಶಕ್ತಿ ಹೊಂದಿದ್ದರೆ ಕೊರೊನಾದ ಕಪಿಮುಷ್ಟಿಯಿಂದ ಪಾರಾಗಬಹುದು.
ಮನೆಮದ್ದುಗಳನ್ನು ಬಳಸಿ ನಮ್ಮ ದೇಹದರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಗೊತ್ತೇ?
4-5 ತುಳಸಿ ಎಲೆಗಳನ್ನು 10 ನಿಮಿಷ ನೀರಿನಲ್ಲಿ ನೆನೆಸಿ, ಆನೀರನ್ನು ಕುದಿಸಬೇಕು. ನಂತರ ಅದಕ್ಕೆ ಸ್ವಲ್ಪ ಕಾಳುಮೆಣಸನ್ನುಹುಡಿ ಹಾಗೂ ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಹಾಕಿ ಚೆನ್ನಾಗಿ ಕುದಿಸಬೇಕು. ಸ್ವಲ್ಪತಣ್ಣಗಾದ ಬಳಿಕ ಈ ಪಾನೀಯವನ್ನು ಸೇವಿಸಿ.
ಕೊತ್ತಂಬರಿ ಬೀಜ, ಜೀರಿಗೆ,ಕಾಳುಮೆಣಸು, ದಾಲಿcàನಿ, ಲವಂಗ, ಏಲಕ್ಕಿ ಹುಡಿ ಮಾಡಿಇಟ್ಟುಕೊಳ್ಳಬೇಕು. ಒಂದು ಚಮಚ ಹುಡಿಯನ್ನು ಹಾಲಿಗೆ ಹಾಕಿ, ಸ್ವಲ್ಪ ಬೆಲ್ಲ,ಅರಿಶಿನ,ಶುಂಠಿ ಸೇರಿಸಿ ಕುದಿಸಿ ಕಷಾಯ ಮಾಡಬೇಕು. ಇದನ್ನು ನಿತ್ಯ ಸೇವಿಸಿದರೆ ಒಳ್ಳೆಯದು.
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 2 ಎಸಳು ಬೆಳ್ಳುಳ್ಳಿಯನ್ನು ಸೇವಿಸುವುದು ಉತ್ತಮ.ಸಾರಿಗೆ ಒಗ್ಗರಣೆ ಹಾಕುವ ಸಂದರ್ಭದಲ್ಲಿ ಬೆಳ್ಳುಳ್ಳಿ ಬಳಸಿಯೂ ಸೇವಿಸಬಹುದು.
ಬೇಯಿಸಿದ ಅನ್ನದ ಗಂಜಿಯನ್ನು ಕುಡಿಯುವುದು ಆರೋಗ್ಯಕರ. ಬೇಕಿದ್ದರೆಅದಕ್ಕೆ ಸ್ವಲ್ಪ ಉಪ್ಪು ಹಾಗೂ ಈರುಳ್ಳಿಯನ್ನು ಹಾಕಬಹುದು.
ಪ್ರತಿ ಆಹಾರ ಪದಾರ್ಥದಲ್ಲಿ ಚಿಟಿಕೆ ಪ್ರಮಾಣದ ಅರಿಶಿನವನ್ನು ಹಾಕಿದರೆ ಒಳ್ಳೆಯದು.ಮಲಗುವ ಮುನ್ನ ಹಾಲಿಗೆ ಅರಿಶಿನ ಹಾಕಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು.
ಡಾ. ಶ್ರೀಲತಾ ಪದ್ಯಾಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.