ದೇಹಕ್ಕೆ ತಂಪು ನೀಡುವ ಪಾಲಕ್ ಸಾಸಿವೆ
Team Udayavani, Aug 8, 2017, 6:59 AM IST
ಪಾಲಕ್ ಸಾಸಿವೆ
ಬೇಕಾಗುವ ಸಾಮಗ್ರಿ:
ಪಾಲಕ್ ಸೊಪ್ಪು- ಎರಡು ಕಪ್, ತೆಂಗಿನತುರಿ- ಒಂದು ಕಪ್, ಸಾಸಿವೆ- ಎರಡು ಚಮಚ, ಹಸಿಮೆಣಸು- ಒಂದು, ಮೊಸರು – ಒಂದು ಕಪ್, ಉಪ್ಪು ರುಚಿಗೆ.
ತಯಾರಿಸುವ ವಿಧಾನ:
ಹೆಚ್ಚಿದ ಪಾಲಕ್ ಸೊಪ್ಪನ್ನು ಬಾಣಲೆಗೆ ತುಪ್ಪ ಹಾಕಿ ಬಾಡಿಸಿಕೊಳ್ಳಿ ಅಥವಾ ನೀರಿನಲ್ಲಿ ಒಂದು ಸೆಕೆ ಬೇಯಿಸಿ ನೀರಿನಿಂದ ತೆಗೆದು ಆರಲು ಬಿಡಿ. ತೆಂಗಿನತುರಿಗೆ ಸಾಸಿವೆ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ ಇದಕ್ಕೆ ಸೇರಿಸಿ. ನಂತರ, ಮೊಸರು ಹಾಗೂ ಬೇಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ತುಪ್ಪದಲ್ಲಿ ಕರಿಬೇವಿನ ಒಗ್ಗರಣೆ ನೀಡಿ ಸರ್ವ್ ಮಾಡಬಹುದು.
ಮೂಲಂಗಿ ಸಾಸಿವೆ
ಬೇಕಾಗುವ ಸಾಮಗ್ರಿ:
ಮೂಲಂಗಿ ತುರಿ- ಆರ್ಧ ಕಪ್, ಸಣ್ಣಗೆ ಹೆಚ್ಚಿದ ಸೌತೆಕಾಯಿ- ಅರ್ಧ ಕಪ್, ಮೊಳಕೆ ಬರಿಸಿದ ಹೆಸರುಕಾಳು- ನಾಲ್ಕು ಚಮಚ, ತೆಂಗಿನತುರಿ- ಒಂದು ಕಪ್, ಮೊಸರು- ಒಂದು ಕಪ್, ಹಸಿಮೆಣಸು- ಒಂದು, ಉಪ್ಪು ರುಚಿಗೆ.
ತಯಾರಿಸುವ ವಿಧಾನ:
ತೆಂಗಿನತುರಿಗೆ ಉಪ್ಪು, ಸಾಸಿವೆ, ಮೆಣಸು ಸೇರಿಸಿ ನುಣ್ಣಗೆ ರುಬ್ಬಿ ಮಿಕ್ಸಿಂಗ್ ಬೌಲ್‌ಗೆ ಹಾಕಿ. ಇದಕ್ಕೆ ತುರಿದ ತರಕಾರಿ ಹಾಗೂ ಮೊಳಕೆ ಕಾಳುಗಳನ್ನು ಸೇರಿಸಿ ಬೇಕಷ್ಟು ಉಪ್ಪು, ನೀರು ಮತ್ತು ಮೊಸರು ಸೇರಿಸಿ ಹದಗೊಳಿಸಿ, ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ ಸರ್ವ್ ಮಾಡಬಹುದು.
ಗೀತಸದಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snuff: ನಶ್ಯ ತಂದಿಟ್ಟ ಸಮಸ್ಯೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.