Manipal: ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ
ಮೆದುಳು ಆರೋಗ್ಯ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ
Team Udayavani, Jul 22, 2023, 3:33 PM IST
ಮಣಿಪಾಲ: ಇಲ್ಲಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗ ಜುಲೈ 22 ರಂದು ಮೆದುಳಿನ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿಶ್ವ ಮೆದುಳಿನ ದಿನವನ್ನು ಆಚರಿಸಿತು.
ಪ್ರತಿ ವರ್ಷ ಜುಲೈ 22 ರಂದು ವಿಶ್ವ ಮೆದುಳಿನ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ಘೋಷ ವಾಕ್ಯ “ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯ”. ಈ ಅಂತರಾಷ್ಟ್ರೀಯ ಆಂದೋಲನವು ಮಾಹಿತಿಯ ಅಂತರವನ್ನು ಮುಚ್ಚಲು ಮತ್ತು ಮೆದುಳಿನ ಆರೋಗ್ಯದ ದುರ್ಬಲತೆಗಳ ಬಗ್ಗೆ ಸಾರ್ವಜನಿಕ ಅರಿವನ್ನು ಹೆಚ್ಚಿಸಲು ಶ್ರಮಿಸುತ್ತದೆ. ಇದು ವಿಕಲಾಂಗ ವ್ಯಕ್ತಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯವನ್ನು ಒದಗಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತದೆ.
ಮೆದುಳು ಮಾನವ ದೇಹದ ಬಹು ಮುಖ್ಯ ಅಂಗವಾಗಿದೆ. ನಮ್ಮ ಭಾವನೆಗಳು ಆಲೋಚನೆಗಳು ಮತ್ತು ಎಲ್ಲಾ ಕ್ರೀಯೆಗಳಿಗೆ ಕಾರಣವಾಗಿದೆ. ಮೆದುಳಿನ ಆರೋಗ್ಯವನ್ನು ಕಾಪಾಡಿಕೊಂಡರೆ, ಇದರಿಂದ ನಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಂಡಂತೆ. ಆದ್ದರಿಂದ ಉತ್ತಮ ಸಮತೋಲಿತ ಆಹಾರ ಮತ್ತು ವ್ಯಾಯಾಮದ ಮೂಲಕ ಮೆದುಳಿನ ಆರೋಗ್ಯವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇದನ್ನು ಗಮನಿಸಿ ವಿಶ್ವ ಆರೋಗ್ಯ ಸಂಸ್ಥೆಯು ಮೆದುಳಿನ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಪ್ರತೀ ವರ್ಷ ಜುಲೈ 22ರಂದು ಮೆದುಳು ದಿನವನ್ನಾಗಿ ಆಚರಿಸುತ್ತದೆ ಎಂದು ಹೇಳಿದರು.
ಗೌರವ ಅತಿಥಿಗಳಾಗಿ ಮಾತನಾಡಿದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ ಶೆಟ್ಟಿ, ಮೆದುಳಿನ ಕಾಯಿಲೆಗೆ ಸಂಬಂಧಿಸಿದ ಎಲ್ಲಾ ಕಾಯಿಲೆಗಳಿಗೆ ಇಂದು ಚಿಕಿತ್ಸೆ ಲಭ್ಯವಿದೆ , ಆದರೆ ಅದು ಬೇಗ ಪತ್ತೆಹಚ್ಚಿ ಸಕಾಲದಲ್ಲಿ ದೊರೆಯಬೇಕು. ಮೆದುಳಿನ ಚಿಕಿತ್ಸೆಗೆ ಸಂಬಂದಿತ ಹೊಸ ತಂತ್ರಜ್ಞಾನಗಳು, ತಜ್ಞ ವೈದ್ಯರು, ವಿಶೇಷ ವಿಭಾಗಗಳು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಲಭ್ಯವಿದೆ. ಇದನ್ನು ಸಾರ್ವಜನಿಕರು ಸಕಾಲದಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.
ಮತ್ತೋರ್ವ ಗೌರವ ಅತಿಥಿ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ಮೆದುಳಿನ ಆರೋಗ್ಯದ ಕುರಿತಾದ ಭಿತ್ತಿಪತ್ರ (ಪೋಸ್ಟರ್) ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.
ಕಾರ್ಯಕ್ರಮದ ಕುರಿತು ಅವಲೋಕನ ನೀಡಿದ ನರರೋಗ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ. ಅಪರ್ಣಾ ಆರ್. ಪೈ ಮೆದುಳಿನ ದಿನದ ಜಾಗೃತಿ ಅಂಗವಾಗಿ ಆಸ್ಪತ್ರೆಯ ಫೇಸ್ಬುಕ್ ಜಾಲತಾಣದಲ್ಲಿ ಮೆದುಳು ಆರೋಗ್ಯದ ಕುರಿತು ಸರಣಿ ಮಾತು ಇಂದು ಬಿತ್ತರಗೊಳ್ಳೊತ್ತಿದೆ ಎಂದರು.
ನರರೋಗ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕ ಡಾ. ರಾಘವೇಂದ್ರ ನಾಯಕ ಈ ವರ್ಷದ ಘೋಷ ವಾಕ್ಯವಾದ, ಮೆದುಳಿನ ಆರೋಗ್ಯ ಮತ್ತು ಅಂಗವೈಕಲ್ಯದ ಕುರಿತು ವಿವರವಾದ ಅವಲೋಕನ ನೀಡಿದರು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶ್ರೀಪದ್ಮ ಪಿ.ವಿ. ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.