ಇಂದು ವಿಶ್ವ ಮಧುಮೇಹ ದಿನ: ಆತಂಕ ಹುಟ್ಟಿಸುತ್ತಿರುವ ಮಕ್ಕಳ ಮಧುಮೇಹ


Team Udayavani, Nov 14, 2022, 9:52 AM IST

World diabetes day: Type 1 diabetes in children

ಬೆಂಗಳೂರು: ದೇಶದಲ್ಲಿ 0-18ವರ್ಷ ದೊಳಗಿನ ಮಕ್ಕಳಲ್ಲಿ ಕಂಡು ಬರುವ ಟೈಪ್‌ -1 ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದುಕೊಂಡಿದೆ. ಒಂದು ಲಕ್ಷ ಮಕ್ಕಳಲ್ಲಿ ಸರಾಸರಿ 18 ಮಕ್ಕಳು ಟೈಪ್‌ -1 ಡಯಾಬಿಟಿಸ್‌ನಿಂದ ಬಾಧಿತರಾಗಿರುವುದು ಆತಂಕ ಮೂಡಿಸಿದೆ.

ಟೈಪ್‌ 1 ಮಧು ಮೇಹದಿಂದ ಬಳಲುತ್ತಿರುವ ರಾಜ್ಯವಾರು ಪಟ್ಟಿಯಲ್ಲಿ ತಮಿಳುನಾಡು ಪ್ರಥಮ, ಕರ್ನಾಟಕ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ರಾಜ್ಯ ಆರೋಗ್ಯ ಇಲಾಖೆ 2022ರ ವರದಿ ಅನ್ವಯ ಟೈಪ್‌ -1 ಡಯಾಬಿಟಿಸ್‌ನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 1,884 ಇದೆ. ಇದರ ಹೊರತಾಗಿಯೂ ಕೇವಲ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ಹಾಗೂ ಎಂಡೋಕ್ರೈನಾಲಜಿ ಸಂಶೋಧನಾ ಕೇಂದ್ರದಲ್ಲಿ ಪ್ರಸ್ತುತ 1750 ಮಕ್ಕಳು ಟೈಪ್‌-1 ಡಯಾಬಿಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯಾದ್ಯಂತ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಸರಿಸುಮಾರು 63,66 ಮಕ್ಕಳು ಸೇರಿ 10,000 ಮಕ್ಕಳು ಈ ಖಾಯಿಲೆಯಿಂದ ಬಳಲುತ್ತಿದ್ದಾರೆ.

78.32 ಲಕ್ಷ ಮಕ್ಕಳ ಪರೀಕ್ಷೆ: ರಾಜ್ಯ ಸರ್ಕಾರ ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಬಾಲ ಸ್ವಾಸ್ಥ ಕಾರ್ಯ ಕ್ರಮದಡಿಯಲ್ಲಿ ಅಂಗನವಾಡಿ, ಸರ್ಕಾರಿ ಹಾಗೂ ಖಾಸಗಿ ಶಾಲೆ, ಕಾಲೇಜುಗಳಲ್ಲಿನ 18ವರ್ಷದೊಳಗಿನ ಮಕ್ಕಳನ್ನು ಆರೋಗ್ಯ ನಂದನ ವಿಶೇಷ ತಪಾಸಣೆಯಡಿ 78.32 ಲಕ್ಷ ಮಕ್ಕಳನ್ನು ಟೈಪ್‌ -1 ಡಯಾಬಿಟಿಸ್‌ ಪರೀಕ್ಷೆಗೆ ಒಳಪಡಿಸಲಾಗಿದೆ.

ರಾಯಚೂರಿನಲ್ಲಿ ಅಧಿಕ: ರಾಜ್ಯದಲ್ಲಿ ಪತ್ತೆಯಾದ ಒಟ್ಟು ಡಯಾಬಿಟಿಸ್‌ ಪ್ರಕರಣಗಳಲ್ಲಿ ಶೇ. 75 ಪ್ರಕರಣಗಳು ರಾಯಚೂರು ಜಿಲ್ಲೆಯಲ್ಲಿ ವರದಿಯಾಗಿದೆ. ಇದಕ್ಕೆ ಅಪೌಷ್ಠಿಕತೆ ಕಾರಣ ಎನ್ನಲಾಗುತ್ತಿದೆ. ರಾಯಚೂರು 1,448, ದಾವಣಗೆರೆ 87, ಬಳ್ಳಾರಿ 46, ಬೆಳಗಾವಿ 33, ಚಿಕ್ಕಮಗಳೂರು 30, ಕಲಬುರಗಿ 23, ಬಾಗಲಕೋಟೆ, ಬಿಬಿಎಂಪಿಯಲ್ಲಿ 20 ಪ್ರಕರಣ ವರದಿಯಾಗಿದೆ. ಯಾದಗಿರಿ , ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾದ ಮಕ್ಕಳಲ್ಲಿ ಡಯಾಬಿಟಿಸ್‌ ಟೈಪ್‌-1 ವರದಿಯಾಗಿಲ್ಲ.

ಉಚಿತ ಚಿಕಿತ್ಸೆ: ತಾಲೂಕು ಮಟ್ಟದಲ್ಲಿ ಟೈಪ್‌-1 ಡಯಾ ಬಿಟಿಸ್‌ ಪತ್ತೆ ಹಚ್ಚಲು ಲ್ಯಾಬ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಡಯಾಬಿಟಿಸ್‌ ವರದಿಯಾದ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ಸುಲಿನ್‌, ಮಧುಮೇಹ ಸಂಬಂಧಿಸಿದ ಔಷಧಗಳನ್ನು ನೀಡಲಾಗುತ್ತಿದೆ. ಜತೆಗೆ ತಾಲೂಕು-ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲು ತ್ತಿರುವ ಮಕ್ಕಳಿಗೆ ಉಚಿತ ಔಷಧಗಳನ್ನು ವಿತರಿಸುವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.