ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಲು ಸರಕಾರದ ಒತ್ತಡ ಹೇರುವ ಅಗತ್ಯವಿದೆಯೇ

Team Udayavani, Feb 18, 2020, 5:04 PM IST

Udayavani Kannada Newspaper

ಮಣಿಪಾಲ: ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆಯೇ ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಉತ್ತರಗಳು ಇಲ್ಲಿವೆ.

ಮೋಹನ್ ದಾಸ್ ಕಿಣಿ: ಕಲಿಕಾ ಮಾಧ್ಯಮ ಯಾವುದೇ ಇರಲಿ, ಕನ್ನಡವನ್ನೊಂದು ವಿಷಯವಾಗಿ ಅಧ್ಯಯನ ಮಾಡುವುದನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯಗೊಳಿಸುವುದರ ಜತೆಗೆ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿದರೆ, ಖಾಸಗಿ ಶಾಲೆಗಳ ಸುಲಿಗೆಗೆ ಕಡಿವಾಣ ಹಾಕಬಹುದು ಮತ್ತು ಸರಕಾರಿ ಶಾಲೆಗಳನ್ನು ಸಮಾನಾಂತರವಾಗಿ ಬೆಳೆಸಬಹುದು. ಆಗ ಕನ್ನಡವೂ ಉಳಿಯುತ್ತದೆ, ಉನ್ನತ ಶಿಕ್ಷಣದಲ್ಲಿ ಆಂಗ್ಲ ಭಾಷೆಯ ಅಗತ್ಯತೆಯನ್ನೂ ಪೂರೈಸಿದಂತಾಗುತ್ತದೆ‌. ಆದರೆ ಇದಕ್ಕೆ ರಾಜಕೀಯ ಇಚ್ಛಾಶಕ್ತಿಯ ಅಗತ್ಯವಿದೆ.

ನರಸಿಂಹ ಮೂರ್ತಿ ಎಂಎನ್: ಮಾತೃಭಾಷೆಯಲ್ಲಿ ಶಿಕ್ಷಣ ಎಂದರೆ ನಮ್ಮ ಕನ್ನಡ ಭಾಷೆಯನ್ನು ಮಾತ್ರ ಓದಿಸಬೇಕಾ? ಎಂಬ ಪ್ರಶ್ನೆ ಮೂಡುತ್ತದೆ. ಕನ್ನಡ ಭಾಷೆಯೊಂದನ್ನೇ ಕಲಿಸಿ ಬೇರೆ ಭಾಷೆ ಬೇಡ ಎನ್ನುವುದಾದರೆ ನಮ್ಮ ಸಹಮತವಿದೆ. ಆದರೆ ಇಂಗ್ಲೀಷ್ ಭಾಷೆ ನಮ್ಮ ಗುಲಾಮಗಿರಿಯ ಸಂಕೇತವಾಗಿ ಕಲಿಯಲೇಬೇಕು ಎನ್ನುವುದಾದರೆ ಅದಕ್ಕೆ ನನ್ನ ವಿರೋಧವಿದೆ. ಕಾರಣ ಭಾರತದ ಭಾಷೆಗಳಾದ ಸಂಸ್ಕೃತ ಮತ್ತು ಹಿಂದಿ ಕಲಿಯಲು ನಾವು ಒಪ್ಪದೇ ಇದ್ದಾಗ ವಿದೇಶಿ ಭಾಷೆಗಳು ನಮಗೇಕೆ ಬೇಕು? ಒಂದು ವೇಳೆ ಇಂಗ್ಲಿಷ್ ಭಾಷೆಗೂ ಸ್ಥಾನ ಕೊಡುವುದಾದರೆ ಅದಕ್ಕೆ ತೃತೀಯ ಸ್ಥಾನ ನೀಡಬೇಕು. ನಮ್ಮ ನಾಡಭಾಷೆ, ದೇಶಭಾಷೆಗೆ ಆದ್ಯತೆ ನೀಡಿದ ನಂತರ ಪರಕೀಯ ಭಾಷೆಗೆ ಕಿಂಚಿತ್ತು ಸ್ಥಾನ ನೀಡಬಹುದು. ಭಾರತದ ಯಾವುದೇ ಭಾಷೆಯನ್ನು ನಮ್ಮ ಮಕ್ಕಳಿಗೆ ಕಲಿಸುವುದರಿಂದ ಯಾವುದೇ ನಷ್ಟವಿಲ್ಲ. ಅದರಿಂದ ಭಾರತೀಯತೆಯ ಅರಿವಾಗಿರುತ್ತದೆ. ಬೇರೆ ರಾಜ್ಯಗಳಲ್ಲಿ ಹಿಂದಿಯನ್ನು ಮತ್ತು ಭಾರತೀಯ ಇತರ ಭಾಷೆಗಳನ್ನು ಕಲಿಯುತ್ತಿಲ್ಲ, ಕನ್ನಡಿಗರು ಮಾತ್ರ ಕಲಿಯುತ್ತಿದ್ದಾರೆ ಎಂದರೆ ಅದು ನಮ್ಮ ಹಿರಿಮೆ, ಗರಿಮೆ, ಪ್ರಜ್ಞಾವಂತಿಕೆಯೇ ಹೊರತು ಕೀಳರಿಮೆಯಲ್ಲ. ಆದ್ದರಿಂದಲೇ ಇಡೀ ಭಾರತದಲ್ಲಿ ಅತಿ ಹೆಚ್ಚು ವಿಚಾರವಂತರು, ಬುದ್ಧಿವಂತರು, ಸಹೃದಯಿಗಳು ಇರುವ ನಾಡು ನಮ್ಮ ಹೆಮ್ಮೆಯ ಕನ್ನಡ ನಾಡು.
ಭಾರತ ಜನನಿಯ ತನುಜಾತೆ.
ಜಯಹೇ ಕರ್ನಾಟಕ ಮಾತೆ – ಕುವೆಂಪು.

ರಮೇಶ್ ತಿಂಗಳಾಯ: ಸರಕಾರವು ಬಂಡವಾಳ ಶಾಯಿಗಳ ಕಪಿ ಮುಷ್ಠಿಯಿಂದ ಒಮ್ಮೆ ಹೊರ ಬಂದು ಸರಕಾರಿ ಶಾಲೆಯನ್ನು ಸಮಪ೯ಕವಾಗಿ ಹೊಸ ಅವಿಸ್ಕಾರದೊಂದಿಗೆ ಪುನಸ್ಚೇತನಗೊಳಿಸಿ ಹೊಸತಾಂತ್ರಿಕತೆಯನ್ನು ಅಳವಡಿಸಿ ಶಿಕ್ಷಕರಿಗೆ ಬೇರೆ ಯಾವುದೆ ಜವಬ್ದಾರಿ ಕೊಡದೆ ಶಿಕ್ಷಣದ ಜವಬ್ಧಾರಿಯನ್ನು ಮಾತ್ರ ಕೊಡಿ.ಆವಾಗ ಮಾತ್ರಭಾಷೆ ತನ್ನಿಂತಾನೆ ಕಾಯ೯ರೂಪಕ್ಕೆ ಬರುತ್ತದೆ.ಇದು ಅಗತ್ಯ ಕೂಡ.ಈ ಬಗ್ಗೆ ಮಾಧ್ಯಮ ಸೂಕ್ತ ವರದಿ ಪ್ರಕಟಿಸುತ್ತ ಬರಲಿ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.