ರೇಷ್ಮೆ ಜತೆ ದೀಪಾವಳಿ: ಉದಯವಾಣಿ ಓದುಗರಿಗೆ ಸ್ಪರ್ಧೆ
Team Udayavani, Oct 26, 2019, 6:00 AM IST
ಮಣಿಪಾಲ: ರೇಷ್ಮೆ ಸೀರೆ- ಉಡುಗೆಗಳನ್ನು ಈ ದೀಪಾ ವಳಿಯಲ್ಲಿ ತೊಟ್ಟು ಸಂಭ್ರಮಿಸುವು ದಷ್ಟೇ ಅಲ್ಲ; ಅವುಗಳ ಉತ್ತಮ ಫೋಟೋಗಳನ್ನು ಕಳುಹಿಸಿ ಬಹುಮಾನವನ್ನೂ ಗೆಲ್ಲಲು ಅವಕಾಶವಿದೆ.
ರೇಷ್ಮೆ ಎಷ್ಟು ಮೋಹಕವೋ ಅಷ್ಟೇ ಪವಿತ್ರವೂ ಹೌದು. ಸುಂದರ ರೇಷ್ಮೆಯ ಉಡುಗೆಗಳೊಂದಿಗೆ ಹಬ್ಬ ಆಚರಣೆಯ ಸಂಭ್ರಮವೇ ನೋಡಲು ಬಲು ಅಂದ. ಹಾಗಾಗಿಯೇ ಸುವರ್ಣ ಸಂಭ್ರಮದಲ್ಲಿರುವ ಕರಾವಳಿ ಕರ್ನಾಟಕದ ಜನಮನದ ಜೀವನಾಡಿ ಉದಯವಾಣಿ, ಮಣಿಪಾಲ ತನ್ನ ಮಹಿಳಾ ಓದುಗರಿಗೆ ಮಂಗಳೂರಿನ ಜವುಳಿ ಮಳಿಗೆ ಎಂ. ಸಂಜೀವ ಶೆಟ್ಟಿ ಸಿಲ್ಕ್ಸ್ ಆ್ಯಂಡ್ ಸಾರೀಸ್ ಅವರ ಸಹಭಾಗಿತ್ವದಲ್ಲಿ “ರೇಷ್ಮೆ ಜತೆ ದೀಪಾವಳಿ’ ಸ್ಪರ್ಧೆಯನ್ನು ಆಯೋಜಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಮಹಿಳೆಯರು ಇದರಲ್ಲಿ ಪಾಲ್ಗೊಳ್ಳಬಹುದು. ಸಾಂಪ್ರದಾಯಿಕ ರೇಷ್ಮೆಯ ಪ್ರತಿಷ್ಠಿತ ಸ್ಥಾನವನ್ನು ಮತ್ತಷ್ಟು ಔನ್ನತ್ಯಕ್ಕೇರಿಸಲು ಹಾಗೂ ಆ ಮೂಲಕ ಮತ್ತೆ ಸಾಂಪ್ರದಾಯಿಕತೆಗೆ ಒತ್ತು. ನೀಡುವುದು ಈ ಸ್ಪರ್ಧೆಯ ಉದ್ದೇಶ. ಮಹಿಳೆಯರು ರೇಷ್ಮೆ ಸೀರೆಯೊಂದಿಗೆ ಆಚರಿಸುತ್ತಿರುವ ದೀಪಾವಳಿಯ ವಿಶಿಷ್ಟ ಫೋಟೋಗಳನ್ನು ನಮಗೆ ಕಳುಹಿಸಿಕೊಡಬೇಕು. ಅಮ್ಮ ಮಗಳು, ಅತ್ತೆ ಸೊಸೆ, ಅಕ್ಕ ತಂಗಿ, ಗೆಳತಿಯರು ಹೀಗೆ ಒಟ್ಟಾಗಿ ಆಚರಿಸುವ ಫೋಟೋಗಳನ್ನು ಕಳುಹಿಸಬಹುದು.
ಉತ್ತಮ ರೆಸೊಲ್ಯೂಶನ್ ಹೊಂದಿರುವ, ಕಲಾತ್ಮಕವಾಗಿರುವ, ನೈಜತೆಯಿಂದ ಕೂಡಿರುವ ಫೋಟೋಗಳಿಗೆ ಹೆಚ್ಚಿನ ಪ್ರಾಶಸ್ತ್ಯ. ಫೋಟೋಗಳನ್ನು ಕಳುಹಿಸಲು ಕೊನೆಯ ದಿನಾಂಕ ಅಕ್ಟೋಬರ್ 30. ವಿಜೇತ ಫೋಟೋಗಳನ್ನು ಉದಯವಾಣಿ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು. ಫೋಟೋ ಗಳನ್ನು ಇ-ಮೇಲ್ ವಿಳಾಸ [email protected], ವಾಟ್ಸ್‌ಆ್ಯಪ್ ಸಂಖ್ಯೆ 8095192817ಗೆ ಕಳುಹಿಸಿಕೊಡಿ.
ಉತ್ತಮ ಫೋಟೋಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಪ್ರಥಮ ಬಹುಮಾನ 25 ಸಾವಿರ ರೂ. ಬೆಲೆಯ ರೇಷ್ಮೆ ಸೀರೆ, ದ್ವಿತೀಯ ಬಹುಮಾನ 15 ಸಾವಿರ ರೂ. ಮೌಲ್ಯದ ರೇಷ್ಮೆ ಸೀರೆ, ತೃತೀಯ ಬಹುಮಾನ 10 ಸಾವಿರ ರೂ. ಮೌಲ್ಯದ ರೇಷ್ಮೆ ಸೀರೆ ಹಾಗೂ 8 ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು.
ದೀಪಾವಳಿಯ ಸಂಭ್ರಮವನ್ನು ಮತ್ತಷ್ಟು ಸಂಭ್ರಮಿಸಲು ಉದಯವಾಣಿ ವೇದಿಕೆ ಕಲ್ಪಿಸಿದ್ದು, ಇದೊಂದು ಸದವಕಾಶ. ಬನ್ನಿ ದೀಪಾವಳಿಯನ್ನು ರೇಷ್ಮೆಯೊಂದಿಗೆ ಸಂಭ್ರಮಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.