ಮಡಿಕೇರಿ ದಸರಾದ “ದಶ ಮಂಟಪ ವೈಭವ”


Team Udayavani, Sep 28, 2019, 12:43 PM IST

dashamantapa

ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾಗಿರುವುದೇ ದಶಮಂಟಪಗಳು. ಒಂದೊಂದು ಪೌರಾಣಿಕ ಕಥಾವಸ್ತುಗಳನ್ನು ಆಯ್ದುಕೊಂಡು, ಅದಕ್ಕೆ ನೂತನ ತಂತ್ರಜ್ಞಾನ ಅಳವಡಿಸಿ ಚಲನೆ, ಬೆಳಕಿನ ವಿನ್ಯಾಸ,  ಶಬ್ದದ ಚಮತ್ಕಾರದೊಂದಿಗೆ ನೂರಾರು ಮಂದಿಯ ಕೈಚಳಕದಲ್ಲಿ ಅದ್ಭುತವಾಗಿ ಮಂಟಪ ಮೂಡಿಬರುತ್ತದೆ. ದಶಮಂಟಪಗಳ ಪ್ರದರ್ಶನ ನಡೆಯುವುದೇ ದಾನಿಗಳ ಹಣದಲ್ಲಿ ಮತ್ತು ಸರ್ಕಾರ ನೀಡಿದ ಹಣದಲ್ಲಿ. ಇದಕ್ಕೆ ಒಂದೊಂದು ಮಂಟಪ ಸಮಿತಿಯವರು ತಲಾ 20 ರಿಂದ 30 ಲಕ್ಷ ರೂ.ಗಳಿಗೂ ಹೆಚ್ಚು ವೆಚ್ಚ ಮಾಡುತ್ತಾರೆ. ಈ ಅದ್ಭುತ ಪ್ರದರ್ಶನ ವೀಕ್ಷಿಸಲು ಜನಸಾಗರವೇ ಹರಿದುಬರುತ್ತದೆ.

ದಸರಾ ಮಂಟಪಗಳಿಗೆ ಮೂರು ಬಹುಮಾನಗಳನ್ನು ನಿಗದಿ ಮಾಡಲಾಗಿರುತ್ತದೆ. ಬಹುಮಾನ ಪಡೆಯಲು ಮಂಟಪಗಳ ಪೂರ್ವತಯಾರಿ ಯೋಜನೆಗಳು ಹಲವಾರು ತಿಂಗಳಿನಿಂದ ನಡೆಯುತ್ತದೆ. ವಿಜಯದಶಮಿಯ ರಾತ್ರಿ ಪೂಜಾ  ವಿಧಿವಿಧಾನಗಳನ್ನು ಮುಗಿಸಿ 11 ಗಂಟೆಯಿಂದ ಆರಂಭಗೊಳ್ಳುವ ದಶಮಂಟಪಗಳ ಪ್ರದರ್ಶನ ನಗರದ ಹಲವೆಡೆ ಮುಂಜಾನೆವರೆಗೂ ಸಂಚರಿಸಿ ಪ್ರದರ್ಶನ ನೀಡಲಿವೆ. ಪೌರಾಣಿಕ ಹಿನ್ನೆಲೆಯ ಕತೆಯನ್ನು ಪ್ರದರ್ಶನ ಮಾಡಲು ನಾಲ್ಕು ಶಕ್ತಿದೇವತೆಗಳ ದೇವಾಲಯ ಸಮಿತಿ ಸೇರಿದಂತೆ 10 ದೇವಾಲಯಗಳೂ ಕೂಡ ಒಂದೊಂದು ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರದರ್ಶನ ನೀಡುತ್ತವೆ. ಪೌರಾಣಿಕವಾಗಿ ಶ್ರೀರಾಮಪಟ್ಟಾಭಿಷೇಕ, ಗಣಪತಿಯಿಂದ ಚೌತಿ ಚಂದ್ರನ ಗರ್ವಭಂಗ, ಮತ್ಸ್ಯಅವತಾರ, ಗಜೇಂದ್ರಮೋಕ್ಷ, ಮಹಿಷಾಸುರಮರ್ಧಿನಿ, ನರಸಿಂಹ ಅವತಾರ ಇತ್ಯಾದಿ ಹಲವಾರು ಪುರಾಣಕಥೆಗಳನ್ನು ಅಳವಡಿಸಿಕೊಂಡು ದಶಮಂಟಪಗಳು ಜನರನ್ನು ಆಕರ್ಷಿಸುತ್ತದೆ.

ದಶಮಂಟಪಗಳು

ಶ್ರೀ ಪೇಟೆ ರಾಮಮಂದಿರ ದಸರಾ ಸಮಿತಿ. ದೇಚೂರು ಶ್ರೀರಾಮ ಮಂದಿರ ದಸರಾ ಸಮಿತಿ, ಶ್ರೀ ದಂಡಿನ ಮಾರಿಯಮ್ಮ ದಸರಾ ಸಮಿತಿ. ಶ್ರೀ ಚೌಡೇಶ್ವರಿ ಬಾಲಕ ಭಕ್ತಮಂಡಳಿ ದಸರಾ ಸಮಿತಿ, ಶ್ರೀ ಕಂಚಿಕಾಮಾಕ್ಷಿ ಮತ್ತು ಮುತ್ತು ಮಾರಿಯಮ್ಮ ಬಾಲಕ ಮಂಡಳಿ ದಸರಾ ಸಮಿತಿ, ಶ್ರೀಕುಂದುರುಮೊಟ್ಟೆ ಚೌಟಿಮಾರಿಯಮ್ಮ ದಸರಾ ಸಮಿತಿ. ಶ್ರೀ ಕೋದಂಡ ರಾಮ ದಸರಾ ಸಮಿತಿ. ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರಮಂಡಳಿ ದಸರಾ ಸಮಿತಿ. ಶ್ರೀ ಕೋಟೆ ಗಣಪತಿ ದಸರಾ ಸಮಿತಿ ಹಾಗೂ ಶ್ರೀ ಕರವಲೆ ಭಗವತಿ ದಸರಾ ಉತ್ಸವ ಸಮಿತಿ.

ವಿಶ್ವ ವಿಖ್ಯಾತ ಮೈಸೂರಿನ ದಸರಾ ಉತ್ಸವದ ಜಂಬೂಸವಾರಿಯ ಮೆರವಣಿಗೆಯನ್ನು ನೋಡಿದ ನಂತರ ಜನ ಪ್ರವಾಹದಂತೆ ಮೈಸೂರಿನಿಂದ 120 ಕಿ. ಮಿ. ದೂರದಲ್ಲಿರುವ ಮಡಿಕೇರಿ ದಸರಾ ವೀಕ್ಷಿಸಲು ಬರುತ್ತಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಆರ್. ಗುಂಡೂರಾವ್  ರವರು ಮಡಿಕೇರಿ ದಸರಾ ಉತ್ಸವಕ್ಕೆ 1980ರಲ್ಲಿ ಕರ್ನಾಟಕ ಸರ್ಕಾರದಿಂದ ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ನೀಡುವಂತೆ ವ್ಯವಸ್ಥೆ ಮಾಡಿದರು. ನಂತರ ವರ್ಷದಲ್ಲಿ ಸಹಾಯ ಧನವನ್ನು ಹೆಚ್ಚಿಸುತ್ತಾ ಬರಲಾಗುತ್ತಿದೆ. ಒಂದು ಮಂಟಪ ನಿರ್ಮಾಣ ಮಾಡಲು 2–3 ತಿಂಗಳಿನಿಂದ ಪೂರ್ವತಯಾರಿ ನಡೆಯುತ್ತದೆ. ವಿವಿಧ ವಿನ್ಯಾಸದ ಮಂಟಪಗಳಲ್ಲಿ ವಿವಿಧ ಭಂಗಿಗಳಲ್ಲಿ ವಿವಿಧ ಕಥಾಪ್ರಸಂಗಗಳ ದೇವತಾಮೂರ್ತಿಗಳು 8 ರಿಂದ 15 ಅಡಿಗಳವರೆಗೆ ಇರುತ್ತದೆ.

ಧ್ವನಿ ಬೆಳಕಿನ ವ್ಯವಸ್ಥೆಯೊಂದಿಗೆ, ತಾಂತ್ರಿಕವಾಗಿ ಮಂಟಪಗಳು ಬಹಳ ಆಕರ್ಷಣೀಯವಾಗಿರುತ್ತದೆ. ಕೃತಕಮೋಡಗಳು, ಜಲಪಾತಗಳು, ಧೂಮಸೃಷ್ಟಿಗಳು ಒಂದನ್ನೊಂದು ಮೀರಿಸುವಂತಿರುತ್ತದೆ. ಅದರ ಜೊತೆಗೆ ವಿದ್ಯುತ್ ದೀಪಾಲಂಕಾರದ ಬೃಹತ್ ಸೆಟ್ಟಿಂಗ್ಸ್ ಗಳು,  ಬೆಂಗಳೂರು, ಮಂಗಳೂರು, ತಮಿಳುನಾಡಿನ ದಿಂಡಿಗಲ್, ಚೆನ್ನೈನ ಸಿನೆಮಾ ಸ್ಟುಡಿಯೋಗಳಿಂದ ಬರುತ್ತದೆ. ಮಂಟಪಗಳ ಮುಂದೆ ಚೆಂಡೆವಾದ್ಯಗಳು, ತಂಜಾವೂರಿನಿಂದ ಕೀಲುಕುದುರೆ, ಮೈಸೂರು ಪ್ಯಾಲೆಸ್ ಬ್ಯಾಂಡ್, ಕೇರಳದ ತ್ರಿಶೂರಿನಿಂದ ಬೆಂಕಿಯೊಂದಿಗೆ ಸರಸವಾಡುತ್ತ ನುಡಿಸುವ ಗರಡಿ ಬ್ಯಾಂಡ್ ಗಳು ಉತ್ಸವದ ಮೆರಗನ್ನು ಇನ್ನಷ್ಟು ಹೆಚ್ಚಿಸುತ್ತದೆ.

ವೈಭವೋಪೇತ ಮೆರವಣಿಗೆಯಲ್ಲಿ ಡಿಜೆ ಕೂಡ ಇರುವುದರಿಂದ ಸಾವಿರಾರು ಯುವಕರು ರಾತ್ರಿಯಿಂದ ಬೆಳಗಿನವರೆಗೆ ಮೆರವಣಿಗೆಯ ಜೊತೆಗೆ ಕುಣಿದು ಕುಪ್ಪಳಿಸಿ ಆನಂದಿಸುತ್ತಾರೆ. ಮತ್ತೊಂದು ಪ್ರುಮುಖ ಆಕರ್ಷಣೆ ಎಂದರೇ ನಗರದ ಬೀದಿ ಬೀದಿಗಳನ್ನು ಶೃಂಗಾರ ಮಾಡಲಾಗಿರುತ್ತದೆ. ಪ್ರತಿಯೊಂದು ಅಂಗಡಿ-ಮುಂಗಟ್ಟುಗಳಲ್ಲಿ, ಮನೆಗಳಲ್ಲಿ ಸಣ್ಣಸಣ್ಣ ದೇವಾತಾ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿರುತ್ತದೆ. ಅತ್ಯಂತ ಹೆಚ್ಚು ಜನಾಕರ್ಷಣೆ ಪಡೆದ ಮೂರ್ತಿಗಳಿಗೆ ಬಹುಮಾನವೂ ನಿಗದಿಯಾಗಿರುತ್ತದೆ.

ದಸರಾ ಉತ್ಸವದ ಸಂದರ್ಭದಲ್ಲಿ ದಸರಾ ಕ್ರೀಡಾಕೂಟ, ಕವಿಗೋಷ್ಠಿ, ಸಂಗೀತ, ನೃತ್ಯೋತ್ಸವ, ಮಕ್ಕಳ ದಸರಾ ,ಮಹಿಳಾ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳು ಮೊದಲ ಏಳು ದಿವಸ ಮಡಿಕೇರಿ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದರೆ, ಉಳಿದ ಮೂರು ದಿನಗಳ ಕಾರ್ಯಕ್ರಮ ರಾಜಾಸೀಟ್ ಬಳಿ ಇರುವ ಗಾಂಧಿ ಮಂಟಪ ಮೈದಾನದಲ್ಲಿರುವ ಬಯಲು ರಂಗಮಂದಿರದಲ್ಲಿ ನಡೆಯುತ್ತದೆ. ವಿಜಯದಶಮಿಯ ದಿನ ರಾತ್ರಿಯಿಂದ ಬೆಳಗಿನವರೆಗೆ ರಸಮಂಜರಿ, ನೃತ್ಯ, ಸಂಗೀತ ಕಾರ್ಯಕ್ರಮಗಳು ನಡೆಯುವುದು. ಖ್ಯಾತನಟ-ನಟಿಯರು, ಸಂಗೀತಗಾರರು ಲಕ್ಷಾಂತರ ಮಂದಿಯನ್ನು ತಮ್ಮ ಹಾಡು, ನೃತ್ಯ ಮತ್ತುಇತರ ಮನರಂಜಾನ ಕಾರ್ಯಕ್ರಮಗಳ ಮೂಲಕ ರಂಜಿಸುತ್ತಾರೆ.

-ಸಂಗ್ರಹ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Z-LOGO-DASARA-2019

ದಸರಾ ಜನೋತ್ಸವ ವಾಹನ, ಕಟ್ಟಡಗಳ ಅಲಂಕಾರ: ಸಮಿತಿ ಮನವಿ

Z-MAKKALA-DASARA-1

ಮಡಿಕೇರಿ ದಸರಾ: ಗಮನ ಸೆಳೆದ ಮಕ್ಕಳ ಸಂತೆ, ಮಕ್ಕಳ ಮಂಟಪ

goni-koppalu

ಗೋಣಿಕೊಪ್ಪಲು :41ನೇ ದಸರಾ ಜನೋತ್ಸವ ಆಚರಣೆಗೆ ಚಾಲನೆ

MADIKERI-DAS

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ

Z-DASARA-PRESS-1

ಐತಿಹಾಸಿಕ ದಸರಾ ಮಹೋತ್ಸವಕ್ಕೆ ಮಡಿಕೇರಿ ಸಜ್ಜು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.