ಅಂಬೇಡ್ಕರ್ ಗೌರವಾರ್ಥ ಪಂಚತೀರ್ಥ ಯೋಜನೆ : ಸಂಸದ ನಳಿನ್ ಕುಮಾರ್ ಕಟೀಲ್
ambedkar
Team Udayavani, Apr 14, 2019, 3:47 PM IST
ಮಂಗಳೂರು: ಈ ದೇಶದ ಉದ್ದಾರಕ್ಕಾಗಿ ಅವಿರತ ಶ್ರಮಿಸಿದ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಸ್ಮರಿಸುವ ಮಹತ್ತರ ಪಂಚತೀರ್ಥ ಯೋಜನೆಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಮ್ಮಿಕೊಂಡಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ಚುನಾವಣಾ ಕಚೇರಿಯಲ್ಲಿ ಭಾನುವಾರ ಡಾ. ಬಿ. ಆರ್. ಅಂಬೇಡ್ಕರ್ ಅವರು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ದೇಶಕ್ಕಾಗಿ ತ್ಯಾಗ ಮಾಡಿದ ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಹಿಂದಿನ ಯಾವುದೇ ಸರಕಾರಗಳು ಮಾಡಿಲ್ಲ. ಅವರ ಜನ್ಮಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವಾಗಿದೆ. ಅವರ ಅಂತ್ಯಸಂಸ್ಕಾರ ನಡೆದ ಮುಂಬೈಯಲ್ಲಿ ಬೃಹತ್ ರೀತಿಯ ಸ್ಮಾರಕ ನಿರ್ಮಾಣವಾಗಲಿದೆ. ಡೆಲ್ಲಿಯಲ್ಲಿ ಕೂಡ ಡಾ. ಬಿ. ಆರ್ ಅಂಬೇಡ್ಕರ್ ಅವರ ಸ್ಮಾರಕ ನಿರ್ಮಾಣ, ಲಂಡನ್ ಓದುವ ಸಂದರ್ಭ ಡಾ. ಬಿ. ಆರ್. ಅಂಬೇಡ್ಕರ್ ಅವರು ವಾಸ ಮಾಡುತ್ತಿದ್ದ ಸ್ಥಳವನ್ನು ಮಾರಾಟವಾಗುವ ವಿಷಯ ಮೋದಿಯವರಿಗೆ ಗಮನಕ್ಕೆ ಬಂದ ತಕ್ಷಣ ಮಹಾರಾಷ್ಟ್ರ ಸರಕಾರದೊಂದಿಗೆ ಸೇರಿ ಲಂಡನ್‍ನಲ್ಲಿ ಅವರ ವಾಸದ ಸ್ಥಳವನ್ನು ಸ್ಮರಣೀಯ ಸ್ಥಳವನ್ನಾಗಿ ಮಾರ್ಪಡು ಮಾಡಲಾಗಿದೆ. ದೇಶ-ವಿದೇಶದ ಪ್ರವಾಸಿಗರು ಅಂಬೇಡ್ಕರ್ ಅವರು ಓದು ನಡೆಸುತ್ತಿದ್ದ ಈ ವಾಸ ಸ್ಥಳವನ್ನು ಆಕರ್ಷಣೀಯವಾಗಿ ಅಭಿವೃದ್ಧಿ ಪಡಿಸಲಾಗಿದೆ. ಹೀಗೆ ಅಂಬೇಡ್ಕರ್ ಅವರ ನೆನಪಿಗಾಗಿ ಪಂಚತೀರ್ಥ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನನ್ನ ಸಂಸದರ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಸ್‍ಎ,ಎಸ್‍ಟಿಯವರ ಅಭಿವೃದ್ಧಿಗಾಗಿ 5.94ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ನಾಲ್ಕು ಅಂಬೇಡ್ಕರ್ ಭವನಗಳು, ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ. ಹೀಗೆ ಸಂಸದರ ಪ್ರದೇಶ ಅಭಿವೃದ್ದಿ ಯೋಜನೆಯಲ್ಲಿ ದಲಿತ ಸಮಗ್ರ ಅಭಿವೃದ್ದಿಗಾಗಿ ವಿವಿಧ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಈ ಸಂದರ್ಭ ಬಿಜೆಪಿ ಮುಖಂಡರಾದಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಹರಿಕೃಷ್ಣ ಬಂಟ್ವಾಳ್ , ಜಗಧೀಶ್ ಶೇಣವ , ಅನ್ವರ್ ಮಾನಿಪ್ಪಾಡಿ, ವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಹ ಸಂಚಾಲಕ ಡಾ|| ಅಣ್ಣಯ್ಯ ಕುಲಾಲ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.