“ಮೋದಿ ಸಭೆಗೆ ಪುತ್ತೂರಿನಿಂದ 15 ಸಾವಿರ ಕಾರ್ಯಕರ್ತರು’
Team Udayavani, Apr 6, 2019, 4:07 PM IST
ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರು ಎ. 13ರಂದು ಮಂಗಳೂರಿಗೆ ಭೇಟಿ ನೀಡಿ ನಡೆಸಲಿರುವ ಚುನಾವಣ ಪ್ರಚಾರ ಸಭೆಗೆ ಪುತ್ತೂರಿನಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎ. 18ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರ ಪೂರ್ವಭಾವಿ ಕೆಲಸಗಳು ನಡೆಯುತ್ತಿವೆ. ಎಲ್ಲ 220 ಬೂತ್ ಗಳಲ್ಲಿ ಮೊದಲ ಸುತ್ತಿನ ಮನೆ ಮನೆ ಭೇಟಿ ಮೂಲಕ ಕೇಂದ್ರ ಸರಕಾರ ಮತ್ತು ಸಂಸದರ ಸಾಧನೆಗಳನ್ನು ತಿಳಿಸಿದ್ದೇವೆ. ಜನರಿಂದ ಉತ್ತರ ಪ್ರತಿಕ್ರಿಯೆ ಸಿಕ್ಕಿದ್ದು, ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಬೇಕೆಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.
ಸಂಸದ ಹಾಗೂ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ವಿಧಾನಸಭಾ ಕ್ಷೇತ್ರದ ಎಲ್ಲ ಕಡೆಗಳಲ್ಲಿ ಒಂದು ಸುತ್ತಿನ ಪ್ರಚಾರ ಸಭೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ 30-40 ಸಾವಿರ ಮತಗಳ ಮುನ್ನಡೆ ಲಭಿಸುವ ಭರವಸೆ ಇದೆ ಎಂದು ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.
ಪಾದಯಾತ್ರೆ
ಎ.15 ರಂದು ಬೆಳಗ್ಗೆ ಪುತ್ತೂರು ನಗರದಲ್ಲಿ ಬೊಳುವಾರಿನಿಂದ ದರ್ಬೆ ತನಕ ಅಭ್ಯರ್ಥಿ ನಳಿನ್ ಕುಮಾರ್ ಅವರು ಪಾದಯಾತ್ರೆ ಪ್ರಚಾರ ನಡೆಸಲಿದ್ದಾರೆ. ಶಾಸಕರು, ರಾಜ್ಯದ ಪ್ರಮುಖರು, ನೂರಾರು ಕಾರ್ಯಕರ್ತರು
ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಭಿನ್ನಮತವಿಲ್ಲ
ಎಸ್‌ಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ವಿರುದ್ಧವೇ ಮತಚಲಾವಣೆಯಾದ ಕುರಿತ ಪ್ರಶ್ನೆಗೆ ಉತ್ತರಿಸಿದ ಚನಿಲ ತಿಮ್ಮಪ್ಪ ಶೆಟ್ಟಿ, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಸಹಕಾರ ಕ್ಷೇತ್ರದ ಚುನಾವಣೆಗೆ ಸಂಬಂಧಪಟ್ಟಂತೆ ಆ ವಿಭಾಗದವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ
ಎಂದು ಉತ್ತರಿಸಿದರು.
ಉಡ್ಡಂಗಳ ಪ್ರಕರಣ
ಉಡ್ಡಂಗಳದಲ್ಲಿ ಮೂವರು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು ಹಾಗೂ ಪಕ್ಷದ ಮುಖಂಡರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಲ್ಲಿ ಮಾತನಾಡಿ ಸೂಕ್ತ ಪರಿಹಾರ ನೀಡುವಂತೆ ಮತ್ತು ಸಮರ್ಪಕ ತನಿಖೆಗೆ ಶಾಸಕರು ಸೂಚಿಸಿದ್ದಾರೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ್ ಜೈನ್, ತಾ.
ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಕಾರ್ಯದರ್ಶಿ ಶಂಭು ಭಟ್ ಹಾಗೂ ಗೌರಿ ಬನ್ನೂರು ಉಪಸ್ಥಿತರಿದ್ದರು.
ಮಹಾ ಅಭಿಯಾನ
ಎ. 7ರಂದು ವಿಧಾನಸಭಾ ಕ್ಷೇತ್ರದ ಎಲ್ಲ 220 ಬೂತ್‌ಗಳಲ್ಲಿ ಏಕಕಾಲದಲ್ಲಿ ಮಹಾ ಪ್ರಚಾರ ಅಭಿಯಾನ ನಡೆಯಲಿದೆ. ಶಾಸಕರು, ಮಂಡಲದ
ಪದಾಧಿಕಾರಿಗಳು, ವಿವಿಧ ಸಮಿತಿಗಳ ಪದಾಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಬೂತ್‌ಗೆ ಪ್ರಮುಖರನ್ನು ನೇಮಿಸಿದ್ದೇವೆ. ವಿಶೇಷ ಸಂಪರ್ಕದ ಮೂಲಕ ಪ್ರಚಾರ ನಡೆಯಲಿದೆ. ಎ. 14ರಂದು ತೃತೀಯ ಸುತ್ತಿನ ಮಹಾ ಅಭಿಯಾನ ನಡೆಯಲಿದೆ ಎಂದು ಮಾಹಿತಿ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.