2ನೇ ಹಂತ: ನಾಮಪತ್ರ ಶುರು ರಾಘವೇಂದ್ರ,ಅಂಗಡಿ, ವೀಣಾ ಉಮೇದುವಾರಿಕೆ
Team Udayavani, Mar 29, 2019, 6:04 AM IST
ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಕಾರ್ಯ ಗುರುವಾರ ಆರಂಭವಾಗಿದ್ದು, ಮೊದಲ ದಿನವೇ ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ಬೆಳಗಾವಿಯಲ್ಲಿ ಬಿಜೆಪಿ ಸಂಸದ ಸುರೇಶ್ ಅಂಗಡಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಾಗಲಕೋಟೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ವೀಣಾ ಕಾಶಪ್ಪನವರ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಎರಡನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಏ.23ರಂದು ಚುನಾವಣೆ ನಡೆಯಲಿದೆ. ಗುರುವಾರ 15 ಅಭ್ಯರ್ಥಿಗಳು 20 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿಶೇಷವೆಂದರೆ, ಕಲಬುರಗಿ,ರಾಯಚೂರು, ಬೀದರ್, ಧಾರವಾಡ ಕ್ಷೇತ್ರಗಳಿಂದ ಮೊದಲ ದಿನ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ. ಉಳಿದಂತೆ ಚಿಕ್ಕೋಡಿ, ಉತ್ತರ ಕನ್ನಡ, ದಾವಣಗೆರೆ, ಕ್ಷೇತ್ರಗಳಲ್ಲಿ ತಲಾ ಒಂದೊಂದು, ಬೆಳಗಾವಿ, ವಿಜಯಪುರ, ಹಾವೇರಿ, ಕೊಪ್ಪಳದಲ್ಲಿ ತಲಾ 2, ಶಿವಮೊಗ್ಗ, ಬಳ್ಳಾರಿ, ಬಾಗಲಕೋಟೆಯಲ್ಲಿ ತಲಾ 3 ನಾಮಪತ್ರಗಳು ಸಲ್ಲಿಕೆಯಾಗಿವೆ.
ತುಮಕೂರಿನಲ್ಲಿ ಆರದ ಬಂಡಾಯ
ತುಮಕೂರು ಕ್ಷೇತ್ರದಲ್ಲಿನ ಮೈತ್ರಿ ಬಂಡಾಯ ಇನ್ನೂ ಶಮನವಾಗಿಲ್ಲ. ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುವ ಮುದ್ದಮನುಮೇಗೌಡರು ಮತ್ತು ಕೆ.ಎನ್. ರಾಜಣ್ಣ ವಾಪಸ್ ಪಡೆಯಲು ನಿರಾಕರಿಸಿದ್ದಾರೆ. ನಾಮಪತ್ರ ವಾಪಸ್‌ಗೆ ಶುಕ್ರವಾರವೇ ಕಡೇ ದಿನವಾಗಿದ್ದು ಇವರಿಬ್ಬರ ಈ ನಡೆ ತೀವ್ರ ಕುತೂಹಲಕ್ಕೆಡೆ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಸಂಧಾನ ಮಾತುಕತೆಗೆ ಅವರು ಒಪ್ಪಿಲ್ಲ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲ್ಲ ಎಂದು ಮುದ್ದಹನುಮೇಗೌಡರು ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.