ರಾಜ್ಯದಲ್ಲಿ 2 ನೇ ಹಂತದ ಮತದಾನ ಆರಂಭ, ಹಲವೆಡೆ ಇವಿಎಂಗಳಲ್ಲಿ ದೋಷ
ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಹಕ್ಕು ಚಲಾವಣೆ
Team Udayavani, Apr 23, 2019, 7:55 AM IST
ಬೆಂಗಳೂರು : ದೇಶದಲ್ಲಿ 3 ನೇ ಹಂತ, ರಾಜ್ಯದಲ್ಲಿ 2 ನೇ ಹಂತದ ಲೋಕಸಭಾ ಚುನಾವಣಾ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ .
ಮತದಾರರು ಬೆಳ್ಳಂಬೆಳಗ್ಗೆ ಮತಗಟ್ಟೆಗಳಿಗೆ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಮತನಾನ ನಡೆಯುತ್ತಿದೆ. ಕೆಲವು ಮತಗಟ್ಟೆಗಳಲ್ಲಿ ಇವಿಎಂ ಗಳಲ್ಲಿ ದೋಷ ಕಂಡು ಬಂದ ಬಗ್ಗೆ ವರದಿಯಾಗಿದೆ.
ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್, ವಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು , ಘಟಾನುಘಟಿ ನಾಯಕರ ಭವಿಷ್ಯವನ್ನು ಮತದಾರರು ನಿರ್ಧಾರಿಸಲಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಕಣದಲ್ಲಿರುವ ಪ್ರಮುಖರು
ಮಲ್ಲಿಕಾರ್ಜುನ ಖರ್ಗೆ, ಅನಂತ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್, ಮಧು ಬಂಗಾರಪ್ಪ, ಬಿ.ವೈ. ರಾಘವೇಂದ್ರ, ವಿ.ಎಸ್.ಉಗ್ರಪ್ಪ , ಈಶ್ವರ್ ಖಂಡ್ರೆ, ಪ್ರಹ್ಲಾದ್ ಜೋಶಿ, ವಿನಯ ಕುಲಕರ್ಣಿ, ಸುರೇಶ್ ಅಂಗಡಿ, ಪ್ರಕಾಶ್ ಹುಕ್ಕೇರಿ, ಭಗವಂತ್ ರಾವ್ ಖೂಬಾ, ಗದ್ದಿ ಗೌಡರ್, ಕರಡಿ ಸಂಗಣ್ಣ ಸೇರಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.