ಕಳೆದ ಬಾರಿಗಿಂತ ಮತದಾನದಲ್ಲಿ ಅಲ್ಪ ಏರಿಕೆ


Team Udayavani, Apr 19, 2019, 11:09 AM IST

190418kpn72

ಬೆಂಗಳೂರು: “ದಕ್ಷಿಣಾರ್ಧ’ದಲ್ಲಿ ಮತದಾರ ರಾಜಕೀಯ ನೇತಾರರಿಗೆ ಅಷ್ಟೊಂದು “ದಾಕ್ಷಿಣ್ಯ’ ತೋರಿಲ್ಲ. ಗುರುವಾರ ಚುನಾವಣೆ ನಡೆದ ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ ಅಂದಾಜು ಶೇ. 67.67ರಷ್ಟು ಮತದಾನ ದಾಖಲಾಗಿದೆ.

ರಾಜಧಾನಿ ಬೆಂಗಳೂರಿನ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 11 ಕ್ಷೇತ್ರಗಳಲ್ಲಿ ಮತದಾನ ಪ್ರಮಾಣದಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡಿದೆ. ಮತದಾನ ನಡೆದ 14 ಕ್ಷೇತ್ರಗಳಲ್ಲಿ 2.67 ಕೋಟಿ ಮತದಾರರಿದ್ದು, ಆ ಪೈಕಿ ಅಂದಾಜು 1.80 ಕೋಟಿ ಮತದಾರರು ಮಾತ್ರ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ 11 ಕ್ಷೇತ್ರಗಳಲ್ಲಿ ಕಳೆದ ಬಾರಿಗಿಂತ ಮತದಾನ ಪ್ರಮಾಣ ಅಲ್ಪ ಮಟ್ಟದಲ್ಲಿ ಹೆಚ್ಚಾಗಿದ್ದರೆ, ಎಂದಿನಂತೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳು ಮತದಾನ ಪ್ರಮಾಣದಲ್ಲಿ ಹಿಂದೆ ಬಿದ್ದಿದ್ದು, ಕಳೆದ ಬಾರಿಗಿಂತ ಕಡಿಮೆ ಮತದಾನ ಆಗಿದೆ.

ಶೇ. 67.67 ಮತದಾನ ರಾತ್ರಿ 8 ಗಂಟೆವರೆಗಿನ ಮಾಹಿತಿ ಇದ್ದು, ಒಟ್ಟಾರೆ ಸರಾಸರಿ ಮತದಾನ ಪ್ರಮಾಣ ಶೇ.69ರಷ್ಟು ಆಗಲಿದ್ದು, ಬೇರೆ ಜಿಲ್ಲೆಗಳಿಂದ ಮಾಹಿತಿ ಕಲೆ ಹಾಕುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಮತದಾನ ಪ್ರಮಾಣ ಶೇ.70ರ ಗುರಿ ತಲುಪುವ ನೀರಿಕ್ಷೆಯಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳುತ್ತಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28
ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.67.20ರಷ್ಟು ಮತದಾನ ಆಗಿತ್ತು. ಇಡೀ ದೇಶದ ಗಮನ ಸೆಳೆದು ತೀವ್ರ ಹಣಾಹಣಿಯಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.79.98ರಷ್ಟು ಮತದಾನ ಆಗಿದೆ. ಅತಿ ಕಡಿಮೆ ಮತದಾನ ಶೇ.49.76 ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ದಾಖಲಾಗಿದ್ದು, 2014 ಲೋಕಸಭಾ ಚುನಾವಣೆಯಲ್ಲೂ ಇದೇ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 55.64 ಮತದಾನ ಆಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.77.15ರಷ್ಟು ಮತದಾನ ಆಗಿತ್ತು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಶೇ.56.53ರಷ್ಟು ಮತದಾನ ಆಗಿದ್ದರೆ, ಈ ಬಾರಿ ಶೇ.50.03 ಮತದಾನ ಆಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.55.64ರಷ್ಟು ಆಗಿದ್ದರೆ, ಈ ಬಾರಿ ಶೇ.49.76 ಮತ್ತು ಬೆಂಗಳೂರು ದಕ್ಷಿಣದಲ್ಲಿ ಈ ಬಾರಿ ಶೇ.53.53 ಮತದಾನ ಆಗಿದ್ದರೆ, ಕಳೆದ ಬಾರಿ ಶೇ. 55.75ರಷ್ಟು ಮತದಾನ ಆಗಿತ್ತು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.